ತುಪ್ಪದ ಬೆಡಗಿಗೆ ತಪ್ಪದ ಸ್ಲಿಪ್ ಡಿಸ್ಕ್ ಸಮಸ್ಯೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಮನವಿ
ಬೆಂಗಳೂರು: ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು NDPS ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ, ತಮ್ಮ ತಾಯಿ ಹಾಗೂ ತಮ್ಮನ ಐಪಾಡ್ ಮತ್ತು ಪೆನ್ ಡ್ರೈವ್ ರಿಲೀಸ್ಗೂ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ತಮ್ಮ ವಕೀಲರು ಹಾಗೂ ಸಂಬಂಧಿಕರಿಗೆ ತಮ್ಮನ್ನು ಭೇಟಿಯಾಗಲು ಅನುಮತಿ ಕೋರಿ ಮನವಿ ಸಹ ಸಲ್ಲಿಸಿದ್ದಾರೆ. ರಾಗಿಣಿ ಸ್ಲಿಪ್ ಡಿಸ್ಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕೋರ್ಟ್ ಸೂಚಿಸಿತ್ತು. […]
ಬೆಂಗಳೂರು: ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು NDPS ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ, ತಮ್ಮ ತಾಯಿ ಹಾಗೂ ತಮ್ಮನ ಐಪಾಡ್ ಮತ್ತು ಪೆನ್ ಡ್ರೈವ್ ರಿಲೀಸ್ಗೂ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ತಮ್ಮ ವಕೀಲರು ಹಾಗೂ ಸಂಬಂಧಿಕರಿಗೆ ತಮ್ಮನ್ನು ಭೇಟಿಯಾಗಲು ಅನುಮತಿ ಕೋರಿ ಮನವಿ ಸಹ ಸಲ್ಲಿಸಿದ್ದಾರೆ.
ರಾಗಿಣಿ ಸ್ಲಿಪ್ ಡಿಸ್ಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕೋರ್ಟ್ ಸೂಚಿಸಿತ್ತು. ಆದರೆ, ಸಮರ್ಪಕ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ರಾಗಿಣಿ ಮನವಿ ಮಾಡಿದ್ದಾರೆ. ನಟಿಯ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ.