ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ರಾಘವೇಂದ್ರ ರಾಜ್​ಕುಮಾರ್

Raghvendra Rajkumar: ಗೀತಾ ಶಿವರಾಜ್​ಕುಮಾರ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಮಾತನಾಡಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯೆ ನೀಡಿದ ರಾಘವೇಂದ್ರ ರಾಜ್​ಕುಮಾರ್
ರಾಘವೇಂದ್ರ ರಾಜ್​ಕುಮಾರ್
Follow us
|

Updated on: Apr 28, 2023 | 8:19 PM

ಶಿವರಾಜ್ ಕುಮಾರ್ (Shiva Rajkumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivarajkumar) ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ದೊಡ್ಮನೆ ಕುಟುಂಬವು ರಾಜಕೀಯದಿಂದ ತಕ್ಕಮಟ್ಟಿಗೆ ದೂರವೇ ಉಳಿದಿತ್ತು. ಆದರೆ ಗೀತಾ ಶಿವರಾಜ್​ಕುಮಾರ್ ಮಾತ್ರವೇ ಮೊದಲಿನಿಂದಲೂ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಬೆಳವಣಿಗೆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಾಘವೇಂದ್ರ ಸ್ಟೋರ್ಸ್ ಸಿನಿಮಾ ವೀಕ್ಷಸಿ ಸಿನಿಮಾದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ ರಾಜ್​ಕುಮಾರ್ ಅವರು ಆ ಬಳಿಕ ಸುದ್ದಿಗಾರರು ಗೀತಾ ಶಿವರಾಜ್ ಕುಮಾರ್ ಅವರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಪ್ರಶ್ನೆ ಕೇಳಿದರು. ಪಕ್ಕದಲ್ಲಿಯೇ ಕೂತಿದ್ದ ಜಗ್ಗೇಶ್ ಅವರು, ಬೇಡ, ಆ ಬಗ್ಗೆ ಈಗ ಮಾತು ಬೇಡ ಎಂದರಾದರೂ ರಾಘವೇಂದ್ರ ರಾಜ್​ಕುಮಾರ್ ಅವರು ಕೇಳಲಿ ಬಿಡಿ ಪರವಾಗಿಲ್ಲ ಉತ್ತರಿಸುತ್ತೇನೆ ಎನ್ನುತ್ತಾ, ”ಗೀತಾ ಶಿವರಾಜ್​ಕುಮಾರ್ ಅವರು ನನ್ನ ಅತ್ತಿಗೆ, ಶಿವರಾಜ್ ಕುಮಾರ್ ಅವರು ನನಗೆ ಅಣ್ಣ ನನಗೆ ಇಷ್ಟು ಮಾತ್ರವೇ ಗೊತ್ತು, ನನಗೆ ಇಷ್ಟು ಮಾತ್ರವೇ ಮುಖ್ಯ. ಇನ್ಯಾವುದು ನನ್ನದಲ್ಲ, ಇದು ಎರಡು ಬಿಟ್ಟರೆ ಬೇರೆ ಯಾವುದೂ ನನಗೆ ಗೊತ್ತಿಲ್ಲ. ಅವರು ನನಗೆ ಅಣ್ಣ-ಅತ್ತಿಗೆ ಅಷ್ಟೆ ನನಗೆ ಸಂಬಂಧ ಇದೆ ಇನ್ಯಾವುದೂ ಅಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ರಾಘವೇಂದ್ರ ರಾಜ್​ಕುಮಾರ್ ಅವರು ಕುಟುಂಬದ ಬಗ್ಗೆ ಅತೀವ ಪ್ರೇಮವುಳ್ಳ ವ್ಯಕ್ತಿ ಹಾಗೆಯೇ ಎಲ್ಲರ ಅಭಿಪ್ರಾಯವನ್ನು, ಸ್ವಾತಂತ್ರ್ಯವನ್ನು ಗೌರವಿಸುವ ವ್ಯಕ್ತಿ. ಸಹಜವಾಗಿಯೇ ಈ ಪ್ರಕರಣದಲ್ಲಿ, ಗೀತಾ ಹಾಗೂ ಶಿವರಾಜ್ ಕುಮಾರ್ ಅವರ ವೈಯಕ್ತಿಕ ಆಯ್ಕೆಯನ್ನು ಗೌರವಿಸಿ, ಅವರು ನನಗೆ ಅಣ್ಣ-ಅತ್ತಿಗೆ ಅದರ ಹೊರತಾಗಿ ಅವರ ವೈಯಕ್ತಿಕ ನಿರ್ಧಾರಗಳನ್ನು ಪ್ರಶ್ನಿಸುವುದಾಗಲಿ, ಅದರ ಬಗ್ಗೆ ಅಭಿಪ್ರಾಯ ಪ್ರಕಟಿಸುವುದಾಗಲಿ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಈ ಹಿಂದೆ ಗೀತಾ ಶಿವರಾಜ್​ಕುಮಾರ್ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗ ಪುನೀತ್ ರಾಜ್​ಕುಮಾರ್ ಅವರು ಚುನಾವಣಾ ಪ್ರಚಾರಕ್ಕೆ ಹೋಗಿರಲಿಲ್ಲ ಎಂಬುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಇದನ್ನೂ ಓದಿ:ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ರಾಜ್​ಕುಮಾರ್ ಮೆಚ್ಚಿನ ರಾಜಕಾರಣಿಯ ನೆನೆದ ಚಿನ್ನೇಗೌಡ್ರು

ಗೀತಾ ಶಿವರಾಜ್​ಕುಮಾರ್ ಅವರಿಗೆ ರಾಜಕೀಯ ಹೊಸದೇನೂ ಅಲ್ಲ. ಮಾಜಿ ಸಿಎಂ ಎಸ್ ಬಂಗಾರಪ್ಪನವರ ಪುತ್ರಿಯಾದ ಗೀತಾ ಅವರು ಎಳವೆಯಿಂದಲೇ ರಾಜಕೀಯ ಪರಿಸರದಲ್ಲಿಯೇ ಬೆಳೆದವರು. ಈ ಮುಂಚೆ ಜೆಡಿಎಸ್ ಪಕ್ಷದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರಾದರೂ ಸೋಲನುಭವಿಸಿದ್ದರು. ಆ ಬಳಿಕ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಬದಲಾದ ಸನ್ನಿವೇಶದಲ್ಲಿ ಅವರ ಸಹೋದರ ಮಧು ಬಂಗಾರಪ್ಪ ಅವರು ಕಾಂಗ್ರೆಸ್​ಗೆ ಸೇರಿ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಇದೇ ಕಾರಣದಿಂದ ಗೀತಾ ಶಿವರಾಜ್ ಕುಮಾರ್ ಅವರೂ ಸಹ ಸಹೋದರನಿಗೆ ಬೆಂಬಲಿಸುವ ದೃಷ್ಟಿಯಿಂದ ಕಾಂಗ್ರೆಸ್​ ಸೇರ್ಪಡೆಗೊಂಡಿದ್ದಾರೆ.

ಮಧು ಬಂಗಾರಪ್ಪ ಅವರ ಪರವಾಗಿ ಚುನಾವಣೆ ಪ್ರಚಾರ ಕೈಗೊಳ್ಳುವುದಾಗಿ ಗೀತಾ ಶಿವರಾಜ್​ಕುಮಾರ್ ಘೋಷಣೆ ಮಾಡಿದ್ದು, ನನ್ನ ಸಹೋದರ ಈ ಬಾರಿ ಚುನಾವಣೆಯಲ್ಲ ಗೆದ್ದೇ ಗೆಲ್ಲುತ್ತಾನೆ ಎಂದಿದ್ದಾರೆ. ಮಾತ್ರವಲ್ಲದೆ, ನನ್ನ ತಾಯಿ ನನಗೆ ಹೇಳಿದ್ದರು, ಸದಾ ಮಧುಗೆ ಬೆಂಬಲವಾಗಿರು ಎಂದು ಅಂತೆಯೇ ನಾನು ಮಧುಗೆ ಬೆಂಬಲವಾಗಿದ್ದೇನೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ