Radhika Pandit: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು

Yash - Radhika Pandit: ಕೊರೊನಾ ವೈರಸ್​ ಮತ್ತು ಲಾಕ್​ಡೌನ್​ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ರಾಧಿಕಾ ಪಂಡಿತ್​ ಅವರು ಎಲ್ಲರಿಗೂ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ಹೊಸ ಪೋಸ್ಟ್​ ಮೂಲಕ ಅವರು ಕೆಲವು ವಿಚಾರಗಳ ಬಗ್ಗೆ ತಿಳಿಸಿದ್ದಾರೆ.

Radhika Pandit: ಯಶ್​ ಕೋಟ್ಯಂತರ ರೂಪಾಯಿ ಹಂಚಿದ ಬೆನ್ನಲ್ಲೇ ರಾಧಿಕಾ ಪಂಡಿತ್​ ಕಡೆಯಿಂದ ಬಂತು ಭರವಸೆಯ ಮಾತು
ರಾಧಿಕಾ ಪಂಡಿತ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Jun 07, 2021 | 10:04 AM

ಕೊರೊನಾ ವೈರಸ್​ ಎರಡನೇ ಅಲೆಯ ಹಾವಳಿಯಿಂದಾಗಿ ಅನೇಕರ ಬದುಕು ತತ್ತರಿಸಿದೆ. ಈಗ ನಿಧಾನವಾಗಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆಯಾದರೂ ಜನಜೀವನ ಸಹಜಸ್ಥಿತಿಗೆ ಬರಲು ಇನ್ನೂ ಸಮಯ ಬೇಕಿದೆ. ಲಾಕ್​ಡೌನ್​ ಪರಿಣಾಮ ಅನೇಕರು ಕೆಲಸ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಠಿಣ ಸಂದರ್ಭದಲ್ಲಿ ನಟ ಯಶ್​ ಅವರು ರಿಯಲ್​ ಹೀರೋ ಆಗಿರುವುದು ತಿಳಿದಿದೆ. ಇತ್ತೀಚೆಗಷ್ಟೇ ಅವರು 1.5 ಕೋಟಿ ರೂ.ಗಿಂತಲೂ ಹೆಚ್ಚು ಹಣವನ್ನು ಸಿನಿಮಾರಂಗದ ಕಾರ್ಮಿಕರಿಗೆ, ತಂತ್ರಜ್ಞರಿಗೆ ಮತ್ತು ಕಲಾವಿದರಿಗೆ ಹಂಚಿದ್ದಾರೆ. ಅದರ ಬೆನ್ನಲ್ಲೇ ನಟಿ ರಾಧಿಕಾ ಪಂಡಿತ್​ ಅವರು ಭರವಸೆಯ ಮಾತುಗಳನ್ನು ಆಡಿದ್ದಾರೆ.

ಸಿನಿಮಾ ಚಟುವಟಿಕೆಗಳಿಂದ ದೂರು ಇದ್ದರೂ ಕೂಡ ರಾಧಿಕಾ ಪಂಡಿತ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಕೊರೊನಾ ವೈರಸ್​ ಮತ್ತು ಲಾಕ್​ಡೌನ್​ನಿಂದ ಉಂಟಾಗಿರುವ ಕಷ್ಟದ ಪರಿಸ್ಥಿತಿಯಲ್ಲಿ ಅವರು ಎಲ್ಲರಿಗೂ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ. ಹೊಸ ಪೋಸ್ಟ್​ ಮೂಲಕ ಅವರು ಕೆಲವು ವಿಚಾರಗಳ ಬಗ್ಗೆ ತಿಳಿಸಿದ್ದಾರೆ.

‘ಇದು ಕಷ್ಟದ ಸಮಯ. ನಾವೆಲ್ಲರೂ ತುಂಬ ನೋವು ಅನುಭವಿಸಿದ್ದೇವೆ. ಆತ್ಮೀಯರನ್ನು ಕಳೆದುಕೊಂಡಿದ್ದೇವೆ. ನಮ್ಮೆಲ್ಲರಿಗೂ ಭಯ, ಹತಾಶೆ ಕಾಡುತ್ತಿದೆ. ನಾಳೆ ಏನಾಗುತ್ತದೋ ಎಂಬ ಆತಂಕ ಇದೆ ಎಂಬುದು ನನಗೆ ತಿಳಿದಿದೆ. ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಜೊತೆಯಾಗಿ ಹೋರಾಡುತ್ತೇವೆ. ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ’ ಎಂದು ರಾಧಿಕಾ ಪಂಡಿತ್​ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿರುತ್ತಿದ್ದ ರಾಧಿಕಾ ಪಂಡಿತ್​ ಅವರು ಇತ್ತೀಚೆಗೆ ಹೆಚ್ಚು ಪೋಸ್ಟ್​ಗಳನ್ನು ಹಾಕುತ್ತಿಲ್ಲ. ಅದಕ್ಕಾಗಿ ಅವರು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ‘ನನ್ನೆಲ್ಲ ಪ್ರೀತಿಯ ಹಿತೈಷಿಗಳು ಮತ್ತು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೇಳುತ್ತೇನೆ. ನಿಮ್ಮಲ್ಲಿ ನಗು ಮೂಡಿಸಲು ಇನ್ಮುಂದೆ ಖುಷಿಯಾದ ಪಾಸಿಟಿವ್​ ಪೋಸ್ಟ್​ಗಳನ್ನು ಹಾಕುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಯಶ್-ರಾಧಿಕಾ ಪಂಡಿತ್ ಮುದ್ದು ಮಕ್ಕಳ ಕ್ಯೂಟ್ ಫೋಟೋಗಳಿಗೆ ಸಿಕ್ಕಾಪಟ್ಟೆ ಲೈಕ್ಸ್

Radhika Pandit: ರಾಧಿಕಾ ಪಂಡಿತ್​ ಕಂಬ್ಯಾಕ್​ ಯಾವಾಗ? ಶೀಘ್ರವೇ ಸಿಗಬಹುದೇ ಉತ್ತರ?

Published On - 9:02 am, Mon, 7 June 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ