AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಡೇ ಸ್ಪೆಷಲ್​; ಯಶ್ ಜತೆಗಿನ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

‘ಕೆಜಿಎಫ್ 2’ ತೆರೆಕಂಡು 50 ದಿನ ಪೂರೈಸಿದೆ. ಈ ಸಮಯದಲ್ಲಿ ರಾಕಿಂಗ್ ಸ್ಟಾರ್ ಸಂಪೂರ್ಣ ಸಮಯವನ್ನು ಕುಟುಂಬಕ್ಕಾಗಿ ಮೀಸಲು ಇಟ್ಟಿದ್ದಾರೆ.

ಸಂಡೇ ಸ್ಪೆಷಲ್​; ಯಶ್ ಜತೆಗಿನ ವಿಶೇಷ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಧಿಕಾ-ಯಶ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 05, 2022 | 1:42 PM

ನಟಿ ರಾಧಿಕಾ ಪಂಡಿತ್ (Radhika Pandit) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿರುತ್ತಾರೆ. ಅಭಿಮಾನಿಗಳ ಜತೆ ಸಂಪರ್ಕದಲ್ಲಿರಲು ಹಲವು ರೀತಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಮಗಳು ಆಯ್ರಾ ಹಾಗೂ ಯಥರ್ವ್ ಜತೆಗಿನ ಫೋಟೋ ಹಾಗೂ ವಿಡಿಯೋ, ಯಶ್ ಅವರ ಜತೆ ಹೊರಗೆ ಸುತ್ತಾಡುತ್ತಿರುವ ಚಿತ್ರಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾರೆ. ಅಭಿಮಾನಿಗಳಿಗೂ ಇದು ಇಷ್ಟ. ಈ ಫೋಟೋಗೆ ಲಕ್ಷಾಂತರ ಲೈಕ್ಸ್ ಸಿಗುತ್ತವೆ. ಈಗ ಯಶ್ (Yash) ಜತೆಗಿನ ವಿಶೇಷ ಫೋಟೋವನ್ನು ಹಂಚಿಕೊಂಡು ಅದಕ್ಕೆ ಅಂದದ ಕ್ಯಾಪ್ಶನ್ ನೀಡಿದ್ದಾರೆ. ಈ ಫೋಟೋವನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ.

ರಾಧಿಕಾ ಪಂಡಿತ್ ನಟನೆಯಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಇಲ್ಲ. ಆದರೆ, ಅವರು ಚಿತ್ರರಂಗದ ಜತೆಗಿನ ನಂಟನ್ನು ಕಳೆದುಕೊಂಡಿಲ್ಲ. ಯಶ್​ಗೆ ಅವರು ಬೆಂಬಲವಾಗಿ ನಿಂತಿದ್ದಾರೆ. ಯಶ್ ‘ಕೆಜಿಎಫ್’ ಸರಣಿಗಾಗಿ 5 ವರ್ಷ ಮೀಸಲು ಇಟ್ಟಿದ್ದರು. ಈ ಸಂದರ್ಭದಲ್ಲಿ ಮಕ್ಕಳ ಜವಾಬ್ದಾರಿಯನ್ನು ರಾಧಿಕಾ ಅವರೇ ತೆಗೆದುಕೊಂಡಿದ್ದರು. ‘ಕೆಜಿಎಫ್ 2’ ತೆರೆಕಂಡು 50 ದಿನ ಪೂರೈಸಿದೆ. ಈ ಸಮಯದಲ್ಲಿ ರಾಕಿಂಗ್ ಸ್ಟಾರ್ ಸಂಪೂರ್ಣ ಸಮಯವನ್ನು ಕುಟುಂಬಕ್ಕಾಗಿ ಮೀಸಲು ಇಟ್ಟಿದ್ದಾರೆ.

ಇದನ್ನೂ ಓದಿ
Image
Radhika Pandit: ನಾಚಿ ನೀರಾದ ರಾಧಿಕಾ ಪಂಡಿತ್; ವೈರಲ್ ಆಯ್ತು ಫೋಟೋ
Image
Radhika Pandit: ಪತ್ನಿ ರಾಧಿಕಾ ಪಂಡಿತ್ ಕೆನ್ನೆಗೆ ಮುತ್ತಿಟ್ಟ ಯಶ್; ಫೋಟೋ ವೈರಲ್
Image
Radhika Pandit: ‘ನೂರಾರು ಮಕ್ಕಳ ಜೀವ ಉಳಿಸಬಲ್ಲದು’; ಎದೆಹಾಲು ದಾನದ ಬಗ್ಗೆ ರಾಧಿಕಾ ಪಂಡಿತ್ ವಿಶೇಷ ಸಂದೇಶ
Image
Radhika Pandit: ಕುಟುಂಬದೊಂದಿಗೆ ಜನ್ಮದಿನ ಆಚರಿಸಿದ ರಾಧಿಕಾ ಪಂಡಿತ್; ಇಲ್ಲಿವೆ ಮುದ್ದಾದ ಫೋಟೋಗಳು

ಯಶ್​ ಜತೆಗಿನ ಫೋಟೋ ಹಂಚಿಕೊಂಡು ‘ಎಲ್ಲೋ ಓದಿದ್ದು, ಓರ್ವ ಉತ್ತಮ ಪೇಂಟರ್​ಗೆ ಕಪ್ಪು, ಬಿಳಿ ಮತ್ತು ಕೆಂಪು ಮೂರು ಬಣ್ಣಗಳು ಇದ್ದರೆ ಮಾತ್ರ ಸಾಕು’ ಎನ್ನುವ ಕ್ಯಾಪ್ಶನ್ ನೀಡಿದ್ದಾರೆ ರಾಧಿಕಾ. ಯಶ್ ಹಾಗೂ ರಾಧಿಕಾ ಪಂಡಿತ್ ಇತ್ತೀಚೆಗೆ ಸುತ್ತಾಟ ನಡೆಸಿ ಬಂದಿದ್ದರು. ಅದರ ಫೋಟೋಗಳನ್ನು ರಾಧಿಕಾ ಹಾಗೂ ಯಶ್ ಇಬ್ಬರೂ ಪೋಸ್ಟ್​ ಮಾಡಿದ್ದರು. ಈ ಬಾರಿ ರಾಧಿಕಾ ಹಂಚಿಕೊಂಡಿರುವ ಫೋಟೋ ಇತ್ತೀಚಿನದ್ದೋ ಅಥವಾ ಹಳೆಯದ್ದೋ ಎಂಬುದು ತಿಳಿದು ಬಂದಿಲ್ಲ.

ಯಶ್ ಮುಂದಿನ ಸಿನಿಮಾ ಯಾವುದು ಎಂಬುದು ಸದ್ಯದ ಕುತೂಹಲ. ಈ ಸಿನಿಮಾದ ಸ್ಕ್ರಿಪ್ಟ್​ ಕೆಲಸಗಳು ನಡೆಯುತ್ತಿರುವ ಬಗ್ಗೆ ಈ ಮೊದಲೇ ಯಶ್ ಹೇಳಿಕೊಂಡಿದ್ದರು. ರಾಧಿಕಾ ಪಂಡಿತ್ ಅವರ ಮದುವೆ ನಂತರ ತೆರೆಗೆ ಬಂದಿದ್ದು ಕೇವಲ ಒಂದು ಚಿತ್ರ ಮಾತ್ರ. ಅವರು ನಟನೆಗೆ ಕಂಬ್ಯಾಕ್ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಆಸೆ ಯಾವಾಗ ಈಡೇರಲಿದೆ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:30 pm, Sun, 5 June 22

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!