AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಧಿಕಾ ಪಂಡಿತ್ ಮಗ ಯಥರ್ವ್​ ಜನ್ಮದಿನ; ವಿಶೇಷ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್

ರಾಧಿಕಾ ಪಂಡಿತ್ ಅವರು ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಆ ರೀತಿ ಆಗುತ್ತಿಲ್ಲ. ಅವರು ಮರಳಿ ನಟನೆಗೆ ಬರುವ ಸೂಚನೆ ನೀಡಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈ ಬಗ್ಗೆ ಫ್ಯಾನ್ಸ್ ರಾಧಿಕಾ ಬಳಿ ಅಪ್​ಡೇಟ್ ಕೇಳುತ್ತಲೇ ಇರುತ್ತಾರೆ.

ರಾಧಿಕಾ ಪಂಡಿತ್ ಮಗ ಯಥರ್ವ್​ ಜನ್ಮದಿನ; ವಿಶೇಷ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಧಿಕಾ-ಯಥರ್ವ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 30, 2023 | 11:16 AM

Share

ನಟಿ ರಾಧಿಕಾ ಪಂಡಿತ್ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೆ, ಅವರು ಅಭಿಮಾನಿಗಳ ಜೊತೆಗಿನ ಸಂಪರ್ಕವನ್ನು ಕಡಿದುಕೊಂಡಿಲ್ಲ. ಆಗಾಗ ಫ್ಯಾನ್ಸ್​ಗಾಗಿ ಅವರು ಫೋಟೋ ಹಾಗೂ ವಿಡಿಯೋ ಹಂಚಿಕೊಳ್ಳುತ್ತಾರೆ. ಪ್ರವಾಸಕ್ಕೆ ತೆರಳಿದ್ದು, ಯಶ್ (Yash) ಜೊತೆ ಸಮಯ ಕಳೆದಿದ್ದು, ಮಕ್ಕಳ ತುಂಟಾಟ ಹೀಗೆ ಹಲವು ವಿಚಾರಗಳ ಬಗ್ಗೆ ರಾಧಿಕಾ ಅಪ್​ಡೇಟ್ ನೀಡುತ್ತಾ ಇರುತ್ತಾರೆ. ಈಗ ರಾಧಿಕಾ ಪಂಡಿತ್ ಮಾಡಿರುವ ಹೊಸ ಪೋಸ್ಟ್ ವೈರಲ್ ಆಗಿದೆ. ಮಗ ಯರ್ಥವ್​ಗೆ ಅವರು ಕ್ಯೂಟ್ ಆಗಿ ಬರ್ತ್​ಡೇ ವಿಶ್ ತಿಳಿಸಿದ್ದಾರೆ.

ಯಥರ್ವ್​​ಗೆ ಇಂದು (ಅಕ್ಟೋಬರ್ 30) ಜನ್ಮದಿನ. ಆತ ಜನಿಸಿದ್ದು 2019ರಲ್ಲಿ. ಆತನಿಗೆ ನಾಲ್ಕು ವರ್ಷ ಪೂರ್ಣಗೊಂಡಿದೆ. ಈ ವಿಶೇಷ ಸಂದರ್ಭದಲ್ಲಿ ರಾಧಿಕಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ರಾಧಿಕಾ ಪಂಡಿತ್ ತಲೆ ಕೂದಲಿಗೆ ಯಥರ್ವ್​ ಮಲ್ಲಿಗೆ ಹೂವಿನ ಮಾಲೆ ಮುಡಿಸಿದ್ದಾನೆ. ಈ ವಿಡಿಯೋಗೆ ಅವರು ಚೆಂದದ ಕ್ಯಾಪ್ಶನ್ ನೀಡಿ ಬರ್ತ್​ಡೇ ವಿಶ್ ತಿಳಿಸಿದ್ದಾರೆ.

‘ನನ್ನ ಅತ್ಯಮೂಲ್ಯ ಹುಡುಗ. ನಾನು ಎಂದಿಗೂ ವಿಶೇಷ ಎನ್ನುವಂತೆ ಮಾಡಿದ್ದೀಯಾ. ನನ್ನನ್ನು ಅಮ್ಮನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ಹ್ಯಾಪಿ ಬರ್ತ್​​ಡೇ ಯಥರ್ವ್​. ಲವ್ ಯೂ ಆಲ್ವೇಸ್’ ಎಂದಿದ್ದಾರೆ ರಾಧಿಕಾ ಪಂಡಿತ್. ಈ ಪೋಸ್ಟ್​ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ಯಥರ್ವ್​​ಗೆ ಬರ್ತ್​ಡೇ ವಿಶ್ ತಿಳಿಸಿದ್ದಾರೆ.

ರಾಧಿಕಾ ಪಂಡಿತ್ ಅವರು ನಟನೆಗೆ ಮರಳಬೇಕು ಎಂಬುದು ಅನೇಕರ ಕೋರಿಕೆ. ಆದರೆ, ಆ ರೀತಿ ಆಗುತ್ತಿಲ್ಲ. ಅವರು ಮರಳಿ ನಟನೆಗೆ ಬರುವ ಸೂಚನೆ ನೀಡಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಈ ಬಗ್ಗೆ ಫ್ಯಾನ್ಸ್ ರಾಧಿಕಾ ಬಳಿ ಅಪ್​ಡೇಟ್ ಕೇಳುತ್ತಲೇ ಇರುತ್ತಾರೆ.

ಇದನ್ನೂ ಓದಿ: ಯಶ್​ ನಟನೆಯ ಸಿನಿಮಾಗಳನ್ನು ನೋಡಿ ‘ಜವಾನ್​’ ಚಿತ್ರಕ್ಕಾಗಿ ತಯಾರಿ ಮಾಡಿಕೊಂಡಿದ್ದ ಶಾರುಖ್​ ಖಾನ್​

ಇನ್ನು ಯಶ್ ಮುಂದಿನ ಸಿನಿಮಾ ಬಗ್ಗೆಯೂ ರಾಧಿಕಾ ಪಂಡಿತ್​ಗೆ ಪ್ರಶ್ನೆಗಳು ಎದುರಾಗುತ್ತಲೇ ಇರುತ್ತವೆ. ‘ಕೆಜಿಎಫ್ 2’ ರಿಲೀಸ್ ಆಗಿ ಒಂದೂವರೆ ವರ್ಷದ ಮೇಲಾಗಿದೆ. ಈ ಬಗ್ಗೆಯೂ ಅಪ್​ಡೇಟ್ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಯಶ್ ಅವರು ಈ ವಿಚಾರದಲ್ಲಿ ಮೌನ ತಾಳಿದ್ದಾರೆ. ಅವರ ಮುಂದಿನ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಬಾಲಿವುಡ್​ನಲ್ಲಿ ಸಿದ್ಧವಾಗುತ್ತಿರುವ ‘ರಾಮಾಯಣ’ದಲ್ಲೂ ಯಶ್ ನಟಿಸುತ್ತಿದ್ದಾರೆ ಎನ್ನಲಾಗಿದೆ. ಇದರಲ್ಲಿ ಅವರು ರಾವಣನ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಂತೆಕಂತೆಗಳು ಹರಿದಾಡುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More