Radhika Pandit: ವಿಶೇಷ ಕಾರಣಕ್ಕಾಗಿ ಫ್ಯಾಮಿಲಿ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

| Updated By: ರಾಜೇಶ್ ದುಗ್ಗುಮನೆ

Updated on: Jul 06, 2022 | 2:36 PM

ನಟಿ ರಾಧಿಕಾ ಪಂಡಿತ್​ಗೆ ಇನ್​ಸ್ಟಾಗ್ರಾಮ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಫೋಟೋ ಹಂಚಿಕೊಳ್ಳಲಿ ಎಂದು ಸಾಕಷ್ಟು ಅಭಿಮಾನಿಗಳು ಕಾದು ಕೂತಿರುತ್ತಾರೆ. ಈ ಬಾರಿ ಅವರು ಪತಿ ಯಶ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಜತೆ ನಿಂತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

Radhika Pandit: ವಿಶೇಷ ಕಾರಣಕ್ಕಾಗಿ ಫ್ಯಾಮಿಲಿ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್
ರಾಧಿಕಾ
Follow us on

ರಾಧಿಕಾ ಪಂಡಿತ್ (Radhika Pandit) ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಮದುವೆ ಬಳಿಕ ಅವರು ನಟಿಸಿದ್ದು ಕೇವಲ ಒಂದು ಸಿನಿಮಾದಲ್ಲಿ ಮಾತ್ರ. ನಟನೆಯಿಂದ ಅಂತರ ಕಾಯ್ದುಕೊಂಡರೂ ಅವರು ಅಭಿಮಾನಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ವಿಶೇಷ ಫೋಟೋಗಳನ್ನು ಹಂಚಿಕೊಂಡು ಫ್ಯಾಮಿಲಿ ಬಗ್ಗೆ ಅಪ್​ಡೇಟ್​ ನೀಡುತ್ತಾರೆ. ಈಗ ರಾಧಿಕಾ ಪಂಡಿತ್ ಅವರು ಒಂದು ವಿಶೇಷ ಕಾರಣಕ್ಕಾಗಿ ಇಡೀ ಕುಟುಂಬದ (Radhika Pandit Family) ಜತೆಗಿನ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ಪೋಸ್ಟ್ ಮಾಡಲು ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ನಟಿ ರಾಧಿಕಾ ಪಂಡಿತ್​ಗೆ ಇನ್​ಸ್ಟಾಗ್ರಾಮ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಫೋಟೋ ಹಂಚಿಕೊಳ್ಳಲಿ ಎಂದು ಸಾಕಷ್ಟು ಅಭಿಮಾನಿಗಳು ಕಾದು ಕೂತಿರುತ್ತಾರೆ. ಕುಟುಂಬದಲ್ಲಿ ನಡೆಯುವ ಎಲ್ಲಾ ವಿಚಾರಗಳ ಬಗ್ಗೆ ಅವರು ಫ್ಯಾನ್ಸ್​ಗೆ ನಿರಂತರವಾಗಿ ಅಪ್​ಡೇಟ್ ನೀಡುತ್ತಾರೆ. ಮಕ್ಕಳ ತುಂಟಾಟ, ಹಬ್ಬದ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಈ ಬಾರಿ ಅವರು ಪತಿ ಯಶ್, ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಜತೆ ನಿಂತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ
ಸಂಡೇ ಸ್ಪೆಷಲ್​; ಯಶ್ ಜತೆಗಿನ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
Radhika Pandit: ನಾಚಿ ನೀರಾದ ರಾಧಿಕಾ ಪಂಡಿತ್; ವೈರಲ್ ಆಯ್ತು ಫೋಟೋ
Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

ಈ ವಿಶೇಷ ಫೋಟೋ ಹಂಚಿಕೊಳ್ಳಲು ಕಾರಣವೂ ಇದೆ. ಇನ್​ಸ್ಟಾಗ್ರಾಮ್​​ನಲ್ಲಿ ರಾಧಿಕಾ ಪಂಡಿತ್ ಅವರು ಹಂಚಿಕೊಳ್ಳುತ್ತಿರುವ 500ನೇ ಫೋಟೋ ಇದು. ಈ ಕಾರಣಕ್ಕಾಗಿ ಅವರು ಫ್ಯಾಮಿಲಿ ಫೋಟೋ ಪೋಸ್ಟ್ ಮಾಡಿದ್ದಾರೆ. ‘500ನೇ ಪೋಸ್ಟ್​ಗಾಗಿ ವಿಶೇಷ ಫೋಟೋ’ ಎಂದು ಅವರು ಬರೆದುಕೊಂಡಿದ್ದಾರೆ.

ರಾಧಿಕಾ ಪಂಡಿತ್ ಫೋಟೋ ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಈ ಪೋಸ್ಟ್​ಗೆ ಸುಮಾರು 3 ಲಕ್ಷ ಲೈಕ್ಸ್ ಬಂದಿದೆ. ಎರಡೂವರೆ ಸಾವಿರ ಜನರು ಈ ಫೋಟೋಗೆ ಕಮೆಂಟ್ ಮಾಡಿದ್ದಾರೆ. ಈ ಫೋಟೋದಲ್ಲಿ ರಾಧಿಕಾ ಪಂಡಿತ್ ಹಾಗೂ ಯಥರ್ವ್​ ಅವರ ನಗು ಹೈಲೈಟ್ ಆಗಿದೆ.
2017ರಿಂದ ಇಲ್ಲಿಯವರೆಗೆ ರಾಧಿಕಾ ನಟಿಸಿದ್ದು ‘ಆದಿ ಲಕ್ಷ್ಮಿ ಪುರಾಣ’ ಸಿನಿಮಾದಲ್ಲಿ ಮಾತ್ರ. ಈ ಚಿತ್ರದಲ್ಲಿ ಅವರು ಲಕ್ಷ್ಮಿ ಹೆಸರಿನ ಪಾತ್ರ ಮಾಡಿದ್ದರು. ಈ ಸಿನಿಮಾ 2019ರಲ್ಲಿ ತೆರೆಗೆ ಬಂತು. ರಾಧಿಕಾ ಸದ್ಯ ಕುಟುಂಬದ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಈವರೆಗೆ ಅವರು ನಟನೆಗೆ ಕಂಬ್ಯಾಕ್ ಮಾಡುವ ಬಗ್ಗೆ ಸೂಚನೆ ನೀಡಿಲ್ಲ.

ಇದನ್ನೂ ಓದಿ: ಮುದ್ದಾದ ನಗು ಬೀರಿದ ಆಯ್ರಾ; ಇಲ್ಲಿದೆ ರಾಧಿಕಾ ಪಂಡಿತ್ ಹಂಚಿಕೊಂಡ ಹೊಸ ಫೋಟೋ

ರಾಧಿಕಾ ಪಂಡಿತ್ ತಂದೆ-ತಾಯಿಯ ಮದುವೆ ವಾರ್ಷಿಕೋತ್ಸವ; ಆಯ್ರಾ-ಯಥರ್ವ್​ ಜತೆ ಕೇಕ್ ಕತ್ತರಿಸಿದ ಕುಟುಂಬ

Published On - 2:32 pm, Wed, 6 July 22