ರಾಘವೇಂದ್ರ ರಾಜಕುಮಾರ್ ಅಭಿನಯದ ‘ಆಡಿಸಿದಾತ’ ಚಿತ್ರದ ಟೀಸರ್ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಬಿಡುಗಡೆಯಾಗಲಿದೆ. ಇದು ರಾಘವೇಂದ್ರ ರಾಜಕುಮಾರ್ ಅವರ ಅಭಿನಯದ 25ನೇ ಚಿತ್ರ.
ಶ್ರೀಮತಿ ಲಕ್ಷ್ಮೀ ಎಸ್ ಎ ಗೋವಿಂದರಾಜು ಹಾಗೂ ನಾಗರಾಜ್ ವಿ ಅವರ ಸಹಕಾರದೊಂದಿಗೆ ದುರ್ಗದ ಹುಲಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಹಾಲೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು ಫಣೀಶ್ ಭಾರದ್ವಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.
ಈಗಾಗಲೇ ಎರಡು ಹಾಡುಗಳು ಸೇರಿದಂತೆ ಕೆಲವು ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಸದ್ಯದಲ್ಲೇ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಮನಮೋಹಕ ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಆನಂದ್ ಇಳಯರಾಜ ಛಾಯಾಗ್ರಹಣ, ಹರೀಶ್ ಕೊಮ್ಮಿ(ಮಫ್ತಿ) ಸಂಕಲನ ಹಾಗೂ ಬಾಲ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಅಭಿನಯಿಸುತ್ತಿದ್ದಾರೆ ಖ್ಯಾತ ನಿರ್ದೇಶಕ ದೊರೆ ಭಗವಾನ್, ಗುರುದತ್, ಬಾಲರಾಜ್, ಸುಶ್ಮಿತ ದಾಮೋದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.