‘ಅಪ್ಪನ ರಾಜಕುಮಾರಿ’; ತಂದೆಯೊಂದಿಗಿನ ಫೋಟೋ ಹಂಚಿಕೊಂಡು ವಿಶೇಷ ಸಾಲುಗಳನ್ನು ಬರೆದ ರಾಧಿಕಾ ಪಂಡಿತ್

Radhika Pandit: ರಾಧಿಕಾ ಪಂಡಿತ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದರು. ವೃತ್ತಿ ಜೀವನದಲ್ಲಿ ಬೆಳೆಯಲು ತಂದೆ-ತಾಯಿ ಬೆಂಬಲ ಕಾರಣ ಎಂದು ರಾಧಿಕಾ ಪಂಡಿತ್ ಅನೇಕ ಬಾರಿ ಹೇಳಿಕೊಂಡಿದ್ದಿದೆ.

‘ಅಪ್ಪನ ರಾಜಕುಮಾರಿ’; ತಂದೆಯೊಂದಿಗಿನ ಫೋಟೋ ಹಂಚಿಕೊಂಡು ವಿಶೇಷ ಸಾಲುಗಳನ್ನು ಬರೆದ ರಾಧಿಕಾ ಪಂಡಿತ್
ತಂದೆ ಜೊತೆ ರಾಧಿಕಾ ಪಂಡಿತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 17, 2023 | 7:09 AM

ನಟಿ ರಾಧಿಕಾ ಪಂಡಿತ್ (Radhika Pandit) ಅವರು ಸದ್ಯ ನಟನೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಹಾಗಂತ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿಲ್ಲ. ಪತಿ ಯಶ್​​​ ವೃತ್ತಿಜೀವನಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಅನೇಕ ಸಿನಿಮಾ ಕೆಲಸಗಳಿಗೆ ಅವರು ತೆರಳುತ್ತಾರೆ. ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರು ಹಲವು ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ತಂದೆ ಕೃಷ್ಣಪ್ರಸಾದ್ (Krishnaprasad Pandit) ಅವರ ಫೋಟೋನ ಹಂಚಿಕೊಂಡು ಬರ್ತ್​​ಡೇ ವಿಶ್ ಮಾಡಿದ್ದಾರೆ.

ರಾಧಿಕಾ ಪಂಡಿತ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದರು. ವೃತ್ತಿ ಜೀವನದಲ್ಲಿ ಬೆಳೆಯಲು ತಂದೆ-ತಾಯಿ ಬೆಂಬಲ ಕಾರಣ ಎಂದು ರಾಧಿಕಾ ಪಂಡಿತ್ ಅನೇಕ ಬಾರಿ ಹೇಳಿಕೊಂಡಿದ್ದಿದೆ. ಈಗ ರಾಧಿಕಾ ಪಂಡಿತ್ ಅವರು ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ವಿದೇಶದಲ್ಲಿ ತಂದೆಯನ್ನು ಹಗ್ ಮಾಡಿಕೊಂಡಿರುವ ಫೋಟೋವನ್ನು ರಾಧಿಕಾ ಹಂಚಿಕೊಂಡಿದ್ದಾರೆ. ‘ತಂದೆಯ ರಾಜಕುಮಾರಿ. ಯಾವಾಗಲೂ ತಂದೆಯ ಮಗಳು. ಹುಟ್ಟುಹಬ್ಬದ ಶುಭಾಶಯ ಅಪ್ಪ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಕೃಷ್ಣಪ್ರಸಾದ್​​ಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ.

ಇತ್ತೀಚೆಗೆ ಯಶ್ ಅವರು ಕುಟುಂಬ ಸಮೇತ ದುಬೈಗೆ ತೆರಳಿದ್ದರು. ಈ ವೇಳೆ ರಾಧಿಕಾ ಪಂಡಿತ್ ಜತೆ ಅವರ ತಂದೆ ತಾಯಿ ಕೂಡ ಇದ್ದರು. ಈಗ ಹಂಚಿಕೊಂಡಿರುವ ಫೋಟೋ ದುಬೈನಲ್ಲಿ ಕ್ಲಿಕ್ ಮಾಡಿಕೊಂಡಿದ್ದು ಎನ್ನಲಾಗಿದೆ. ಈ ಫೋಟೋನ ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ: Yash: ಸಡಗರದಿಂದ ಸಂಕ್ರಾಂತಿ ಆಚರಿಸಿದ ಯಶ್​ ಕುಟುಂಬ; ನಿರ್ಮಾಣ ಆಗುತ್ತಿದೆ ಹೊಸ ಮನೆ?

ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಇದೆ. ಈ ಬಗ್ಗೆ ಸದ್ಯಕ್ಕಂತೂ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಈ ಚಿತ್ರಕ್ಕೆ ಕೆವಿಎನ್ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ ಎನ್ನಲಾಗಿದೆ. ‘ಮಫ್ತಿ’ ಖ್ಯಾತಿಯ ನರ್ತನ್ ಅವರು ಯಶ್ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ರಾಧಿಕಾ ಪಂಡಿತ್ ಅವರು ಕುಟುಂಬದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ಮತ್ತ ನಟನೆಗೆ ಮರಳಲಿ ಎಂಬುದು ಫ್ಯಾನ್ಸ್ ಕೋರಿಕೆ. ಆದರೆ, ಅದು ಸದ್ಯಕ್ಕಂತೂ ಈಡೇರುವ ಲಕ್ಷಣ ಕಾಣುತ್ತಿಲ್ಲ. ಅವರ ಕಡೆಯಿಂದ ಶೀಘ್ರವೇ ಈ ಬಗ್ಗೆ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ