ಮತ್ತೆ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ; ‘ಗಜರಾಮ’ ಸಿನಿಮಾ ಸಾಂಗ್​ನಲ್ಲಿ ಕುಣಿದ ತುಪ್ಪದ ಬೆಡಗಿ

|

Updated on: Oct 02, 2023 | 2:39 PM

ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರು ‘ಗಜರಾಮ’ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈ ಚಿತ್ರದ ವಿಶೇಷ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಭರ್ಜರಿ ಸೆಟ್​ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಈ ಹಾಡು ಮೂಡಿ ಬಂದಿದೆ.

ಮತ್ತೆ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ; ‘ಗಜರಾಮ’ ಸಿನಿಮಾ ಸಾಂಗ್​ನಲ್ಲಿ ಕುಣಿದ ತುಪ್ಪದ ಬೆಡಗಿ
ವಿಶೇಷ ಹಾಡಿನಲ್ಲಿ ರಾಗಿಣಿ
Follow us on

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ವಿಶೇಷ ಹಾಡಿಗೂ ಅವರು ಹೆಜ್ಜೆ ಹಾಕಿದ್ದಾರೆ. ‘ತಪ್ಪಾ ಬೇಕಾ ತುಪ್ಪಾ..’ ಹಾಡಿಗೆ ಹೆಜ್ಜೆ ಹಾಕಿ ಅವರು ತುಪ್ಪದ ಬೆಡಗಿ ಎಂದೇ ಫೇಮಸ್ ಆದರು. ಈಗ ‘ಗಜರಾಮ’ ಸಿನಿಮಾದ ವಿಶೇಷ ಹಾಡಿನಲ್ಲಿ ಅವರು ಡ್ಯಾನ್ಸ್ ಮಾಡಿದ್ದಾರೆ. ಈ ಸಾಂಗ್​ನಲ್ಲಿ ರಾಗಿಣಿ ಹೇಗೆ ಹೆಜ್ಜೆ ಹಾಕಿದ್ದಾರೆ ಎಂದು ನೋಡೋಕೆ ಅಭಿಮಾನಿಗಳು ಕಾದಿದ್ದಾರೆ.

ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಮಗ ರಾಜವರ್ಧನ್ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರು ‘ಗಜರಾಮ’ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ. ಈ ಚಿತ್ರದ ವಿಶೇಷ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಭರ್ಜರಿ ಸೆಟ್​ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಈ ಹಾಡು ಮೂಡಿ ಬಂದಿದೆ. ರಾಗಿಣಿ‌ ಜೊತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.

‘ನಮ್ಮ ಇಂಡಸ್ಟ್ರಿಯಲ್ಲಿ ಹೊಸ ಪ್ರಯತ್ನ ಆಗಬೇಕಿದೆ. ನಮ್ಮ ಭಾಷೆಯ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಇದನ್ನು ನೋಡಿ ನನಗೆ ಹೆಮ್ಮೆ ಎನಿಸುತ್ತಿದೆ. ಗಜರಾಮ ಸಿನಿಮಾದಲ್ಲಿ ನನಗಾಗಿ ವಿಶೇಷ ಸಾಂಗ್ ಮಾಡಲಾಗಿದೆ. ರಾಜವರ್ಧನ್ ಒಳ್ಳೆಯ ಕಲಾವಿದ. ಈ ವರ್ಷದ ಹಿಟ್ ಹಾಡುಗಳಲ್ಲಿ ಈ ಹಾಡು ಇರಲಿದೆ’ ಎಂದರು ರಾಗಿಣಿ.

‘ಗಜರಾಮ’ ಸಿನಿಮಾದ ಶೂಟಿಂಗ್ ಕೊನೆಯ ಹಂತ ತಲುಪಿದೆ. ಕಳೆದ ಒಂದು ವರ್ಷದಿಂದ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಸಿನಿಮಾ ಒಳ್ಳೆಯ ರೀತಿಯಲ್ಲಿ ಮೂಡಿ ಬಂದಿದೆ ಅನ್ನೋದು ರಾಜವರ್ಧನ್ ಅವರ ಅಭಿಪ್ರಾಯ. ‘ರಾಮ್ ಅನ್ನೋದು ನನ್ನ ಪಾತ್ರದ ಹೆಸರು. ರಾಮ ರಾವಣ ಎರಡೂ ನಾನೇ’ ಎಂದಿದ್ದಾರೆ ರಾಜವರ್ಧನ್.

ಇದನ್ನೂ ಓದಿ: ಸ್ವಿಮ್ಮಿಂಗ್​ಪೂಲ್​ನಲ್ಲಿ ರಾಗಿಣಿ ದ್ವಿವೇದಿ; ಪಡ್ಡೆಗಳ ನಿದ್ದೆ ಕದ್ದ ತುಪ್ಪದ ಬೆಡಗಿ

ಪೊಲೀಸ್ ಪಾತ್ರದಲ್ಲಿ ದೀಪಕ ನಟಿಸಿದ್ದಾರೆ. ಕಬೀರ್ ಸಿಂಗ್ ಖಳನಾಯಕನ ಪಾತ್ರ ಮಾಡುತ್ತಿದ್ದಾರೆ. ರಾಜವರ್ಧನ್​ಗೆ ಜೊತೆಯಾಗಿ ತಪಸ್ವಿನಿ ಬಣ್ಣ ಹಚ್ಚಿದ್ದಾರೆ. ‘ದುನಿಯಾ’ ಸೂರಿ, ಯೋಗರಾಜ್ ಭಟ್ ಸೇರಿದಂತೆ ಹಲವರ ಜೊತೆ ಕೆಲಸ ಮಾಡಿದ ಅನುಭವವನ್ನು ಸುನಿಲ್ ಕುಮಾರ್ ವಿ.ಎ. ಹೊಂದಿದ್ದಾರೆ. ಅವರು ‘ಗಜರಾಮ’ ಸಿನಿಮಾದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಇದೆ. ‘ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್’ ಬ್ಯಾನರ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಝವೀಯರ್ ಫರ್ನಾಂಡಿಸ್ ಮಲ್ಲಿಕಾರ್ಜುನ್ ಕಾಶಿ ಸಹ ನಿರ್ಮಾಣ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ