ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್

Raghavendra Rajkumar: ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿಗಳಲ್ಲಿ ಒಬ್ಬರು ಸ್ವತಃ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್. ಇಷ್ಟು ದಿನ ಎದೆಯ ಒಳಗೆ ಇಟ್ಟುಕೊಂಡಿದ್ದ ಅಪ್ಪುವಿನ ಹೆಸರನ್ನು ಈಗ ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡಿದ್ದಾರೆ ರಾಘವೇಂದ್ರ ರಾಜ್​ಕುಮಾರ್.

ಎದೆಯೊಳಗಿದ್ದ ಅಪ್ಪುವನ್ನು ಎದೆಯ ಮೇಲೆ ಹಚ್ಚೆಯಾಗಿ ಹಾಕಿಸಿಕೊಂಡ ರಾಘವೇಂದ್ರ ರಾಜ್​ಕುಮಾರ್
ರಾಘವೇಂದ್ರ ರಾಜ್​ಕುಮಾರ್
Follow us
ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ

Updated on:May 29, 2023 | 7:11 AM

ಪುನೀತ್ ರಾಜ್​ಕುಮಾರ್ (Puneeth Rajkumar) ಅಗಲಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದ್ದರೂ ಅವರ ಅಗಲಿಕೆಯನ್ನು ಇಂದಿಗೂ ಎಷ್ಟೋ ಜನರಿಗೆ ಅರಗಿಸಿಕೊಳ್ಳಲಾಗಿಲ್ಲ. ಪುನೀತ್ ಅಗಲಿಕೆ ಬಳಿಕ ರಾಜ್ಯದಾದ್ಯಂತ ಬೀದಿ ಬೀದಿಯಲ್ಲಿ ಅವರ ಕಟೌಟ್​ಗಳು ರಾರಾಜಿಸಿವೆ. ಪುತ್ಥಳಿಗಳ ಉದ್ಘಾಟನೆ ಆಗಿದೆ. ಕೆಲವರಂತೂ ದೇವಾಲಯವನ್ನೇ ಕಟ್ಟಿಬಿಟ್ಟಿದ್ದಾರೆ. ಪುನೀತ್ ಅವರ ನೆನಪನ್ನು ತ್ಯಜಿಸಿ ಬಾಳುವುದು ಅವರ ಕೋಟ್ಯಂತರ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಅಂಥಹವರಲ್ಲಿ ಪುನೀತ್ ರಾಜ್​ಕುಮಾರ್ ಅವರ ಅಣ್ಣ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಸಹ ಒಬ್ಬರು.

ಪುನೀತ್ ರಾಜ್​ಕುಮಾರ್ ಕಾಲವಾಗುವ ವೇಳೆಗೆ ಆರೋಗ್ಯ ಸಮಸ್ಯೆಯಿಂದ ದೈಹಿಕ ಸಾಮರ್ಥ್ಯಗಳನ್ನು ತುಸು ಮಟ್ಟಿಗೆ ಕಳೆದುಕೊಂಡಿದ್ದ ರಾಘವೇಂದ್ರ ರಾಜ್​ಕುಮಾರ್ ಮಾನಸಿಕ ಆರೋಗ್ಯವನ್ನು ಗಟ್ಟಿಯಾಗಿ ಕಾಪಾಡಿಕೊಂಡಿದ್ದರು. ಅಪ್ಪು ಬಗ್ಗೆ ಅಪಾರ ಪ್ರೀತಿ ಗೌರವ ಹೊಂದಿರುವ ರಾಘವೇಂದ್ರ ರಾಜ್​ಕುಮಾರ್, ಅಪ್ಪು ಅಗಲಿಕೆಯಿಂದ ಶೋಕಸಾಗರದಲ್ಲಿ ಮುಳುಗಿದ್ದ ಅವರ ಅಭಿಮಾನಿಗಳಿಗೆ, ಅವರ ಕುಟುಂಬದವರಿಗೆ ಆಪ್ತೇಷ್ಟರಿಗೆ ಸಾಂತ್ವಾನ ಹೇಳು ಕಾರ್ಯ ಮಾಡಿದರು. ಅದಾದ ನಂತರ ಅಪ್ಪು ಅಭಿಮಾನಿಗಳ ಗುಂಪಿನ ನಾಯಕನಂತೆ ಅಭಿಮಾನಿಗಳನ್ನು ಸರಿದಾರಿಯಲ್ಲಿ ನಡೆಸುವ ಯತ್ನವನ್ನು ಮಾಡುತ್ತಿದ್ದಾರೆ.

ದೊಡ್ಡ ಅಪ್ಪು ಅಭಿಮಾನಿ ಆಗಿರುವ ರಾಘವೇಂದ್ರ ರಾಜ್​ಕುಮಾರ್, ಪ್ರತಿದಿನವೂ ಅಪ್ಪುವಿನ ಭಾವಚಿತ್ರವನ್ನು ಶರ್ಟ್​ಗೆ ಸಿಕ್ಕಿಸಿಕೊಂಡು ಓಡಾಡುತ್ತಿದ್ದರು. ಯಾವುದೇ ಕಾರ್ಯಕ್ರಮಕ್ಕೆ ಹೋದರು ಎದೆಯ ಮೇಲೆ ಅಪ್ಪು ಚಿತ್ರವೊಂದು ಇದ್ದೇ ಇರುತ್ತಿತ್ತು. ಆದರೆ ಈಗ ರಾಘವೇಂದ್ರ ರಾಜ್​ಕುಮಾರ್ ಅವರು ತಮ್ಮ ಈ ವಯಸ್ಸಿನಲ್ಲಿ, ಆರೋಗ್ಯ ಸಮಸ್ಯೆಗಳ ನಡುವೆ ಸಹೋದರ ಪುನೀತ್ ರಾಜ್​ಕುಮಾರ್ ಹಾಗೂ ಅವರ ಮಕ್ಕಳ ಹೆಸರನ್ನು ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ:ಸಂಕಷ್ಟದಿಂದ ಕಾಪಾಡಿದ ಪುನೀತ್ ರಾಜ್​ಕುಮಾರ್ ಪವರ್ ಬಗ್ಗೆ ತಮಿಳು ನಿರ್ದೇಶಕ, ನಟ ಸಮುದ್ರಖನಿ ಮಾತು

ಅಪ್ಪು, ಟೊಟೊ ಮತ್ತು ನುಕ್ಕಿ ಎಂದು ಮೂರು ಹೆಸರುಗಳನ್ನು ರಾಘವೇಂದ್ರ ರಾಜ್​ಕುಮಾರ್ ತಮ್ಮ ಎದೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಹೆಸರುಗಳನ್ನು ಹಚ್ಚೆ ಹಾಕಿಸಿಕೊಂಡಿರುವ ರಾಘವೇಂದ್ರ ರಾಜ್​ಕುಮಾರ್ ಅವರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತಮಗೆ ಹಚ್ಚೆ ಹಾಕಿದ ಯುವ ಟ್ಯಾಟೂ ಆರ್ಟಿಸ್ಟ್ ಜೊತೆಗೂ ರಾಘವೇಂದ್ರ ರಾಜ್​ಕುಮಾರ್ ಫೊಟೊ ತೆಗೆಸಿಕೊಂಡಿದ್ದಾರೆ. ಈ ವಯಸ್ಸಿನಲ್ಲಿ, ಆರೋಗ್ಯ ಸಮಸ್ಯೆಗಳ ನಡುವೆ ಸಹೋದರ ಹಾಗೂ ಅವರ ಮಕ್ಕಳ ಹೆಸರನ್ನು ಹಚ್ಚೆ ಹಾಕಿಸಿಕೊಂಡ ರಾಘವೇಂದ್ರ ಅವರ ಪ್ರೀತಿಯನ್ನು ಅಪ್ಪು ಅಭಿಮಾನಿಗಳು ಕೊಂಡಾಡಿದ್ದಾರೆ. ಅಂದಹಾಗೆ, ಟೊಟೊ ಹಾಗೂ ನುಕ್ಕಿ ಎಂಬುದು ಅಪ್ಪು ಅವರ ಇಬ್ಬರು ಹೆಣ್ಣು ಮಕ್ಕಳ ನಿಕ್ ನೇಮ್.

ಪುನೀತ್ ರಾಜ್​ಕುಮಾರ್ ಕಾಲವಾದ ಬಳಿಕ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರಿಗೆ ಅಭೂತಪೂರ್ವ ಬೆಂಬಲವನ್ನು ರಾಘವೇಂದ್ರ ರಾಜ್​ಕುಮಾರ್ ಹಾಗೂ ಅವರ ಮಕ್ಕಳು ನೀಡುತ್ತಿದ್ದಾರೆ. ಅಪ್ಪು ಅವರ ಇಬ್ಬರು ಹೆಣ್ಣು ಮಕ್ಕಳ ಬಗ್ಗೆಯಂತೂ ರಾಘವೇಂದ್ರ ರಾಜ್​ಕುಮಾರ್ ಅವರಿಗೆ ಮೊದಲಿನಿಂದಲೂ ಬಹಳ ಮಮಕಾರ. ಅಪ್ಪು ಕಾಲವಾದ ಸಂದರ್ಭದಲ್ಲಿ ಅವರ ಮಕ್ಕಳನ್ನು ನೆನೆದು ರಾಘವೇಂದ್ರ ರಾಜ್​ಕುಮಾರ್ ಬಹಳ ದುಖಃ ವ್ಯಕ್ತಪಡಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 am, Mon, 29 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ