ಎರಡೇ ದಿನದಲ್ಲಿ 5 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ‘ರಾಜನಿವಾಸ’ ಚಿತ್ರದ ಹೊಸ ಹಾಡು

ಮಿಥುನ್ ಸುವರ್ಣ ಅವರು ‘ರಾಜನಿವಾಸ’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಕೃತಿಕಾ, ರಾಘವ್, ಶ್ರೀನಗರ ಕಿಟ್ಟಿ ಮುಂತಾದ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ. ಈ ಮೊದಲು ಟ್ರೇಲರ್ ಮೂಲಕ ಗಮನ ಸೆಳೆದಿದ್ದ ಈ ಸಿನಿಮಾ ಈಗ ಹಾಡುಗಳಿಂದ ಸದ್ದು ಮಾಡುತ್ತಿದೆ. ಈ ಚಿತ್ರದ ನಾಲ್ಕನೇ ಹಾಡು ಇತ್ತೀಚೆಗೆ ಬಿಡುಗಡೆ ಆಗಿದೆ.

ಎರಡೇ ದಿನದಲ್ಲಿ 5 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ‘ರಾಜನಿವಾಸ’ ಚಿತ್ರದ ಹೊಸ ಹಾಡು
Raghav, Kruttika

Updated on: Oct 01, 2026 | 3:27 PM

ಹಾಡುಗಳ ಮೂಲಕ ‘ರಾಜನಿವಾಸ’ ಸಿನಿಮಾ ಸದ್ದು ಮಾಡುತ್ತಿದೆ. ‘ತಂಬೂರಿ ಫಿಲ್ಮ್ಸ್’ ಸಂಸ್ಥೆಯು ಈ ಚಿತ್ರವನ್ನು ಅರ್ಪಿಸುತ್ತಿದೆ. ‘ಕೆನೋಪಸ್ ಸಿನಿಮಾ’ ಬ್ಯಾನರ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ. ಒಂದಷ್ಟು ಕಾರಣಗಳಿಂದ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ. ಸಸ್ಪೆನ್ಸ್, ಕ್ರೈಮ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಈ ಚಿತ್ರದಿಂದ 4ನೇ ಹಾಡನ್ನು ಬಿಡುಗಡೆ ಮಾಡಲಾಗಿದೆ. ‘ಅಣ್ಣ ಯಾರು’ ಎಂಬ ಈ ಹಾಡು ರಿಲೀಸ್ ಆದ ತಕ್ಷಣ ಪ್ರೇಕ್ಷಕರನ್ನು ಸೆಳೆದುಕೊಂಡಿದೆ.

‘ಎ2 ಮ್ಯೂಸಿಕ್’ ಮೂಲಕ ‘ರಾಜನಿವಾಸ’ ಸಿನಿಮಾದ ‘ಅಣ್ಣ ಯಾರು’ ಹಾಡು ಬಿಡುಗಡೆ ಆಗಿದೆ. 2ನೇ ದಿನಗಳಲ್ಲಿ 5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿರುವುದು ಹೆಚ್ಚುಗಾರಿಕೆ. ಮುಂದಿನ ದಿನಗಳಲ್ಲಿ ಈ ಹಾಡು ಇನ್ನಷ್ಟು ವೈರಲ್ ಆಗುವ ಸೂಚನೆ ಸಿಕ್ಕಿದೆ. ಈ ಹಾಡಿಗೆ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

Anna Yaaru - Lyrical | Rajanivaasa | Gana Guna | Vijay Yardly | Mithun S & Alwin | Mithun S

‘ರಾಜನಿವಾಸ’ ಸಿನಿಮಾದಲ್ಲಿ ಕೃತಿಕಾ, ರಾಘವ್ ಹಾಗೂ ಶ್ರೀನಗರ ಕಿಟ್ಟಿ ಅವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ನಿರ್ಮಾಪಕರಾದ ದಾ.ಪಿ. ಆಂಜನಪ್ಪ ಹಾಗೂ ಸಹ ನಿರ್ಮಾಪಕರಾದ ಲೋಕೇಶ್ ಗೌಡ ಅವರು ಬಂಡವಾಳ ಹೂಡಿದ್ದಾರೆ. ಮಿಥುನ್ ಸುವರ್ಣ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಜಯ್ ಯಾರ್ಡ್ಲಿ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಕಾಂತಾರ’ ರೀತಿ ಮೂಡಿಬರುತ್ತಿದೆ ‘ರಾಜನಿವಾಸ’ ಸಿನಿಮಾ; ಇಲ್ಲಿದೆ ಟ್ರೇಲರ್

ತುಳುನಾಡಿನ ಕಥೆಯನ್ನು ‘ರಾಜನಿವಾಸ’ ಸಿನಿಮಾದಲ್ಲಿ ತೋರಿಸಲಾಗುತ್ತದೆ. ಕೆಲವು ತಿಂಗಳ ಹಿಂದೆಯೇ ಬಿಡುಗಡೆ ಆಗಿದ್ದ ಟ್ರೇಲರ್​ನಲ್ಲಿ ಈ ಬಗ್ಗೆ ಸುಳಿವು ನೀಡಲಾಗಿತ್ತು. ‘ಕಾಂತಾರ’ ರೀತಿಯ ಝಲಕ್ ಈ ಸಿನಿಮಾದ ಟ್ರೇಲರ್​ನಲ್ಲಿ ಕಾಣಿಸಿದೆ. ಈ ಸಿನಿಮಾ ನವೆಂಬರ್ 6ರಂದು ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us