ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ನಾವು ಕಳೆದುಕೊಂಡಿದ್ದೇವೆ. ಇದು ಇಡೀ ಭಾರತದ ಸಿನಿಮಾ ಇಂಡಸ್ಟ್ರಿಗೆ ತುಂಬಲಾರದ ನಷ್ಟ. ಪುನೀತ್ ನಿಧನದ ನಂತರದಲ್ಲಿ ಅವರ ನಿವಾಸಕ್ಕೆ ಸಾಕಷ್ಟು ಸೆಲೆಬ್ರಿಟಿಗಳು, ರಾಜಕಾರಣಿಗಳು ಭೇಟಿ ನೀಡಿ, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲು ಅರ್ಜುನ್, ರಾಮ್ ಚರಣ್ ಸೇರಿ ಹಲವು ಟಾಲಿವುಡ್ ಸ್ಟಾರ್ಗಳು ಪುನೀತ್ ಮನೆಗೆ ಭೇಟಿ ನೀಡಿದ್ದರು. ಇಂದು (ಮಾರ್ಚ್ 31) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಪುನೀತ್ ನಿವಾಸಕ್ಕೆ ತೆರಳಿದ್ದಾರೆ. ಈ ಮೂಲಕ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ.
ಶುಕ್ರವಾರ (ಏಪ್ರಿಲ್ 1) ಶಿವಕುಮಾರ ಶ್ರೀಗಳ 115ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 31) ತುಮಕೂರಿನ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಸಿದ್ದಗಂಗಾ ಮಠದ ಶಿವಕುಮಾರ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ರಾತ್ರಿ ವೇಳೆಗೆ ಅವರು ಬೆಂಗಳೂರಿಗೆ ಆಗಮಿಸಿದರು. ಆ ಬಳಿಕ ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದರು ರಾಹುಲ್ ಗಾಂಧಿ.
ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಪುನೀತ್ ನಿವಾಸಕ್ಕೆ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. 15ಕ್ಕೂ ಅಧಿಕ ಪೊಲೀಸರು ಪುನೀತ್ ನಿವಾಸಕ್ಕೆ ಭದ್ರತೆ ನೀಡಿದರು.
ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವು ತಂದಿದೆ. ಏಪ್ರಿಲ್ 17ರಂದು ಪುನೀತ್ ಜನ್ಮದಿನ ಆಚರಿಸಲಾಗಿದೆ. ಈ ಪ್ರಯುಕ್ತ ಅವರ ನಟನೆಯ ‘ಜೇಮ್ಸ್’ ಸಿನಿಮಾ ತೆರೆಗೆ ಬಂತು. ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಈ ಚಿತ್ರ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿತ್ತು. ಈ ಚಿತ್ರಕ್ಕೆ ಅಭಿಮಾನಿಗಳು ಭಾವನಾತ್ಮಕವಾಗಿ ಕನೆಕ್ಟ್ ಆದರು. ಈ ಸಿನಿಮಾ ನಾಲ್ಕೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತು.
ಇದನ್ನೂ ಓದಿ: ‘RRR’ ನೋಡಲು ಬಂದರು, ಪುನೀತ್ಗೆ ಜೈಕಾರ ಹಾಕಿದರು; ಅಪ್ಪು ಮೇಲಿನ ಅಭಿಮಾನ ನಿರಂತರ
ಪುನೀತ್ ನಿಧನರಾಗಿ 5 ತಿಂಗಳು, ಕುಟುಂಬ ಸದಸ್ಯರಿಂದ ಪೂಜೆ ಸಲ್ಲಿಕೆ; ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸಿದ ಆರ್ಜಿವಿ