AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ‘ರಾಜ್ಯೋತ್ಸವ’ಕ್ಕೆ ಶುಭ ಹಾರೈಸಿದ ಶ್ರೀಮುರಳಿ

Rajyothsava: ರಾಗಿಣಿ ದ್ವಿವೇದಿ ಅಭಿನಯದ ‘ರಾಜ್ಯೋತ್ಸವ; ದಿ ಆಂಥಮ್’ ಎಂಬ ವಿಡಿಯೋ ಹಾಡು ಐಪ್ಲೆಕ್ಸ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ರಾಗಿಣಿ ‘ರಾಜ್ಯೋತ್ಸವ’ಕ್ಕೆ ಶುಭ ಹಾರೈಸಿದ ಶ್ರೀಮುರಳಿ
ರಾಗಿಣಿ ದ್ವಿವೇದಿ
Follow us
ಮಂಜುನಾಥ ಸಿ.
|

Updated on: Dec 02, 2023 | 9:59 PM

ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸ ಆಚರಿಸಲಾಗುತ್ತದೆ. ಆದರೆ ಕನ್ನಡದ ಹಬ್ಬಕ್ಕೆ ಅದೊಂದೇ ದಿನ ಸೀಮಿತವಲ್ಲ. ಇಡೀ ನವೆಂಬರ್ ತಿಂಗಳಲ್ಲಿ ರಾಜ್ಯೋತ್ಸವ ಆಚರಿಸುವ ವಾಡಿಕೆ ಇದೆ. ಈ ಕನ್ನಡ ಮಾಸದ ಕೊನೆಯ ದಿನವಾದ ನವೆಂಬರ್ 30ರಂದು ರಾಗಿಣಿ ದ್ವಿವೇದಿ (Ragini Dwivedi) ಅಭಿನಯದ ‘ರಾಜ್ಯೋತ್ಸವ; ದಿ ಆಂಥಮ್’ (Rajyothsava) ಎಂಬ ವಿಡಿಯೋ ಹಾಡು ಐಪ್ಲೆಕ್ಸ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಪುನೀತ್ ರಾಜ್‍ಕುಮಾರ್ ಅಭಿನಯದ ‘ವಂಶಿ’ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ ವಿಜಯ್ ಕೌಂಡಿನ್ಯ ಅವರ ಸಹೋದರ ವಿಕ್ರಮ್ ಶೀನಿವಾಸ್ “ರಾಜ್ಯೋತ್ಸವ; ದಿ ಆಂಥಮ್” ವಿಡಿಯೋ ಹಾಡು ನಿರ್ಮಾಣ‌ ಮಾಡಿದ್ದಾರೆ. ವಿಕ್ರಮ್ ಅವರ ತಂದೆ ಶ್ರೀನಿವಾಸ್ ಅವರು ಕೂಡ ಡಾ ರಾಜಕುಮಾರ್ ಅವರ ಜೊತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಈಗ ವಿಕ್ರಮ್ ಶ್ರೀನಿವಾಸ್ ಟ್ವೆಲ್ವ್ 12 ಎಂಟರ್ಟೈನ್ಮೆಂಟ್ ಎಂಬ ಸಂಸ್ಥೆ ಆರಂಭಸಿದ್ದಾರೆ. ಆ ಸಂಸ್ಥೆ ಮೂಲಕ ಮೊದಲ ಪ್ರಯತ್ನವಾಗಿ “ರಾಜ್ಯೋತ್ಸವ” ಹಾಡನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚಿಗೆ ಈ ಹಾಡನ್ನು ನಟ ಶ್ರೀಮುರಳಿ ಬಿಡುಗಡೆ ಮಾಡಿ ಶುಭ ಹಾರೈಸಿದರು.

ನನ್ನ ಸಹೋದರ ವಿಕ್ರಮ್ ಶ್ರೀನಿವಾಸ್ ಟ್ವೆಲ್ವ್ 12 ಎಂಟರ್ಟೈನ್ಮೆಂಟ್ ಎಂಬ ನೂತನ ಸಂಸ್ಥೆ ಆರಂಭಿಸಿದ್ದಾರೆ. ಮೊದಲ ಹೆಜ್ಜೆಯಾಗಿ ರಾಜ್ಯೋತ್ಸವ ಎಂಬ ವಿಡಿಯೋ ಸಾಂಗ್ ನಿರ್ಮಾಣ ಮಾಡಿದ್ದಾರೆ. ಹಾಡು ಬಿಡುಗಡೆ ಮಾಡಿಕೊಟ್ಟ ಶ್ರೀಮುರಳಿ ಅವರಿಗೆ ಧನ್ಯವಾದ. ಮುಂದೆ ಅನೇಕ ಗೀತೆಗಳನ್ನು ಹಾಗೂ ಚಿತ್ರಗಳನ್ನು ನಿರ್ಮಾಣ‌ ಮಾಡುವ ಇರಾದೆ ವಿಕ್ರಮ್ ಶ್ರೀನಿವಾಸ್ ಅವರಿಗಿದೆ ಎಂದು ವಿಜಯ್ ಕೌಂಡಿನ್ಯ ತಿಳಿಸಿದರು.

ಇದನ್ನೂ ಓದಿ:ಅಬ್ಬಬ್ಬಾ ಎಷ್ಟು ಬೋಲ್ಡ್ ನೋಡಿ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ

ನಟಿ ರಾಗಿಣಿ ಮಾತನಾಡಿ, ‘‘ಕನ್ನಡಿಗರಿಗೆ ಎಷ್ಟು ಧನ್ಯವಾದ ಹೇಳಿದರೂ ಕಡಿಮೆ ಎಂದು ಮಾತು ಆರಂಭಿಸಿದ ದ್ವಿವೇದಿ, ನನ್ನನ್ನು ಎಲ್ಲರೂ ಗುರುತಿಸುತ್ತಿದ್ದಾರೆ ಎಂದರೆ ಅದು ಕನ್ನಡ ಚಿತ್ರಗಳಿಂದ. ನಾನು ಎಲ್ಲೇ ಹೋದರು ಕನ್ನಡತಿಯಾಗಿಯೇ ಗುರುತಿಸಿಕೊಳ್ಳುತ್ತೇನೆ‌. ವಿಕ್ರಮ್ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಹಾಡಿನಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಶ್ರೀಮುರಳಿ ಅವರಿಗೆ ಹಾಗೂ ಐಪ್ಲೆಕ್ಸ್ ಸಂಸ್ಥೆಗೆ ಧನ್ಯವಾದ ಎಂದರು.

ನಮ್ಮ ಐಪ್ಲೆಕ್ಸ್ ಸಂಸ್ಥೆ ಇಪ್ಪತ್ತು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಈಗ ಮ್ಯೂಸಿಕ್ ಸಂಸ್ಥೆ ಕೂಡ ಆರಂಭಿಸಿದ್ದೇವೆ‌. “ರಾಜ್ಯೋತ್ಸವ” ದ ಹಾಡು ಚೆನ್ನಾಗಿದೆ ಎಂದರು ಐಪ್ಲೆಕ್ಸ್ ಸಂಸ್ಥೆಯ ಮುಖ್ಯಸ್ಥ ಗಿರೀಶ್ ಕುಮಾರ್. ಸಂಗೀತ ನೀಡಿರುವ ಕಿಶನ್ ಮೂರ್ತಿ ಹಾಗೂ ಹಾಡಿನ ನಿರ್ಮಾಣಕ್ಕೆ ಸಾಕಷ್ಟು ಸಲಹೆ ನೀಡಿರುವ ಕೃಷ್ಣ ಚೈತನ್ಯ ಅವರು ರಾಜ್ಯೋತ್ಸವದ ಹಾಡಿನ ಬಗ್ಗೆ ಮಾತನಾಡಿದರು. ಮಧು ಅವರು ಬರೆದಿರುವ ಈ ಹಾಡನ್ನು ಮೇಘನಾ ಭಟ್ ಹಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್
ನೆಚ್ಚಿನ ನಾಯಕಿಯ ಯಶಸ್ಸಿಗೆ ಹರಕೆ ತೀರಿಸಿದ ಡ್ರೋನ್ ಪ್ರತಾಪ್