ತುಪ್ಪದ ಬೆಡಗಿಗೆ ತಪ್ಪದ ಸ್ಲಿಪ್​ ಡಿಸ್ಕ್ ಸಮಸ್ಯೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಮನವಿ

| Updated By: ಸಾಧು ಶ್ರೀನಾಥ್​

Updated on: Oct 12, 2020 | 1:16 PM

ಬೆಂಗಳೂರು: ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು NDPS ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ, ತಮ್ಮ ತಾಯಿ ಹಾಗೂ ತಮ್ಮನ ಐಪಾಡ್ ಮತ್ತು ಪೆನ್ ಡ್ರೈವ್ ರಿಲೀಸ್​ಗೂ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ತಮ್ಮ ವಕೀಲರು ಹಾಗೂ ಸಂಬಂಧಿಕರಿಗೆ ತಮ್ಮನ್ನು ಭೇಟಿಯಾಗಲು ಅನುಮತಿ ಕೋರಿ ಮನವಿ ಸಹ ಸಲ್ಲಿಸಿದ್ದಾರೆ. ರಾಗಿಣಿ ಸ್ಲಿಪ್ ಡಿಸ್ಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕೋರ್ಟ್ ಸೂಚಿಸಿತ್ತು. […]

ತುಪ್ಪದ ಬೆಡಗಿಗೆ ತಪ್ಪದ ಸ್ಲಿಪ್​ ಡಿಸ್ಕ್ ಸಮಸ್ಯೆ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಮನವಿ
Follow us on

ಬೆಂಗಳೂರು: ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು NDPS ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ, ತಮ್ಮ ತಾಯಿ ಹಾಗೂ ತಮ್ಮನ ಐಪಾಡ್ ಮತ್ತು ಪೆನ್ ಡ್ರೈವ್ ರಿಲೀಸ್​ಗೂ ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೆ, ತಮ್ಮ ವಕೀಲರು ಹಾಗೂ ಸಂಬಂಧಿಕರಿಗೆ ತಮ್ಮನ್ನು ಭೇಟಿಯಾಗಲು ಅನುಮತಿ ಕೋರಿ ಮನವಿ ಸಹ ಸಲ್ಲಿಸಿದ್ದಾರೆ.

ರಾಗಿಣಿ ಸ್ಲಿಪ್ ಡಿಸ್ಕ್ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಕೋರ್ಟ್ ಸೂಚಿಸಿತ್ತು. ಆದರೆ, ಸಮರ್ಪಕ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಲು ರಾಗಿಣಿ ಮನವಿ ಮಾಡಿದ್ದಾರೆ. ನಟಿಯ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ.