Radhika Pandit: ವಿಶೇಷ ಕಾರಣಕ್ಕಾಗಿ ಫ್ಯಾಮಿಲಿ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

ನಟಿ ರಾಧಿಕಾ ಪಂಡಿತ್​ಗೆ ಇನ್​ಸ್ಟಾಗ್ರಾಮ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಫೋಟೋ ಹಂಚಿಕೊಳ್ಳಲಿ ಎಂದು ಸಾಕಷ್ಟು ಅಭಿಮಾನಿಗಳು ಕಾದು ಕೂತಿರುತ್ತಾರೆ. ಈ ಬಾರಿ ಅವರು ಪತಿ ಯಶ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಜತೆ ನಿಂತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

Radhika Pandit: ವಿಶೇಷ ಕಾರಣಕ್ಕಾಗಿ ಫ್ಯಾಮಿಲಿ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
ರಾಧಿಕಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jul 06, 2022 | 2:36 PM

ರಾಧಿಕಾ ಪಂಡಿತ್ (Radhika Pandit) ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಮದುವೆ ಬಳಿಕ ಅವರು ನಟಿಸಿದ್ದು ಕೇವಲ ಒಂದು ಸಿನಿಮಾದಲ್ಲಿ ಮಾತ್ರ. ನಟನೆಯಿಂದ ಅಂತರ ಕಾಯ್ದುಕೊಂಡರೂ ಅವರು ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ವಿಶೇಷ ಫೋಟೋಗಳನ್ನು ಹಂಚಿಕೊಂಡು ಫ್ಯಾಮಿಲಿ ಬಗ್ಗೆ ಅಪ್​ಡೇಟ್​ ನೀಡುತ್ತಾರೆ. ಈಗ ರಾಧಿಕಾ ಪಂಡಿತ್ ಅವರು ಒಂದು ವಿಶೇಷ ಕಾರಣಕ್ಕಾಗಿ ಇಡೀ ಕುಟುಂಬದ (Radhika Pandit Family) ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಲು ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ನಟಿ ರಾಧಿಕಾ ಪಂಡಿತ್​ಗೆ ಇನ್​ಸ್ಟಾಗ್ರಾಮ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಫೋಟೋ ಹಂಚಿಕೊಳ್ಳಲಿ ಎಂದು ಸಾಕಷ್ಟು ಅಭಿಮಾನಿಗಳು ಕಾದು ಕೂತಿರುತ್ತಾರೆ. ಕುಟುಂಬದಲ್ಲಿ ನಡೆಯುವ ಎಲ್ಲಾ ವಿಚಾರಗಳ ಬಗ್ಗೆ ಅವರು ಫ್ಯಾನ್ಸ್​ಗೆ ನಿರಂತರವಾಗಿ ಅಪ್​ಡೇಟ್ ನೀಡುತ್ತಾರೆ. ಮಕ್ಕಳ ತುಂಟಾಟ, ಹಬ್ಬದ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಈ ಬಾರಿ ಅವರು ಪತಿ ಯಶ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಜತೆ ನಿಂತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
Image
ಸಂಡೇ ಸ್ಪೆಷಲ್​; ಯಶ್ ಜತೆಗಿನ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
Image
Radhika Pandit: ನಾಚಿ ನೀರಾದ ರಾಧಿಕಾ ಪಂಡಿತ್; ವೈರಲ್ ಆಯ್ತು ಫೋಟೋ
Image
Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
Image
Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

ಈ ವಿಶೇಷ ಫೋಟೋ ಹಂಚಿಕೊಳ್ಳಲು ಕಾರಣವೂ ಇದೆ. ಇನ್​ಸ್ಟಾಗ್ರಾಮ್​​ನಲ್ಲಿ ರಾಧಿಕಾ ಪಂಡಿತ್ ಅವರು ಹಂಚಿಕೊಳ್ಳುತ್ತಿರುವ 500ನೇ ಫೋಟೋ ಇದು. ಈ ಕಾರಣಕ್ಕಾಗಿ ಅವರು ಫ್ಯಾಮಿಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ‘500ನೇ ಪೋಸ್ಟ್​ಗಾಗಿ ವಿಶೇಷ ಫೋಟೋ’ ಎಂದು ಅವರು ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್ ಫೋಟೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಈ ಪೋಸ್ಟ್​ಗೆ ಸುಮಾರು 3 ಲಕ್ಷ ಲೈಕ್ಸ್ ಬಂದಿದೆ. ಎರಡೂವರೆ ಸಾವಿರ ಜನರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ಈ ಫೋಟೋದಲ್ಲಿ ರಾಧಿಕಾ ಪಂಡಿತ್ ಹಾಗೂ ಯಥರ್ವ್​ ಅವರ ನಗು ಹೈಲೈಟ್ ಆಗಿದೆ. 2017ರಿಂದ ಇಲ್ಲಿಯವರೆಗೆ ರಾಧಿಕಾ ನಟಿಸಿದ್ದು ‘ಆದಿ ಲಕ್ಷ್ಮಿ ಪುರಾಣ’ ಸಿನಿಮಾದಲ್ಲಿ ಮಾತ್ರ. ಈ ಚಿತ್ರದಲ್ಲಿ ಅವರು ಲಕ್ಷ್ಮಿ ಹೆಸರಿನ ಪಾತ್ರ ಮಾಡಿದ್ದರು. ಈ ಸಿನಿಮಾ 2019ರಲ್ಲಿ ತೆರೆಗೆ ಬಂತು. ರಾಧಿಕಾ ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಈವರೆಗೆ ಅವರು ನಟನೆಗೆ ಕಂಬ್ಯಾಕ್ ಮಾಡುವ ಬಗ್ಗೆ ಸೂಚನೆ ನೀಡಿಲ್ಲ.

ಇದನ್ನೂ ಓದಿ: ಮುದ್ದಾದ ನಗು ಬೀರಿದ ಆಯ್ರಾ; ಇಲ್ಲಿದೆ ರಾಧಿಕಾ ಪಂಡಿತ್ ಹಂಚಿಕೊಂಡ ಹೊಸ ಫೋಟೋ

ರಾಧಿಕಾ ಪಂಡಿತ್ ತಂದೆ-ತಾಯಿಯ ಮದುವೆ ವಾರ್ಷಿಕೋತ್ಸವ; ಆಯ್ರಾ-ಯಥರ್ವ್​ ಜತೆ ಕೇಕ್ ಕತ್ತರಿಸಿದ ಕುಟುಂಬ

Published On - 2:32 pm, Wed, 6 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ