AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೂಟಿಂಗ್ ಮುಗಿಸಿದ ‘ಒಂದು ಸರಳ ಪ್ರೇಮಕಥೆ’: ಆಸೆ ಈಡೇರಿತೆಂದ ರಾಘವೇಂದ್ರ ರಾಜ್​ಕುಮಾರ್

Raghavendra Rajkumar: ಸಿಂಪಲ್ ಸುನಿ ನಿರ್ದೇಶನದ 'ಒಂದು ಸರಳ ಪ್ರೇಮ ಕತೆ' ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ನಾಯಕನಾಗಿ ನಟಿಸಿದ್ದಾರೆ. ಅದೇ ಸಿನಿಮಾದಲ್ಲಿ ರಾಘವೇಂದ್ರ ರಾಜ್​ಕುಮಾರ್ ಸಹ ನಟಿಸಿದ್ದು, ಸುದ್ದಿಗೋಷ್ಠಿಯಲ್ಲಿ ಮಾತನಾಡಿ 'ನನ್ನ ಸಣ್ಣ ಆಸೆಯೊಂದು ಈಡೇರಿದೆ' ಎಂದಿದ್ದಾರೆ.

ಶೂಟಿಂಗ್ ಮುಗಿಸಿದ ‘ಒಂದು ಸರಳ ಪ್ರೇಮಕಥೆ’: ಆಸೆ ಈಡೇರಿತೆಂದ ರಾಘವೇಂದ್ರ ರಾಜ್​ಕುಮಾರ್
ರಾಘವೇಂದ್ರ ರಾಜ್​ಕುಮಾರ್
Follow us
ಮಂಜುನಾಥ ಸಿ.
|

Updated on: Nov 04, 2023 | 8:26 PM

ಕನ್ನಡ ಚಿತ್ರರಂಗದಲ್ಲಿ (Sandalwood) ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ನಿರ್ದೇಶಕ ಸಿಂಪಲ್ ಸುನಿ, ರಾಘವೇಂದ್ರ ರಾಜ್​ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಒಂದು ಸರಳ ಪ್ರೇಮ ಕಥೆ’. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಕುಂಬಳಕಾಯಿ ಹೊಡೆದಿದೆ. ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅವರ ತಂದೆ ರಾಘವೇಂದ್ರ ರಾಜ್​ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಸುದ್ದಿಗಾರರೊಟ್ಟಿಗೆ ಮಾತನಾಡಿರುವ ನಿರ್ದೇಶಕ ಸುನಿ, ”ಸಿನಿಮಾದ ಹೆಸರು ಹೇಳುವಂತೆ ಇದೊಂದು ಸರಳವಾದ ಪ್ರೇಮಕಥೆ. ಸಿನಿಮಾದ ನಾಯಕ ಸಂಗೀತ ನಿರ್ದೇಶಕನಾಗಿರುವ ಕಾರಣ ಸಂಗೀತಮಯ ಜರ್ನಿ ಇದಾಗಿರಲಿದೆ. ನಮ್ಮ ಆಲ್ಬಂ ಅನ್ನು ಕಾರಿನಲ್ಲಿ ಪ್ಲೇ ಮಾಡಿದರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರ. ಸಿನಿಮಾದಲ್ಲಿ ಒಟ್ಟು 11 ಹಾಡುಗಳಿವೆ. ಎಲ್ಲಾ ಪ್ರಕಾರದ ಸಂಗೀತ ಹೊಂದಿರುವ ಹಾಡುಗಳು ಇವೆ. ಖುಷಿಯ ವಿಷಯ ಏನೆಂದರೆ ಮೊದಲ ದಿನ ವಿನಯ್ ಸರ್ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಅವರು ಚಿತ್ರೀಕರಣ ಮಾಡಿದ್ದೇನೆ. ದೊಡ್ಮನೆ ಕುಟುಂಬದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ಒಟ್ಟು 83 ದಿನ ಶೂಟ್ ನಡೆಸಿದ್ದೇವೆ. ಮುಂಬೈ, ರಾಜಸ್ತಾನ, ಬೆಂಗಳೂರು, ಮೈಸೂರಿನಲ್ಲಿ ಚಿತ್ರೀಕರಣ ಮಾಡಿದ್ದೇನೆ ಎಂದು ಮಾಹಿತಿ ನೀಡಿದರು.

ರಾಘವೇಂದ್ರ ರಾಜ್​ಕುಮಾರ್ ಮಾತನಾಡಿ, ”ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’ ಸಿನಿಮಾ ನೋಡಿದ ಮೇಲೆ ನಾನು ಸುನಿ ಅವರ ಸಿನಿಮಾಗಳ ಅಭಿಮಾನಿ ಆದೆ. ಅವರ ಸಿನಿಮಾದಲ್ಲ ನಟಿಸಬೇಕು ಅನಿಸಿತ್ತು. ನನ್ನ ಮಗ ಸುನಿ ಅವರ ಸಿನಿಮಾದಲ್ಲ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನನ್ನು ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ. ಅದು ನನಗೆ ಸಂತೋಷ ಕೊಡುತ್ತದೆ. ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದಿದ್ದಾರೆ. ಪೋಸ್ಟ್ ಪ್ರೊಡಕ್ಷನ್ ಚೆನ್ನಾಗಿ ಆಗಲಿ. ಸಿನಿಮಾ ನಿಮ್ಮ ಮುಂದೆ ಬರಲಿ. ನಿಮ್ಮ ಬೆಂಬಲ ಇರಲಿದೆ ಎಂದರು.

ಇದನ್ನೂ ಓದಿ: Vinay Rajkumar: ಅಪ್ಪು ಇಷ್ಟಪಟ್ಟಿದ್ದ ಕತೆಗೆ ವಿನಯ್ ರಾಜ್​ಕುಮಾರ್ ನಾಯಕ

ನಟ ವಿನಯ್ ರಾಜ್ ಕುಮಾರ್ ಮಾತನಾಡಿ, ”ಒಂದು ಸರಳ ಪ್ರೇಮಕಥೆ’ ಈ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್ ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ವ್ಯವಸ್ಥೆ ಮಾಡಿದರು. ಸುನಿ ಅವರ ಜೊತೆ ಕೆಲಸ ಮಾಡಲು ಖುಷಿ ಎನಿಸಿತು. ಸುನಿ ಅವರು ಒಬ್ಬ ಕಲಾವಿದನಿಗೆ ನಟಿಸಲು ತುಂಬ ಕಂಪರ್ಟ್ ಫೀಲ್ ಕೊಡುತ್ತಾರೆ. ಆಕ್ಟಿಂಗ್ ಮಾಡಲು ಟ್ರೈ ಮಾಡುವುದು ಬೇಡ. ಅದು ತಾನಾಗಿಯೇ ಬರುತ್ತದೆ. ಇಡೀ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಎಲ್ಲಾ ಕಲಾವಿದರ ಅದ್ಭುತವಾಗಿ ನಟಿಸಿದ್ದಾರೆ ಎಂದರು.

ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿ, ನನ್ನ ಸಿನಿಮಾ ಕರಿಯರ್ ನ ಅತ್ಯಂತ ಉತ್ಕೃಷ್ಟ ಮ್ಯೂಸಿಕ್ ಸಂಗೀತ ಸಿನಿಮಾ ಒಂದು ಸರಳ ಪ್ರೇಮ ಕಥೆ. ನನ್ನ ಎರಡನೇ ಸಿನಿಮಾದಲ್ಲಿ 10 ಹಾಡುಗಳಿದ್ದವು. ತುಂಬ ದೊಡ್ಡ ಹೆಸರು ತಂದುಕೊಟ್ಟಿತ್ತು. ಆ ನಂತರ ಯೋಗರಾಜ್ ಭಟ್ ಅವರ ಪ್ರೊಡಕ್ಷನ್ ನಲ್ಲಿ ದೇವ್ರೇ ಅಂತಾ ಮಾಡಿದ್ದೆ. ಅದು ಒಳ್ಳೆ ಹೆಸರು ತಂದುಕೊಟ್ಟಿತ್ತು. ಈಗ ಈ ಸಿನಿಮಾ ಆ ಎರಡು ಸಿನಿಮಾಗಳನ್ನು ಈ ಚಿತ್ರ ಮೀರಿಸುತ್ತದೆ ಅನಿಸುತ್ತಿದೆ. ಯಾಕಂದರೆ ಈ ಸಿನಿಮಾದಲ್ಲಿ 11 ಹಾಡುಗಳಿವೆ. ಸಿನಿಮಾದ ನಡುವೆ ಚಿಕ್ಕ ಚಿಕ್ಕ ಬೀಟ್ ಬರುತ್ತದೆ. 2 ಗಂಟೆ 20 ನಿಮಿಷ ಸಿನಿಮಾದಲ್ಲಿ ಮ್ಯೂಸಿಕ್ ಜೊತೆ ಕನೆಕ್ಟ್ ಆಗುತ್ತದೆ ಎಂದರು.

ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ ಎಂದರು. ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ವಿನಯ್ ರಾಜ್ಕುಮಾರ್ ಗೆ ಜೋಡಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ