ಜ.25ಕ್ಕೆ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಸಮಾರಂಭ; ಈ ಬಾರಿ ಯಾರಿಗೆಲ್ಲ ಸಿಗಲಿದೆ ಗೌರವ?
Raghavendra Chitravani Award: ಜ.25ರಂದು ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 47ನೇ ವಾರ್ಷಿಕೋತ್ಸವ ಆಚರಿಸಲಾಗುವುದು. ಅದರ ಜೊತೆಗೆ 21 ಹಾಗೂ 22ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಕೂಡ ನಡೆಯಲಿದೆ.
ಕನ್ನಡ ಚಿತ್ರರಂಗ ಮತ್ತು ಮಾಧ್ಯಮದ ನಡುವೆ ಕೊಂಡಿಯಂತೆ ಶ್ರೀ ರಾಘವೇಂದ್ರ ಚಿತ್ರವಾಣಿ (Raghavendra Chitravani) ಸಂಸ್ಥೆ ಕಳೆದ 47 ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಬಂದಿದೆ. ಚಂದನವನದ (Kannada Film Industry) ಮೊದಲ ಪ್ರಚಾರಕರ್ತ ಎಂಬ ಹೆಗ್ಗಳಿಕೆಗೆ ಪಾತ್ರವಾದವರು ಡಿ.ವಿ. ಸುಧೀಂದ್ರ. ಅವರಿಂದ ಸ್ಥಾಪಿಸಲ್ಪಟ್ಟ ಈ ಸಂಸ್ಥೆಗೆ 25 ವರ್ಷ ತುಂಬಿದ ಸಂದರ್ಭದಲ್ಲಿ ನಿರ್ಮಾಪಕರು ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠವನ್ನು ಆರಂಭಿಸಿದ್ದರು. ಕೇವಲ 2 ಪ್ರಶಸ್ತಿಗಳಿಂದ ಆರಂಭವಾದ ಈ ಸಮಾರಂಭಕ್ಕೆ ಆಗಮಿಸಿದ ಗಣ್ಯರು, ಈ ಸಂಸ್ಥೆಯ ಮೂಲಕ ಇನ್ನಷ್ಟು ಪ್ರಶಸ್ತಿ ಪ್ರದಾನ ಮಾಡಲು ಮುಂದಾಗಿದ್ದರು. ಈ ರೀತಿ ಶುರುವಾದ ಈ ಪ್ರಶಸ್ತಿ ಪ್ರದಾನ (Raghavendra Chitravani Award) ಸಮಾರಂಭ ಈಗ 11 ಪ್ರಶಸ್ತಿಗಳಿಗೆ ವಿಸ್ತಾರವಾಗಿದೆ.
ನಿರ್ಮಾಪಕರು ಮತ್ತು ಪತ್ರಕರ್ತರಿಗೆ ಮಾತ್ರವಲ್ಲದೆ ಕನ್ನಡ ಚಿತ್ರರಂಗಕ್ಕೆ ತಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡುತ್ತಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಕಳೆದ ವರ್ಷ ಕೊವಿಡ್ ಕಾರಣದಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಸಲು ಆಗಿರಲಿಲ್ಲ. ಹಾಗಾಗಿ, ಕಳೆದ ವರ್ಷದ ಪ್ರಶಸ್ತಿಯನ್ನು ಸೇರಿ ಈ ಬಾರಿ ನೀಡಲಾಗುತ್ತಿದೆ.
ಇದನ್ನೂ ಓದಿ: ‘ಗೋಲ್ಡನ್ ಗ್ಲೋಬ್’ ಬಳಿಕ ವಿದೇಶದಲ್ಲಿ ಮತ್ತೆರಡು ಪ್ರಶಸ್ತಿ ಬಾಚಿಕೊಂಡ ‘ಆರ್ಆರ್ಆರ್’ ಚಿತ್ರ
ಡಿ.ವಿ. ಸುಧೀಂದ್ರ ಅವರ ಜನ್ಮದಿನವಾದ ಜನವರಿ 25ರಂದು ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಟಿಯರಾದ ರಾಗಿಣಿ, ‘ಎ’ ಖ್ಯಾತಿಯ ಚಾಂದಿನಿ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ.
ಪ್ರಶಸ್ತಿಗಳ ವಿವರ
ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ:
ಪಿ. ಧನರಾಜ್ (ಹಿರಿಯ ಚಲನಚಿತ್ರ ನಿರ್ಮಾಪಕರು)
ಈಶ್ವರ ದೈತೋಟ (ಹಿರಿಯ ಪತ್ರಕರ್ತರು)
ಕುಮಾರ್ ಗೋವಿಂದ್ (ಹಿರಿಯ ನಟ-ನಿರ್ಮಾಪಕ)
ಸದಾಶಿವ ಶೆಣೈ (ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು)
ಡಾ. ರಾಜಕುಮಾರ್ ಪ್ರಶಸ್ತಿ:
ರಾಜೇಶ್ ಕೃಷ್ಣನ್ (ಹಿನ್ನೆಲೆ ಗಾಯಕ)
ಆರ್. ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ:
ಸಾಯಿಪ್ರಕಾಶ್ (ಹಿರಿಯ ನಿರ್ದೇಶಕ-ನಿರ್ಮಾಪಕ)
ಡಾ. ಜಯಮಾಲ ಎಚ್.ಎಂ. ರಾಮಚಂದ್ರ ಪ್ರಶಸ್ತಿ:
ಶ್ರೀಮತಿ ತುಳಸಿ (ಹಿರಿಯ ನಟಿ)
ಅತ್ಯುತ್ತಮ ಸಂಗೀತ ನಿರ್ದೇಶನ:
ನೋಬಿನ್ ಪಾಲ್ (777 ಚಾರ್ಲಿ ಚಿತ್ರಕ್ಕಾಗಿ)
ಅತ್ಯುತ್ತಮ ಕಥಾಲೇಖಕರು:
ಮಧುಚಂದ್ರ (ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ಚಿತ್ರಕ್ಕಾಗಿ)
ಅತ್ಯುತ್ತಮ ಸಂಭಾಷಣೆ:
ಎಂ.ಜಿ. ಶ್ರೀನಿವಾಸ್: (ಓಲ್ಡ್ ಮಾಂಕ್ ಚಿತ್ರಕ್ಕಾಗಿ)
ಚೊಚ್ಚಲ ಅತ್ಯುತ್ತಮ ನಿರ್ದೇಶನ:
ಕಿರಣ್ ರಾಜ್ (‘777 ಚಾರ್ಲಿ’)
ಅತ್ಯುತ್ತಮ ಗೀತರಚನೆ:
ಪ್ರಮೋದ್ ಮರವಂತೆ (ಕಾಂತಾರ ಚಿತ್ರದ ಸಿಂಗಾರ ಸಿರಿಯೇ ಸಾಹಿತ್ಯಕ್ಕಾಗಿ)
ಸಿ. ಸೀತಾರಾಂ ಸ್ಮರಣಾರ್ಥ ಪ್ರಶಸ್ತಿ:
ಶ್ರೀನಿವಾಸ ಮೂರ್ತಿ (ಹಿರಿಯ ಕಲಾವಿದರು)
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:36 pm, Tue, 17 January 23