Raghavendra Rajkumar: ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ: ವಿನಯ್ ರಾಜ್​ಕುಮಾರ್ ಹೇಳಿಕೆ

ಶೂಟಿಂಗ್ ವೇಳೆ ಸುಸ್ತು ಕಾಣಿಸಿಕೊಂಡಿದ್ದರಿಂದ, ಶೂಟಿಂಗ್ ಸೆಟ್​ನಿಂದ ನೇರವಾಗಿ ಆಸ್ಪತ್ರೆಗೆ ಬಂದಿದ್ದರು. ಈ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ: ವಿನಯ್ ರಾಜ್​ಕುಮಾರ್

Raghavendra Rajkumar: ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ: ವಿನಯ್ ರಾಜ್​ಕುಮಾರ್ ಹೇಳಿಕೆ
ವಿನಯ್ ರಾಜ್​ಕುಮಾರ್
Follow us
TV9 Web
| Updated By: ganapathi bhat

Updated on:Apr 06, 2022 | 7:57 PM

ಬೆಂಗಳೂರು: ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲಾಗಿರುವ ವಿಚಾರದ ಕುರಿತಾಗಿ ಪುತ್ರ ವಿನಯ್ ರಾಜ್​ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾ ಶೂಟಿಂಗ್​ನಲ್ಲಿ ಸುಸ್ತಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಬೆಳಕು’ ಚಿತ್ರದ ಶೂಟಿಂಗ್​ ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಹಾಗಾಗಿ, ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಆಸ್ಪತ್ರೆ ಬಳಿ ಪುತ್ರ ವಿನಯ್ ರಾಜ್​ಕುಮಾರ್​ ಹೇಳಿದ್ದಾರೆ.

ಶೂಟಿಂಗ್ ವೇಳೆ ಸುಸ್ತು ಕಾಣಿಸಿಕೊಂಡಿದ್ದರಿಂದ, ಶೂಟಿಂಗ್ ಸೆಟ್​ನಿಂದ ನೇರವಾಗಿ ಆಸ್ಪತ್ರೆಗೆ ಬಂದಿದ್ದರು. ಜನರಲ್​ ಹೆಲ್ತ್​ ಚೆಕಪ್​ಗಾಗಿ ಆಸ್ಪತ್ರೆಗೆ ಬಂದಿದ್ದರು. ಈ ಬಗ್ಗೆ ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಪುತ್ರ ವಿನಯ್ ರಾಜ್​ಕುಮಾರ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ರಾಜ್​ಕುಮಾರ್ ಅವರನ್ನು ನಾಳೆಯವರೆಗೆ ಅಬ್ಸರ್ವೇಷನ್​ನಲ್ಲಿ ಇರಿಸಿದ್ದಾರೆ. ನಾಳೆ ಬೆಳಗ್ಗೆ ವೈದ್ಯರು ಡಿಸ್ಚಾರ್ಜ್ ಮಾಡಲಿದ್ದಾರೆ ಎಂದು ಆಸ್ಪತ್ರೆ ಬಳಿ ಹಿರಿಯ ಪುತ್ರ ವಿನಯ್ ರಾಜ್​ಕುಮಾರ್​ ತಿಳಿಸಿದ್ದಾರೆ.

ರಾಘಣ್ಣ ಅವರಿಗೆ ಏನು ಆಗಿಲ್ಲ, ಅವರು ಆರಾಮಾಗೆ ಇದ್ದಾರೆ. ಹೀಗಾಗಿ ಯಾರು ಆತಂಕ ಪಡಬೇಡಿ. ಅಭಿಮಾನಿಗಳ ಆಶೀರ್ವಾದ ಇರೋ‌ತನಕ ಎನೂ ಆಗಲ್ಲ ಎಂದು ಶ್ರೀಮುರುಳಿ‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

ರಾಘವೇಂದ್ರ ರಾಜ್​ಕುಮಾರ್​ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯದ ಮಾಹಿತಿ ಪ್ರಕಾರ ರಾಘಣ್ಣರಿಗೆ ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿದೆ.ಇಂದು ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್​ಕುಮಾರ್ ಸಂಜೆ 4.30 ಕ್ಕೆ ಆಸ್ಪತ್ರಗೆ ಹೋಗ್ತಿನಿ ಅಂತಾ ಹೋಗಿದ್ರು. ಆದರೆ, ಬೆಳಗ್ಗೆಯಿಂದ ಆರಾಮಾಗಿದ್ರು ಎಂದು ಟಿವಿ9ಗೆ ಬೆಳಕು ಸಿನಿಮಾ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ನಟ ಇಂದು ಬೆಳಕು ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಶೂಟಿಂಗ್ ನಡುವೆ ಮಾಧ್ಯಮಗಳೊಂದಿಗೂ ಮಾತನಾಡಿದ್ರು. ಆದರೆ, ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ, ಶಿವ ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್​ ಅವರಿಗೆ ಯಶವಂತಪುರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಗೋಕರ್ಣ ಬೀಚ್​ನಲ್ಲಿ ಪುನೀತ್ ‘ಪವರ್​’ಫುಲ್​ ಬ್ಯಾಕ್ ಫ್ಲಿಪ್​ಗೆ ಫ್ಯಾನ್ಸ್ ಫುಲ್​ ಫಿದಾ!

Published On - 9:41 pm, Tue, 16 February 21

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?