AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Radhika Pandit: ರಾಧಿಕಾ ಪಂಡಿತ್​ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರ ಆಗಬಹುದು; ಮೊದಲೇ ತಿಳಿಸಿದ ನಟಿ

Radhika Pandit Birthday: ರಾಧಿಕಾ ಪಂಡಿತ್​ ಅವರ ನಿರ್ಧಾರಕ್ಕೆ ಅಭಿಮಾನಿಗಳು ಬಗೆಬಗೆಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ರಾಧಿಕಾ ಎಲ್ಲಿಗೆ ತೆರಳುತ್ತಿದ್ದಾರೆ ಎಂಬುದು ಸದ್ಯಕ್ಕೆ ರಿವೀಲ್​ ಆಗಿಲ್ಲ.

Radhika Pandit: ರಾಧಿಕಾ ಪಂಡಿತ್​ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರ ಆಗಬಹುದು; ಮೊದಲೇ ತಿಳಿಸಿದ ನಟಿ
ರಾಧಿಕಾ ಪಂಡಿತ್
ಮದನ್​ ಕುಮಾರ್​
| Edited By: |

Updated on:Mar 07, 2023 | 10:08 AM

Share

ನಟಿ ರಾಧಿಕಾ ಪಂಡಿತ್​ (Radhika Pandit) ಅವರು ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಪ್ರತಿ ವರ್ಷ ಫ್ಯಾನ್ಸ್​ ಜೊತೆ ರಾಧಿಕಾ ಪಂಡಿತ್​ ಹುಟ್ಟುಹಬ್ಬ (Radhika Pandit Birthday) ಆಚರಿಸಿಕೊಳ್ಳುತ್ತಾರೆ. ಆದರೆ ಈ ವರ್ಷ ಅವರು ಮನೆಯಲ್ಲಿ ಇರುವುದಿಲ್ಲ. ಈ ವಿಚಾರವನ್ನು ಜನ್ಮದಿನಕ್ಕೂ ಒಂದು ದಿನ ಮುನ್ನ ಅವರು ತಿಳಿಸಿದ್ದಾರೆ. ಮಾರ್ಚ್​ 7ರಂದು ರಾಧಿಕಾ ಪಂಡಿತ್​ ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳು (Radhika Pandit Fans) ಅವರ ಮನೆ ಬಳಿ ಜಮಾಯಿಸುತ್ತಾರೆ. ಹಾಗಾಗಿ ಮುಂಚಿತವಾಗಿಯೇ ರಾಧಿಕಾ ಪಂಡಿತ್​ ಅವರು ಮಾಹಿತಿ ನೀಡಿದ್ದಾರೆ. ಈ ವರ್ಷ ಮನೆಯಿಂದ ದೂರ ತೆರಳಿ ಬರ್ತ್​ಡೇ ಆಚರಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ನಟನೆಯಿಂದ ರಾಧಿಕಾ ಪಂಡಿತ್​ ದೂರ ಉಳಿದುಕೊಂಡಿದ್ದಾರೆ. ಆದರೆ ಅವರು ಅಭಿಮಾನಿಗಳ ಸಂಪರ್ಕ ಕಡಿದುಕೊಂಡಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ದಿನಚರಿ ಬಗ್ಗೆ ಆಗಾಗ ಅಪ್​ಡೇಟ್​ ನೀಡುತ್ತಾರೆ. ಮಕ್ಕಳ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಹಾಗೆಯೇ ಅವರು ಈ ವರ್ಷದ ತಮ್ಮ ಬರ್ತ್​ಡೇ ಪ್ಲ್ಯಾನ್​ ಬಗ್ಗೆ ತಿಳಿಸಿದ್ದಾರೆ. ಇದರಿಂದ ಕೆಲವರಿಗೆ ಬೇಸರ ಆಗಿದೆ.

ಇದನ್ನೂ ಓದಿ
Image
Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​
Image
ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಿಂದ ದೂರ ಇದ್ದಿದ್ದೇಕೆ? ಕಾರಣ ತಿಳಿಸಿದ ಯಶ್ ಪತ್ನಿ
Image
‘ಅಪ್ಪನ ರಾಜಕುಮಾರಿ’; ತಂದೆಯೊಂದಿಗಿನ ಫೋಟೋ ಹಂಚಿಕೊಂಡು ವಿಶೇಷ ಸಾಲುಗಳನ್ನು ಬರೆದ ರಾಧಿಕಾ ಪಂಡಿತ್
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ

ಇದನ್ನೂ ಓದಿ: Radhika Pandit: ಸಂಬಂಧಿಯ ಮದುವೆಯಲ್ಲಿ ಮಿಂಚಿದ ರಾಧಿಕಾ ಪಂಡಿತ್, ಆಯ್ರಾ, ಯಥರ್ವ್​

‘ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ಬರ್ತ್​ಡೇ ಆಚರಿಸಿಕೊಳ್ಳಲಿದ್ದೇನೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ ಇದರಿಂದ ಬೇಸರ ಆಗಬಹುದು ಎಂಬುದು ನನಗೆ ತಿಳಿದಿದೆ. ಹಾಗಾಗಿ ಇಲ್ಲಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್​ ಮಾಡಿದ್ದೇನೆ. ಆ ಮೂಲಕ ನಿಮ್ಮ ಜೊತೆ ಸಂಪರ್ಕದಲ್ಲಿ ಇರಬಹುದು’ ಎಂದು ರಾಧಿಕಾ ಪಂಡಿತ್​ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಪ್ರೇಮಿಗಳ ದಿನ ಆಚರಿಸಿದ ಯಶ್​-ರಾಧಿಕಾ ಪಂಡಿತ್; ಪ್ರೈವೇಟ್​ ಜೆಟ್​ನಲ್ಲಿ ಪ್ರಯಾಣ

ರಾಧಿಕಾ ಪಂಡಿತ್​ ಹಂಚಿಕೊಂಡಿರುವ ಈ ಪೋಸ್ಟ್​ಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಮುಂಚಿತವಾಗಿ ಎಲ್ಲರೂ ಬರ್ತ್​ಡೇ ವಿಶ್​ ತಿಳಿಸುತ್ತಿದ್ದಾರೆ. ರಾಧಿಕಾ ಎಲ್ಲಿಗೆ ತೆರಳುತ್ತಿದ್ದಾರೆ ಎಂಬುದು ಸದ್ಯಕ್ಕೆ ರಿವೀಲ್​ ಆಗಿಲ್ಲ. ತಮ್ಮ ನೆಚ್ಚಿನ ನಟಿಯ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳು ಅನೇಕ ಕಡೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ.

ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಕನ್ನಡ ಚಿತ್ರರಂಗದಲ್ಲಿ ಕ್ಯೂಟ್​ ಕಪಲ್​ ಎನಿಸಿಕೊಂಡಿದ್ದಾರೆ. ಕಿರುತೆರೆಯಿಂದ ಒಟ್ಟಿಗೆ ಶುರುವಾದ ಅವರ ಜರ್ನಿ, ಸಿನಿಮಾಗಳಲ್ಲೂ ಮುಂದುವರಿಯಿತು. ಬಳಿಕ ರಿಯಲ್​ ಲೈಫ್​ನಲ್ಲಿಯೂ ಅವರಿಬ್ಬರು ಜೋಡಿಯಾದರು. ಈ ದಂಪತಿಗೆ ಆಯ್ರಾ ಮತ್ತು ಯಥರ್ವ್​ ಎಂಬ ಮಕ್ಕಳು ಇದ್ದಾರೆ. ಮಕ್ಕಳ ಆರೈಕೆಯಲ್ಲಿ ರಾಧಿಕಾ ಪಂಡಿತ್​ ಬ್ಯುಸಿ ಆಗಿದ್ದಾರೆ.

ರಾಧಿಕಾ ಪಂಡಿತ್​ ಅವರು ಮೊದಲಿನಂತೆಯೇ ನಟನೆಯಲ್ಲಿ ಆ್ಯಕ್ಟೀವ್​ ಆಗಬೇಕು ಎಂಬುದು ಅಭಿಮಾನಿಗಳ ಆಸೆ. ಆದಷ್ಟು ಬೇಗ ಅವರು ಹೊಸ ಚಿತ್ರ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:46 pm, Mon, 6 March 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More