ನಟಿ ರಾಧಿಕಾ ಪಂಡಿತ್ (Radhika Pandit) ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಆದರೆ, ಅವರು ನಟನೆಯಿಂದ ದೂರ ಉಳಿದಿದ್ದಾರೆ. ಸಂಪೂರ್ಣ ಸಮಯವನ್ನು ರಾಧಿಕಾ ಕುಟುಂಬಕ್ಕೆ ನೀಡುತ್ತಿದ್ದಾರೆ. ಆಯ್ರಾ ಹಾಗೂ ಯಥರ್ವ್ ಆರೈಕೆಯಲ್ಲಿ ರಾಧಿಕಾ ಪಂಡಿತ್ ಬ್ಯುಸಿ ಆಗಿದ್ದಾರೆ. ಆದರೆ, ಅವರು ಅಭಿಮಾನಿಗಳಿಂದ ಎಂದಿಗೂ ದೂರವಾಗಿಲ್ಲ. ಸದಾ ಒಂದಿಲ್ಲೊಂದು ಫೋಟೋ ಹಂಚಿಕೊಳ್ಳುವ ಮೂಲಕ ಅವರು ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರುತ್ತಾರೆ. ಯಶ್ ಜತೆಗೆ ಇರುವ ಫೋಟೋ ಹಂಚಿಕೊಳ್ಳುತ್ತಾರೆ. ಮಕ್ಕಳ ಬಗ್ಗೆ ಅಪ್ಡೇಟ್ ನೀಡುತ್ತಾರೆ. ಇದರ ಜತೆಗೆ ತಮ್ಮ ಫೋಟೋಗಳನ್ನು ರಾಧಿಕಾ ಶೇರ್ ಮಾಡಿಕೊಳ್ಳುತ್ತಾರೆ. ಈಗ ಹೊಸ ಫೋಟೋದಲ್ಲಿ ರಾಧಿಕಾ ಮಿಂಚಿದ್ದಾರೆ.
ರಾಧಿಕಾ ಪಂಡಿತ್ ಅವರು ಯಶ್ ಜತೆ ಅನೇಕ ಬಾರಿ ಮಾಲ್ಡೀವ್ಸ್ಗೆ ತೆರಳಿದ್ದರು. ಅಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ. ‘ನನ್ನ ಪಾಕೆಟ್ನಲ್ಲಿ ಸ್ವಲ್ಪ ಸೂರ್ಯನ ಕಿರಣ’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.
2016ರಲ್ಲಿ ‘ಸಂತು ಸ್ಟ್ರೇಟ್ ಫಾರ್ವರ್ಡ್’ ಚಿತ್ರ ತೆರೆಗೆ ಬಂದ ನಂತರದಲ್ಲಿ ರಾಧಿಕಾ ಪಂಡಿತ್ ಒಂದು ಬ್ರೇಕ್ ಪಡೆದುಕೊಂಡರು. ಆ ಬಳಿಕ 2019ರಲ್ಲಿ ತೆರೆಗೆ ಬಂದ ‘ಆದಿ ಲಕ್ಷ್ಮೀ ಪುರಾಣ’ ಚಿತ್ರದಲ್ಲಿ ರಾಧಿಕಾ ನಟಿಸಿದ್ದರು. ಇದಾದ ನಂತರದಲ್ಲಿ ಅವರು ಯಾವುದೇ ಚಿತ್ರ ಒಪ್ಪಿಕೊಂಡಿಲ್ಲ. ಅವರು ಬೇಗೆ ಬಣ್ಣದ ಲೋಕಕ್ಕೆ ಮರಳಲಿ ಎಂಬುದು ಅಭಿಮಾನಿಗಳ ಆಸೆ.
ಇತ್ತೀಚೆಗೆ ರಾಧಿಕಾ ಪಂಡಿತ್ ಹಳೆಯ ವಿಡಿಯೋ ವೈರಲ್ ಆಗಿತ್ತು. ಪ್ರೀತಿ ವಿಚಾರವನ್ನು ಯಶ್-ರಾಧಿಕಾ ಗುಟ್ಟಾಗಿ ಇಟ್ಟಿದ್ದರು. ತೀರಾ ಆಪ್ತರು ಎನಿಸಿಕೊಂಡವರಿಗೆ ಮಾತ್ರ ಈ ವಿಚಾರದ ಬಗ್ಗೆ ಗೊತ್ತಿತ್ತು. ಎಂಗೇಜ್ಮೆಂಟ್ ಆದ ಬಳಿಕವೇ ಈ ವಿಚಾರ ಅಧಿಕೃತವಾಗಿತ್ತು. ಯಾರಿಗೂ ತಿಳಿಯಬಾರದು ಎನ್ನುವ ಕಾರಣಕ್ಕೆ ಒಂದು ನಿಕ್ನೇಮ್ ಮೂಲಕ ಯಶ್ ಹೆಸರನ್ನು ಸೇವ್ ಮಾಡಿದ್ದರು ರಾಧಿಕಾ. ಈಗಲೂ ಅದೇ ಹೆಸರಿದೆ ಎಂದು ರಾಧಿಕಾ ಹೇಳಿಕೊಂಡಿದ್ದರು.
‘ಯಶ್ ನಂಬರ್ ನನ್ನ ಮೊಬೈಲ್ನಲ್ಲಿ ಇದ್ದಾಗಿನಿಂದಲೂ ನಾನು ಹೆಸರನ್ನು ಚೇಂಜ್ ಮಾಡೇ ಇಲ್ಲ. ಡೇಟಿಂಗ್ ಮಾಡುವ ಟೈಮ್ನಲ್ಲಿ ಯಾರಿಗೂ ಗೊತ್ತಾಗಬಾರದು ಎನ್ನುವ ಕಾರಣಕ್ಕೆ ಒಂದು ಹೆಸರಿಟ್ಟಿದ್ದೆ. ‘ಡೊಲ್ಲ’ ಎಂದು ಯಶ್ ಹೆಸರನ್ನು ಸೇವ್ ಮಾಡಿಕೊಂಡಿದ್ದೆ. ನನ್ನ ಮಾತೃಭಾಷೆ ಕೊಂಕಣಿಯಲ್ಲಿ ಡೊಲ್ಲಾ ಎಂದರೆ ಫ್ಯಾಟ್ ಎಂದರ್ಥ’ ಎಂದು ರಾಧಿಕಾ ಪಂಡಿತ್ ಹೇಳಿಕೊಂಡಿದ್ದರು.
ಇದನ್ನೂ ಓದಿ: ರಾಧಿಕಾ ಪಂಡಿತ್ ಎದುರು ಆಯ್ರಾ ಮಸ್ತ್ ಪೋಸ್
ಯಶ್ ರಾಧಿಕಾ ಪಂಡಿತ್ ಮುದ್ದು ಮಕ್ಕಳ ಕ್ಯೂಟ್ ಫೋಟೋಗಳಿಗೆ ಸಿಕ್ಕಾಪಟ್ಟೆ ಲೈಕ್ಸ್