AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್‌ಗೆ ವ್ಯಾಲೆಂಟೈನ್ಸ್ ದಿನದ ಶುಭಾಶಯ ಕೋರಿದ್ದಾರೆ. ತಮ್ಮ ಪ್ರೀತಿಯ ಪಯಣ, ಯಶ್ ಅವರ ತ್ಯಾಗ ಮತ್ತು ಬೆಂಬಲವನ್ನು ಹೃದಯಸ್ಪರ್ಶಿಯಾಗಿ ಸ್ಮರಿಸಿದ್ದಾರೆ. ಧಾರಾವಾಹಿಯಿಂದ ಸಿನಿಮಾದವರೆಗಿನ ಅವರ ಬಾಂಧವ್ಯ ಈಗಲೂ ಅಚಲವಾಗಿದೆ. ಯಶ್ 'ಟಾಕ್ಸಿಕ್' ಮತ್ತು 'ರಾಮಾಯಣ' ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ, ರಾಧಿಕಾ ಅವರ ವೃತ್ತಿಜೀವನಕ್ಕೆ ಅಚಲ ಬೆಂಬಲವಾಗಿ ನಿಂತಿದ್ದಾರೆ.

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್
ಯಶ್-ರಾಧಿಕಾ
ರಾಜೇಶ್ ದುಗ್ಗುಮನೆ
|

Updated on: Feb 14, 2026 | 2:57 PM

Share

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿ ಆಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಈಗ ತೆರೆಯ ಹಿಂದೆಯೂ ಕಪಲ್ ಆಗಿದ್ದಾರೆ. ಇವರ ಪ್ರೀತಿಯ ನೌಕೆ ಯಾವುದೇ ಅಡಚಣೆ ಇಲ್ಲದೆ ಸಾಗುತ್ತಿದೆ. ಯಶ್ ಅವರ ಕುರಿತು ರಾಧಿಕಾ ಪಂಡಿತ್ ಹಂಚಿಕೊಂಡಿರೋ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ.

‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ರಾಧಿಕಾ ಪಂಡಿತ್ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಹಿಟ್ ಆಗಲಿ ಎಂಬುದು ಅಭಿಮಾನಿಗಳ ಕೋರಿಕೆ. ಆ ಬಳಿಕ ‘ರಾಮಾಯಣ’ ಸಿನಿಮಾ ಕೂಡ ರಿಲೀಸ್ ಆಗಲಿದೆ. ಅವರ ಸಿನಿಮಾ ವೃತ್ತಿಜೀವನಕ್ಕೆ ರಾಧಿಕಾ ಬೆಂಬಲವಾಗಿ ನಿಂತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ