ಯಶ್ ಅವರು ‘ಕೆಜಿಎಫ್ 2’ ಸಿನಿಮಾ (KGF Chapter 2 Movie) ಬಳಿಕ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದಾರೆ. ಫ್ಯಾಮಿಲಿ ಜೊತೆ ಅವರು ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಹಬ್ಬ-ಹರಿದಿನಗಳನ್ನು ಅವರು ಕುಟುಂಬದ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ರಾಧಿಕಾ ಪಂಡಿತ್ (Radhika Pandit) ಅವರು ಆಗಾಗ ಹಂಚಿಕೊಳ್ಳುತ್ತಾರೆ. ಈಗ ರಾಧಿಕಾ ಪಂಡಿತ್ ಅವರು ಹಂಚಿಕೊಂಡ ಹೊಸ ಫೋಟೋ ಗಮನ ಸೆಳೆಯುತ್ತಿದೆ. ಈ ಫೋಟೋದಲ್ಲಿ ಯಶ್-ಆಯ್ರಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.
ರಾಧಿಕಾ ಪಂಡಿತ್ ಅವರು ಪ್ರತಿ ಭಾನುವಾರ ಅಭಿಮಾನಿಗಳಿಗಾಗಿ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ಈ ವಾರವೂ ಅದನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ರಾಧಿಕಾ ಪಂಡಿತ್ ಅವರು ಸಮುದ್ರ ತೀರದಲ್ಲಿ ಕುಳಿತಿದ್ದಾರೆ. ಯಶ್ ಕೂಡ ಅವರ ಜೊತೆ ಇದ್ದಾರೆ. ಯಶ್ ಹೆಗಲ ಮೇಲೆ ಆಯ್ರಾ ಯಶ್ ಕೂಡ ಕುಳಿತಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ರಾಧಿಕಾ ಹಾಗೂ ಯಶ್ ಅವರ ಅಭಿಮಾನಿಗಳು ಈ ಫೋಟೋನ ಶೇರ್ ಮಾಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ‘ನೀವು ಯಾವಾಗಲೂ ಸ್ಯಾಂಡಲ್ವುಡ್ನ ರಾಜಕುಮಾರಿ’; ರಾಧಿಕಾ ಪಂಡಿತ್ ಫೋಟೋಗೆ ಫ್ಯಾನ್ಸ್ ಕಮೆಂಟ್
ಯಶ್ಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಕಾರಣದಿಂದಲೇ ಅವರ ಮುಂದಿನ ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದಿದ್ದಾರೆ. ಸ್ಟಾರ್ ಹೀರೋಗಳ ಸಿನಿಮಾಗಳ ಬಗ್ಗೆ ಯಾವುವಾದರೂ ಅಪ್ಡೇಟ್ ಇದ್ದರೆ ಅದು ಲೀಕ್ ಆಗಿ ಬಿಡುತ್ತದೆ. ಆದರೆ, ಯಶ್ ಈ ವಿಚಾರದಲ್ಲಿ ಸಾಕಷ್ಟು ರಹಸ್ಯ ಕಾಯ್ದುಕೊಂಡಿದ್ದಾರೆ. ಬಾಲಿವುಡ್ ಚಿತ್ರದಿಂದ ಅವರಿಗೆ ಆಫರ್ ಬಂದರೂ ಯಶ್ ಇದನ್ನು ಒಪ್ಪಿಕೊಂಡಿಲ್ಲ.
ಇದನ್ನೂ ಓದಿ: ಹೇಗಿತ್ತು ನೋಡಿ ಆಯ್ರಾ-ಯಥರ್ವ ರಕ್ಷಾ ಬಂಧನ ಆಚರಣೆ; ಫೋಟೋಗಳಲ್ಲಿ ವಿವರಿಸಿದ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್ ಅವರಿಗೆ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಆದರೆ, ಅವರು ನಟನೆಗೆ ಮರಳಿಲ್ಲ. ಮಕ್ಕಳ ಆರೈಕೆಯಲ್ಲಿ ರಾಧಿಕಾ ಪಂಡಿತ್ ಅವರು ಬ್ಯುಸಿ ಆಗಿದ್ದಾರೆ. ಈ ಕಾರಣದಿಂದಲೇ ಅವರು ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ಬೇಸರ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:00 am, Sun, 10 September 23