ರಾಗಿಣಿ ದ್ವಿವೇದಿ ಅಭಿನಯದ ‘ಇಮೇಲ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ

|

Updated on: Jan 06, 2024 | 8:38 PM

Ragini Dwivedi: ಗ್ಲಾಮರ್ ಕ್ವೀನ್ ರಾಗಿಣಿ ದ್ವಿವೇದಿ ನಟಿಸಿರುವ ಹೊಸ ಸಿನಿಮಾ ‘ಇಮೇಲ್’ನ ಪೋಸ್ಟರ್ ಅನ್ನು ಪ್ರಜ್ವಲ್ ದೇವರಾಜ್ ಬಿಡುಗಡೆ ಮಾಡಿದ್ದಾರೆ.

ರಾಗಿಣಿ ದ್ವಿವೇದಿ ಅಭಿನಯದ ‘ಇಮೇಲ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ
Follow us on

ರಾಗಿಣಿ ದ್ವಿವೇದಿ (Ragini Dwivedi) ನಟಿಸಿರುವ ದ್ವಿಭಾಷಾ ಸಿನಿಮಾ ‘ಇಮೇಲ್’ನ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. “ಇಮೇಲ್” ಚಿತ್ರದ ಫಸ್ಟ್ ಲುಕ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗ್ಲಾಮರಸ್ ಚೆಲುವೆ ರಾಗಿಣಿ ದ್ವಿವೇದಿ, ‘ಇಮೇಲ್’ ಸಿನಿಮಾದಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು ಎಸ್ ಆರ್ ರಾಜನ್ ಅವರು ‘ಇಮೇಲ್’ ಸಿನಿಮಾವನ್ನು ನಿರ್ಮಿಸುವ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ‘ಇಮೇಲ್’ ಮಹಿಳಾ ಪ್ರಧಾನ ಸಿನಿಮಾ ಆಗಿದ್ದು, ನಾಯಕಿಯಾಗಿ ರಾಗಿಣಿ ದ್ವಿವೇದಿ ನಟಿಸಿದ್ದಾರೆ. ಮುರುಗ ಅಶೋಕ್, ಮನೋಬಲ, ‘ಜೈಲರ್’ ಚಿತ್ರದ ಖ್ಯಾತಿಯ ಬಿಲ್ಲಿ, “ಲೊಳ್ಳುಸಭಾ” ಮನೋಹರ್, ಅಕ್ಷಯ್ ರಾಜ್, ಅರತಿ ಶ್ರೀ, ಆದವ ಬಾಲಾಜಿ, ಮಂಜು ನಂಜನಗೂಡು, ರಾಮ್ ಸನ್ನಿ, ನಯನ ಚೌಹಾನ್, ಶೈಲಜ, ಶ್ವೇತ, ತೇಜಸ್ವಿನಿ, ಕುಮಾರಿ ಸೃಷ್ಟಿ, ಕುಮಾರಿ ಸಿಂಚನ, ಕುಮಾರಿ ಅನನ್ಯ, ಮುಂತಾದವರು “ಇಮೇಲ್” ಚಿತ್ರದ ತಾರಾಬಳಗದಲ್ಲಿದ್ದಾರೆ. ಬಹತೇಕ ಕನ್ನಡ ಕಲಾವಿದರೆ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ:ನಟಿ ರಾಗಿಣಿ ದ್ವಿವೇದಿಗೆ ಕನ್ನಡದ ಮೇಲಿದೆ ವಿಶೇಷ ಪ್ರೀತಿ

ಚಿತ್ರದಲ್ಲಿ ಸುಮಧುರ ಹಾಡುಗಳಿದ್ದು ಜುಬಿನ್ ಹಾಗೂ “ಐ ಲವ್ ಯು” ಚಿತ್ರದ ಖ್ಯಾತಿಯ ಕಿರಣ್ ತೊಟಂಬೈಲ್(ಕನ್ನಡ) ಅವರುಗಳು ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕನ್ನಡದ ಹಾಡುಗಳನ್ನು ಸಂತೋಷ್ ನಾಯಕ್ ಬರೆದಿದ್ದಾರೆ. ಮಾಸ್ ಮಾದ , ಬೀರ್ ಮಾಸ್ಟರ್ ಹಾಗೂ ಫಯಾಸ್ ಖಾನ್ ಸಾಹಸ ನಿರ್ದೇಶನ ಹಾಗೂ ಸೆಲ್ವಂ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ಗೋವಾ ಹಾಗೂ ಮುಂಬೈನಲ್ಲಿ ಚಿತ್ರೀಕರಣ ನಡೆದಿದೆ. “ಇಮೇಲ್” ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸದ್ಯದಲ್ಲೇ ಎರಡು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ರಾಗಿಣಿ ದ್ವಿವೇದಿ ಪ್ರಸ್ತುತ ಮಲಯಾಳಂ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ