Raghavendra Rajkumar: ರಾಘವೇಂದ್ರ ರಾಜ್​ಕುಮಾರ್​ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ

| Updated By: ಸಾಧು ಶ್ರೀನಾಥ್​

Updated on: Feb 17, 2021 | 11:07 AM

Raghavendra Rajkumar: ನಿನ್ನೆ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ರಾಘವೇಂದ್ರ ರಾಜ್​ಕುಮಾರ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿತ್ತು.

Raghavendra Rajkumar: ರಾಘವೇಂದ್ರ ರಾಜ್​ಕುಮಾರ್​ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ನಡೆಸಲು ಸಿದ್ಧತೆ
ನಟ ರಾಘವೇಂದ್ರ ರಾಜ್​ಕುಮಾರ್
Follow us on

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಯಶವಂತಪುರದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ ರಾಘವೇಂದ್ರ ರಾಜ್‌ಕುಮಾರ್‌ಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಚಿತ್ರೀಕರಣದ ಸಂದರ್ಭದಲ್ಲಿ ಸುಸ್ತಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರಾಘವೇಂದ್ರ ರಾಜಕುಮಾರ್​ ಅವರಿಗೆ ಇಂದು ವೈದ್ಯರು ಶಸ್ತ್ರಚಿಕಿತ್ಸೆ ಮಾಡಲಿದ್ದಾರೆ. ತಂದೆಯ ಅನಾರೋಗ್ಯದ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ಪುತ್ರ ವಿನಯ್ ರಾಜ್​ಕುಮಾರ್ ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬೆಳಕು’ ಚಿತ್ರದ ಶೂಟಿಂಗ್​ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹಾಗಾಗಿ, ಆಸ್ಪತ್ರೆಗೆ ಸೇರಿಸಲಾಗಿದೆ. ಶೂಟಿಂಗ್ ಸೆಟ್​ನಿಂದ ನೇರವಾಗಿ ಜನರಲ್​ ಹೆಲ್ತ್​ ಚೆಕಪ್​ಗಾಗಿ ಆಸ್ಪತ್ರೆಗೆ ಬಂದಿದ್ದರು. ಈ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು.

ನಿನ್ನೆ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ರಾಘವೇಂದ್ರ ರಾಜ್​ಕುಮಾರ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ, ಶಿವ ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ, ಗಂಭೀರ ಸಮಸ್ಯೆಯಿಲ್ಲ ಎಂದು ನಿನ್ನೆ ಹೇಳಲಾಗಿತ್ತಾದರೂ ಇಂದು ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿರುವುದು ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ 2013ರಲ್ಲಿ ಮೆದುಳಿನ ಸಮಸ್ಯೆಗೆ ಸಂಬಂಧಿಸಿದಂತೆ ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.