AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದ ಜೊತೆ ಕಾಡಿನ ಪಿಸುಮಾತು ಕೇಳಿದ ರಾಧಿಕಾ ಪಂಡಿತ್

ಸದ್ಯ ರಾಧಿಕಾ ಪಂಡಿತ್ ಅವರ ಮಕ್ಕಳಿಗೆ ಶಾಲಾ ರಜೆ ಇರುವುದರಿಂದ, ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಅವರು ಈ ಪ್ರವಾಸ ಹಮ್ಮಿಕೊಂಡಿದ್ದಾರೆ. ಸುಡುವ ಬೇಸಿಗೆಯ ನಡುವೆಯೂ ಅರಣ್ಯ ಹಾದಿಯಲ್ಲಿ ಸಾಗುವುದು, ಮರ ಹತ್ತುವುದು ಹಾಗೂ ತೊರೆಯ ಬದಿಯ ಜಾರುಬಂಡೆಗಳ ಮೇಲೆ ನಡೆಯುವುದು ಒಂದು ಅದ್ಭುತ ಅನುಭವ ಎಂದು ರಾಧಿಕಾ ಬರೆದುಕೊಂಡಿದ್ದಾರೆ.

ಕುಟುಂಬದ ಜೊತೆ ಕಾಡಿನ ಪಿಸುಮಾತು ಕೇಳಿದ ರಾಧಿಕಾ ಪಂಡಿತ್
ರಾಧಿಕಾ ಪಂಡಿತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:May 06, 2026 | 5:11 PM

Share

ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್ (Radhika Pandit) ಸದ್ಯ ಬಣ್ಣದ ಲೋಕದಿಂದ ದೂರವಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ತಮ್ಮ ವೈಯಕ್ತಿಕ ಬದುಕಿನ ಸುಂದರ ಕ್ಷಣಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರು ತಮ್ಮ ಮಕ್ಕಳಾದ ಆಯ್ರಾ, ಯಥರ್ವ್ ಹಾಗೂ ಪೋಷಕರೊಂದಿಗೆ ಉಡುಪಿ ಜಿಲ್ಲೆಯ ಕೂಡ್ಲು ಫಾಲ್ಸ್  ಅಲ್ಲಿ ಚಾರಣ ಕೈಗೊಂಡಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚಾರಣದ ಹಿಂದಿನ ಕಾರಣ ನೀಡಿದ್ದಾರೆ.

ಸದ್ಯ ರಾಧಿಕಾ ಪಂಡಿತ್ ಅವರ ಮಕ್ಕಳಿಗೆ ಶಾಲಾ ರಜೆ ಇರುವುದರಿಂದ, ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಅವರು ಈ ಪ್ರವಾಸ ಹಮ್ಮಿಕೊಂಡಿದ್ದಾರೆ. ಸುಡುವ ಬೇಸಿಗೆಯ ನಡುವೆಯೂ ಅರಣ್ಯ ಹಾದಿಯಲ್ಲಿ ಸಾಗುವುದು, ಮರ ಹತ್ತುವುದು ಹಾಗೂ ತೊರೆಯ ಬದಿಯ ಜಾರುಬಂಡೆಗಳ ಮೇಲೆ ನಡೆಯುವುದು ಒಂದು ಅದ್ಭುತ ಅನುಭವ ಎಂದು ರಾಧಿಕಾ ಬರೆದುಕೊಂಡಿದ್ದಾರೆ. ‘ಕಾಡಿನ ಹಾದಿಯಲ್ಲಿ ಗಾಳಿಯ ಪಿಸುಮಾತು, ಎಲೆಗಳ ಶಬ್ದ ಮತ್ತು ಹಕ್ಕಿಗಳ ಚಿಲಿಪಿಲಿ ನಾದದ ನಡುವೆ ನಡೆಯುವ ಸುಖವೇ ಬೇರೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಕುಟುಂಬದ ಈ ಪ್ರವಾಸದಲ್ಲಿ ರಾಕಿಂಗ್ ಸ್ಟಾರ್ ಯಶ್ ಕಾಣಿಸಿಕೊಂಡಿಲ್ಲ. ಯಶ್ ಸದ್ಯ ತಮ್ಮ ಬಹುನಿರೀಕ್ಷಿತ ಸಿನಿಮಾವಾದ ‘ಟಾಕ್ಸಿಕ್’ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರದ ಕೆಲಸ ಇರುವುದರಿಂದ ಅವರು ಈ ಪ್ರವಾಸದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ. ಅವರ ಅನುಪಸ್ಥಿತಿಯಲ್ಲಿ ರಾಧಿಕಾ ಅವರು ಮಕ್ಕಳ ಜೊತೆ ಕಾಲ ಕಳೆದು, ಒಂದು ಸಣ್ಣ ವಿರಾಮದ ಖುಷಿ ಅನುಭವಿಸಿದ್ದಾರೆ.

ಇದನ್ನೂ ಓದಿ: ಮಕ್ಕಳ ಜೊತೆ ಕೊಡಗು ಸುತ್ತಿದ ರಾಧಿಕಾ ಪಂಡಿತ್; ಇಲ್ಲಿವೆ ಸುಂದರ ಫೋಟೋಸ್

ರಾಧಿಕಾ ಪಂಡಿತ್ ಅವರ ಈ ವಿಡಿಯೋ ನೋಡಿ ಅಭಿಮಾನಿಗಳು ಅವರು ಮತ್ತೆ ಚಿತ್ರರಂಗಕ್ಕೆ ಮರಳಲಿ ಎಂದು ಆಶಿಸುತ್ತಿದ್ದಾರೆ. ಆದರೆ, ಲಭ್ಯವಿರುವ ಮಾಹಿತಿಯ ಪ್ರಕಾರ ರಾಧಿಕಾ ಸದ್ಯಕ್ಕೆ ಸಿನಿಮಾ ರಂಗಕ್ಕೆ ಮರಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಸದ್ಯಕ್ಕೆ ಅವರು ತಮ್ಮ ಪೂರ್ಣ ಸಮಯವನ್ನು ಮಕ್ಕಳ ಪಾಲನೆ ಮತ್ತು ಕುಟುಂಬಕ್ಕಾಗಿ ಮೀಸಲಿಟ್ಟಿದ್ದಾರೆ. ಅವರ ಈ ಅರಣ್ಯ ಪಯಣದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:17 pm, Wed, 6 May 26

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ
ಸಂಕೇಶ್ವರ: ಟಿಪ್ಪರ್​ಗೆ KSRTC ಬಸ್ ಡಿಕ್ಕಿ, ಚಾಲಕ ಸಾವು, 12 ಮಂದಿಗೆ ಗಾಯ