ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​

ಆಯ್ರಾ ಮತ್ತು ಯಥರ್ವ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸನ್​ಗ್ಲಾಸ್​ ಹಾಕಿ ಆಟ ಆಡುತ್ತಿದ್ದಾರೆ. ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ.

ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್​​; ಕ್ಯೂಟ್​ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್​
ಸ್ವಿಮ್ಮಿಂಗ್​​ಪೂಲ್​ನಲ್ಲಿ ಆಯ್ರಾ, ಯಥರ್ವ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 23, 2021 | 1:39 PM

ರಾಧಿಕಾ ಪಂಡಿತ್​ ಅವರು ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್​ ಆಗಿಲ್ಲ. ಆ ಬಗ್ಗೆ ಅವರ ಅಭಿಮಾನಿಗಳಿಗೆ ಬೇಸರ ಇದ್ದೇ ಇದೆ. ಆದರೆ, ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​. ಅಭಿಮಾನಿಗಳ ಜತೆ ಸದಾ ಸಂಪರ್ಕದಲ್ಲಿರೋಕೆ ಅವರು ಒಂದಿಲ್ಲೊಂದು ಫೋಟೋ ಹಂಚಿಕೊಳ್ಳುತ್ತಲೇ ಇರುತ್ತಾರೆ. ಮಕ್ಕಳ ಬಗ್ಗೆ ಸಾಕಷ್ಟು ಫೋಟೋಗಳನ್ನು ಪೋಸ್ಟ್​ ಮಾಡುತ್ತಲೇ ಇರುತ್ತಾರೆ. ಹಬ್ಬ-ಹರಿದಿನ ಇದ್ದಾಗ ಪತಿ ಯಶ್​ ಹಾಗೂ ಮಕ್ಕಳಾದ ಆಯ್ರಾ ಮತ್ತು ಯಥರ್ವ್​ ಜತೆಗೆ ಪೂಜೆ ಮಾಡುತ್ತಿರುವ ಫೋಟೋ ಹಾಕುತ್ತಾರೆ. ಇನ್ನು ರಜಾ ದಿನಗಳನ್ನು ಕಳೆಯೋಕೆ ಹೊರಗೆ ಹೋದರೆ ಫ್ಯಾಮಿಲಿ ಫೋಟೋ ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಪಂಡಿತ್ ಹೊಸ ಫೋಟೋ ಪೋಸ್ಟ್​ ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಆಯ್ರಾ ಮತ್ತು ಯಥರ್ವ್​ ಸ್ವಿಮ್ಮಿಂಗ್​ಪೂಲ್​ನಲ್ಲಿ ಸನ್​ಗ್ಲಾಸ್​ ಹಾಕಿ ಆಟ ಆಡುತ್ತಿದ್ದಾರೆ. ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳ ಖುಷಿಯಾಗಿದ್ದಾರೆ. ಅಲ್ಲದೆ, ಆಯ್ರಾ ಮತ್ತು ಯಥರ್ವ್​ ಕ್ಯೂಟ್​ನೆಸ್​ ಬಣ್ಣಿಸಿದ್ದಾರೆ. ಇನ್ನೂ ಕೆಲವರು ಈ ಫೋಟೋ ತೆಗೆದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಯಥರ್ವ್​ ಸನ್​ಗ್ಲಾಸ್​ ಜೂಮ್​ ಮಾಡಿ ನೋಡಿದ್ದಾರೆ. ಈ ಬಗ್ಗೆ ಕಮೆಂಟ್​ ಕೂಡ ಮಾಡಿದ್ದಾರೆ. ಇದಕ್ಕೆ ರಾಧಿಕಾ ಪಂಡಿತ್​ ಉತ್ತರಿಸಿದ್ದು, ‘ಫೋಟೋ ತೆಗೆದಿದ್ದು ನಾನೇ’ ಎಂದು ಹೇಳಿಕೊಂಡಿದ್ದಾರೆ.

ರಾಧಿಕಾ ಪಂಡಿತ್​ ಹಾಗೂ ಯಶ್​ ಇತ್ತೀಚೆಗೆ ದುಬೈಗೆ ತೆರಳಿದ್ದರು. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದರು. ಯಶ್​ ಸಿಂಹಕ್ಕೆ ಮಾಂಸ ತಿನ್ನಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ಲಕ್ಷಾಂತರ ಲೈಕ್ಸ್​ ಹಾಗೂ ವೀವ್ಸ್​ ಗಿಟ್ಟಿಸಿಕೊಂಡಿದೆ. ಅಂದಹಾಗೆ, ಯಶ್​ ಜತೆ ಯಥರ್ವ್​ ಹಾಗೂ ಆಯ್ರಾ ಅವರನ್ನು ಕರೆದುಕೊಂಡು ಹೋಗಲಾಗಿತ್ತೋ ಅಥವಾ ಇಲ್ಲವೋ ಎನ್ನುವ ವಿಚಾರ ತಿಳಿದಿಲ್ಲ.

ರಾಧಿಕಾ ಪಂಡಿತ್​ ಅವರು ಯಾವಾಗ ಚಿತ್ರರಂಗಕ್ಕೆ ಕಂಬ್ಯಾಕ್​ ಮಾಡುತ್ತಾರೆ ಎನ್ನುವ ವಿಚಾರ ಇನ್ನೂ ಅಧಿಕೃತವಾಗಿಲ್ಲ. ಅತ್ತ ಯಶ್​, ‘ಕೆಜಿಎಫ್​ 2’ ಪ್ರಮೋಷನ್​ಗೆ ಇನ್ನಷ್ಟೇ ಚಾಲನೆ ನೀಡಬೇಕಿದೆ. ಏಪ್ರಿಲ್​ ತಿಂಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಯಶ್​ 19ನೇ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಯ ಅಸಲಿಯತ್ತೇನು?

‘ಅವರ ವಯಸ್ಸಿನಲ್ಲಿ ನಾನು ಹೀಗೆ ಇರಲು ಸಾಧ್ಯವೇ?’ ರಾಧಿಕಾ ಪಂಡಿತ್​ಗೆ ಹೀಗೊಂದು ಅನುಮಾನ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ