AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ಶೀಘ್ರದಲ್ಲಿ.. ನಿವೃತ್ತ ಸೇನಾ ಕ್ಯಾಪ್ಟನ್​ ರಾಜಾರಾಂ ಆಗಿ ಬೆಳ್ಳಿ ಪರದೆ ಮೇಲೆ ರಾಘಣ್ಣ!

ಬೆಂಗಳೂರು: ರಾಘವೇಂದ್ರ ರಾಜ್‍ಕುಮಾರ್ ಅಭಿನಯದ ರಾಜತಂತ್ರ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ಜರುಗಿತು. ದುಷ್ಟ ಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್‍ಕುಮಾರ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಘವೇಂದ್ರ ರಾಜ್‍ಕುಮಾರ್ ಅಮ್ಮನ ಮನೆ ಚಿತ್ರದಲ್ಲಿ ತಮ್ಮ ಅಭಿನಯಕ್ಕಾಗಿ ಶ್ರೇಷ್ಠನಟ ಪ್ರಶಸ್ತಿ ಪಡೆದಿದ್ದರು.  ಈ ಸಿನಿಮಾಗೆ ಛಾಯಾಗ್ರಾಹಕರಾಗಿದ್ದ ಪಿ.ವಿ.ಆರ್.ಸ್ವಾಮಿ ಈಗ ಕ್ಯಾಮರಾ ಹಿಡಿಯುವ ಜೊತೆಗೆ ಇದೇ ಮೊದಲ ಬಾರಿಗೆ ನಿರ್ದೇಶಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಹಿರಿಯನಟ ರಾಘವೇಂದ್ರ ರಾಜ್‍ಕುಮಾರ್ ಜೊತೆಗೆ ಹಿರಿಯ […]

ಅತಿ ಶೀಘ್ರದಲ್ಲಿ.. ನಿವೃತ್ತ ಸೇನಾ ಕ್ಯಾಪ್ಟನ್​ ರಾಜಾರಾಂ ಆಗಿ ಬೆಳ್ಳಿ ಪರದೆ ಮೇಲೆ ರಾಘಣ್ಣ!
KUSHAL V
|

Updated on: Oct 05, 2020 | 2:08 PM

Share

ಬೆಂಗಳೂರು: ರಾಘವೇಂದ್ರ ರಾಜ್‍ಕುಮಾರ್ ಅಭಿನಯದ ರಾಜತಂತ್ರ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ಜರುಗಿತು. ದುಷ್ಟ ಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್‍ಕುಮಾರ್ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಾಘವೇಂದ್ರ ರಾಜ್‍ಕುಮಾರ್ ಅಮ್ಮನ ಮನೆ ಚಿತ್ರದಲ್ಲಿ ತಮ್ಮ ಅಭಿನಯಕ್ಕಾಗಿ ಶ್ರೇಷ್ಠನಟ ಪ್ರಶಸ್ತಿ ಪಡೆದಿದ್ದರು.  ಈ ಸಿನಿಮಾಗೆ ಛಾಯಾಗ್ರಾಹಕರಾಗಿದ್ದ ಪಿ.ವಿ.ಆರ್.ಸ್ವಾಮಿ ಈಗ ಕ್ಯಾಮರಾ ಹಿಡಿಯುವ ಜೊತೆಗೆ ಇದೇ ಮೊದಲ ಬಾರಿಗೆ ನಿರ್ದೇಶಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಹಿರಿಯನಟ ರಾಘವೇಂದ್ರ ರಾಜ್‍ಕುಮಾರ್ ಜೊತೆಗೆ ಹಿರಿಯ ಕಲಾವಿದರಾದ ದೊಡ್ಡಣ್ಣ, ಭವ್ಯ, ಶ್ರೀನಿವಾಸಮೂರ್ತಿ, ಶಂಕರ್‍ ಅಶ್ವಥ್, ರಂಜನ್‍ ಹಾಸನ್, ಮುನಿರಾಜು, ನೀನಾಸಂ ಅಶ್ವಥ್ ಸೇರಿದಂತೆ ಹಲವಾರು ಪ್ರಮುಖ ಕಲಾವಿದರು ಈ ಚಿತ್ರದಲ್ಲಿ  ಅಭಿನಯಿಸುತ್ತಿದ್ದಾರೆ.

ರಾಜತಂತ್ರ ಚಿತ್ರದ ಮುಹೂರ್ತದ ಬಳಿಕ ಫಸ್ಟ್​ ದೃಶ್ಯಕ್ಕೆ ಹಿರಿಯ ನಟ ದೊಡ್ಡಣ್ಣ ಕ್ಲಾಪ್ ಮಾಡಿದರೆ,  ಸಂಗೀತ ನಿರ್ದೇಶಕ ಹಂಸಲೇಖ ಕ್ಯಾಮರಾ ಚಾಲನೆ ಮಾಡಿದರು. ಎರಡು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ತೊಡಗಿರುವ ಪಿವಿಆರ್ ಸ್ವಾಮಿ ರಾಜತಂತ್ರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿಶ್ವ ಡಿಜಿಟಲ್ ಮೀಡಿಯಾ ಮೂಲಕ ವಿಜಯಭಾಸ್ಕರ್ ಹರಪನಹಳ್ಳಿ, ಜೆ.ಎಂ.ಪ್ರಹ್ಲಾದ್ ಹಾಗೂ ಪಿ.ಆರ್.ಶ್ರೀಧರ್ ಸೇರಿ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ಇಲ್ಲಿ ಕ್ಯಾಪ್ಟನ್ ರಾಜನೂ ಹೌದು, ರಾಮನೂ ಹೌದು’ ಮುಹೂರ್ತದ ನಂತರ ಮಾತನಾಡಿದ ರಾಘವೇಂದ್ರ ರಾಜ್‍ಕುಮಾರ್ ಸ್ವಾಮಿ ಹಿಂದೆ ಅಮ್ಮನ ಮನೆ ಚಿತ್ರಕ್ಕೆ DOP ಆಗಿದ್ರು. ಈಗ ಚಿತ್ರ ನಿರ್ದೇಶನ ಮಾಡುತ್ತಿದ್ದೇನೆ ಎಂದು ಈ ಕಥೆ ಹೇಳಿದರು. ಇಲ್ಲಿ ನಾನೊಬ್ಬ ನಿವೃತ್ತ ಮಿಲಿಟರಿ ಕ್ಯಾಪ್ಟನ್ ಆಗಿ ನಟಿಸುತ್ತಿದ್ದೇನೆ.

ಹೊರಗಿನಿಂದ ಬರುವ ಶತ್ರುಗಳಿಂದ ದೇಶವನ್ನು ರಕ್ಷಿಸುತ್ತಿದ್ದ ಆತ, ದೇಶದ ಒಳಗೆ ಬಂದಾಗ ಯಾವರೀತಿ ಸಮಾಜ ಮತ್ತು ದೇಶವನ್ನು ದುಷ್ಟರಿಂದ ರಕ್ಷಿಸುತ್ತಾನೆ ಎಂದು ನನ್ನ ಪಾತ್ರದ ಮೂಲಕ ತೋರಿಸುತ್ತಿದ್ದಾರೆ. ಇದೇ ಮೊದಲಬಾರಿಗೆ ನಾನಿಂಥ ಪಾತ್ರ ಮಾಡುತ್ತಿರುವುದು. ಇಲ್ಲಿ ಕ್ಯಾಪ್ಟನ್ ರಾಜನೂ ಹೌದು, ರಾಮನೂ ಹೌದು. ಸೈನ್ಯದಿಂದ ಹೊರಬಂದ ನಂತರವೂ ತನ್ನ ಕರ್ತವ್ಯ ಮುಗಿದಿಲ್ಲವೆಂದುಕೊಂಡು ಜವಾಬ್ದಾರಿ ನಿಭಾಯಿಸುವ ವ್ಯಕ್ತಿ. ಇಲ್ಲಿ ಕೆಲಸ ಮಾಡುವುದು ತಂತ್ರವೋ ಮಂತ್ರವೋ ಅನ್ನೋದು ಚಿತ್ರ ನೋಡಿದಾಗ ತಿಳಿಯುತ್ತೆ ಎಂದು ಹೇಳಿದರು.

‘ಈಗಿನ ಕಾಲಘಟ್ಟದಲ್ಲಿ  ನಡೆಯುವ ಯೂನಿವರ್ಸಲ್ ಕಥೆಯಿದು’ ಹಿರಿಯ ಸಾಹಿತಿ ಜೆ.ಎಂ. ಪ್ರಹ್ಲಾದ್ ಸಿನಿಮಾಗೆ ಕತೆ, ಚಿತ್ರಕತೆ, ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿದ್ದಾರೆ. ಕಥೆಯ ವಿಶೇಷತೆ ಕುರಿತು ಮಾತನಾಡುತ್ತಾ ಬೌದ್ಧಿಕ ಶಕ್ತಿಯ ಪ್ರತಿನಿಧಿಯಾಗಿ ರಾಘಣ್ಣ ಕಾಣಿಸಿಕೊಂಡಿದ್ದಾರೆ. ನಿವೃತ್ತ ಮಿಲಿಟರಿ ಅಧಿಕಾರಿಯೊಬ್ಬ ತನ್ನ ಬುದ್ಧಿಶಕ್ತಿಯಿಂದ ಹೇಗೆ ಸಮಾಜದ ದುಷ್ಟಶಕ್ತಿಗಳನ್ನು ಮಟ್ಟಹಾಕುತ್ತಾನೆ ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ಈಗಿನ ಕಾಲಘಟ್ಟದಲ್ಲಿ  ನಡೆಯುವ ಯೂನಿವರ್ಸಲ್ ಕಥೆಯಿದು. ಕ್ಯಾಪ್ಟನ್ ರಾಜಾರಾಂ ಪಾತ್ರದಲ್ಲಿ ರಾಘಣ್ಣ ನಟಿಸುತ್ತಿದ್ದಾರೆ ಎಂದು ಹೇಳಿದರು.

ನಂತರ ಸಿನಿಮಾದ ನಿರ್ದೇಶಕ ಪಿವಿಆರ್ ಸ್ವಾಮಿ ಮಾತನಾಡಿ ನಾನು ಇಪ್ಪತ್ತು ವರ್ಷಗಳ ಹಿಂದೆ ಪುಟ್ಟ ಹಳ್ಳಿಯಿಂದ ಬಂದೆ. ನನ್ನ ಈ ಪ್ರಯತ್ನದ ಹಿಂದೆ ಹಲವಾರು ಶಕ್ತಿಗಳಿವೆ. ಅಮ್ಮನ ಮನೆ ನಂತರ ರಾಘಣ್ಣ ಜೊತೆ ಎರಡನೇ ಚಿತ್ರವಿದು. ಫೈಟ್ಸ್, ಸಾಂಗ್ಸ್ ಎಲ್ಲಾ ಇರುವ ಪಕ್ಕಾ ಕಮರ್ಷಿಯಲ್ ಸಿನಿಮಾ. ಇದೇ ಸೋಮವಾರದಿಂದ ಶೂಟಿಂಗ್ ಆರಂಭಿಸಿ ಬೆಂಗಳೂರು, ನೆಲಮಂಗಲ ಸುತ್ತಮುತ್ತ 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ  ಎಂದು ಹೇಳಿದರು.

ಈ ಚಿತ್ರದ ಹಾಡುಗಳಿಗೆ ಶ್ರೀಸುರೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ರಾಘಣ್ಣ ಚಿತ್ರಕ್ಕೆ ಸಂಗೀತ ಮಾಡುತ್ತಿರುವ ಖುಷಿಯಿದೆ. ಚಿತ್ರದಲ್ಲಿ ಒಂದು ಮಾಸ್ ಹಾಗೂ ಎರಡು ಬಿಟ್ ಸಾಂಗ್ ಇದೆ ಎಂದು ಶ್ರೀಸುರೇಶ್ ಹೇಳಿದರು. ಎನ್.ನಾಗೇಶ್ ಅವರ ಸಂಕಲನ, ವೈಲೆಂಟ್ ವೇಲು, ರಾಂದೇವ್ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಕಿದೆ.

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ