ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​

Raghavendra Rajkumar Health Update: ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಕುರಿತಂತೆ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​ ಮಾತನಾಡಿ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿ ಹಂಚಿಕೊಂಡ ಪುನೀತ್​
ನಟ ರಾಘವೇಂದ್ರ ರಾಜ್​ಕುಮಾರ್
Follow us
shruti hegde
| Updated By: Skanda

Updated on:Feb 18, 2021 | 2:08 PM

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ  ಕಾರಣ ನಟ ರಾಘವೇಂದ್ರ ರಾಜ್​ಕುಮಾರ್​ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಆಸ್ಪತ್ರೆಗೆ ಆಗಮಿಸಿದ್ದ ನಟ ಪುನೀತ್​ ರಾಜ್​ಕುಮಾರ್​  ರಾಘಣ್ಣ ಅವರ, ಆರೋಗ್ಯದಲ್ಲಿ ಚೇತರಿಕೆ ಇದೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇಲ್ಲ ಎಂದು ವೈದ್ಯರು ತಿಳಿಸಿರುವ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇವತ್ತು ಅಥವಾ ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ.

ಆಸ್ಪತ್ರೆಗೆ ಆಗಮಿಸಿದ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಮಾತನಾಡಿ, ರಾಘವೇಂದ್ರ ರಾಜ್​ಕುಮಾರ್​ ಆರೋಗ್ಯದಲ್ಲಿ ಚೇತರಿಕೆ ಇದೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಡಿಸ್ಚಾರ್ಜ್ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 10.30ಕ್ಕೆ ಡಿಸ್ಚಾರ್ಜ್ ಆಗಬೇಕಿತ್ತು, ಆದರೆ ಎರಡನೇ ದಿನವೂ ಚಿಕಿತ್ಸೆ ಮುಂದುವರೆದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ನಟ ರಾಘವೇಂದ್ರ ರಾಜ್​ಕುಮಾರ್​ ಯಶವಂತಪುರದ ಕೊಲಂಬಿಯದ ಏಷ್ಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಸಿನಿಮಾ ಶೂಟಿಂಗ್ ವೇಳೆ ಆಯಾಸದೊಂದಿಗೆ ಕೊಂಚ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಿನ್ನೆ ನಟ ರಾಘವೇಂದ್ರ ರಾಜ್‌ ಕುಮಾರ್‌ ಲವಲವಿಕೆಯಿಂದ ಬೆಳಕು ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಶೂಟಿಂಗ್‌ ವೇಳೆ ರಾಘಣ್ಣನ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣವೇ ಶೂಟಿಂಗ್ ಸೆಟ್‌ನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವರಾಜ್​ಕುಮಾರ್, ಪುನೀತ್ ರಾಜ್ ಕುಮಾರ್ ಹಾಗೂ ಶ್ರೀ ಮುರುಳಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ರಾಘಣ್ಣ ಅವರ ಆರೋಗ್ಯದ ಕುರಿತು ಅಭಿಮಾನಿಗಳ ಆಶೀರ್ವಾದ ಇರುವವರೆಗೂ ಏನೂ ಆಗಲ್ಲ. ಯಾರೊಬ್ಬರು ಆತಂಕಪಡಬೇಡಿ ಎಂದು ಶ್ರೀ ಮುರುಳಿ ಹೇಳಿದ್ದರು. ಅಂತೆಯೇ, ಇಂದಿನ ರಾಘವೇಂದ್ರ ರಾಜ್​ಕುಮಾರ್​ ಅವರ ಆರೋಗ್ಯದ ಪರಿಸ್ಥಿಯ ಬಗ್ಗೆ ಶಸ್ತ್ರ ಚಿಕಿತ್ಸೆಯ ಅವಶ್ಯಕತೆ ಇಲ್ಲ ಎಂಬುದನ್ನು ವೈದ್ಯರು ತಿಳಿಸಿರುವ ಮಾಹಿತಿಯನ್ನು ಪುನೀತ್​ ಹಂಚಿಕೊಂಡಿದ್ದಾರೆ.

ನಟ ಶಿವರಾಜ್​ಕುಮಾರ್​ ಮತ್ತು ಪುನೀತ್​ ರಾಜ್​ಕುಮಾರ್​ ದಂಪತಿ ಆಸ್ಪತ್ರೆಗೆ ಆಗಮಿಸಿ ರಾಘಣ್ಣವರ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಆಸ್ಪತ್ರೆಗೆ ಅಭಿಮಾನಿಗಳು ದೌಡಾಯಿಸಿದರೆ ಎದುರಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

Published On - 12:34 pm, Wed, 17 February 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್