AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿಗೆ ರಾಜ್ ಬಿ ಶೆಟ್ಟಿ, ಬಾಲಿವುಡ್ ಸಿನಿಮಾ ಒಪ್ಪಿಕೊಳ್ಳಲು ಕಾರಣ ಯಾರು?

ಪ್ರತಿಭಾನ್ವಿತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಈಗಾಗಲೇ ಮಲಯಾಳಂ ಸಿನಿಮಾದಲ್ಲಿ ನಟಿಸಿ ಬಂದಿದ್ದಾರೆ. ಇದೀಗ ಹಿಂದಿ ಚಿತ್ರರಂಗಕ್ಕೂ ಕಾಲಿಡಲು ರಾಜ್ ಬಿ ಶೆಟ್ಟಿ ರೆಡಿಯಾಗಿದ್ದಾರೆ. ಆದರೆ ರಾಜ್ ಬಿ ಶೆಟ್ಟಿ ಹಿಂದಿ ಸಿನಿಮಾದಲ್ಲಿ ಒಪ್ಪಿಕೊಳ್ಳಲು ಆ ಒಬ್ಬ ವ್ಯಕ್ತಿ ಕಾರಣವಂತೆ. ಯಾರದು?

ಹಿಂದಿಗೆ ರಾಜ್ ಬಿ ಶೆಟ್ಟಿ, ಬಾಲಿವುಡ್ ಸಿನಿಮಾ ಒಪ್ಪಿಕೊಳ್ಳಲು ಕಾರಣ ಯಾರು?
ಮಂಜುನಾಥ ಸಿ.
|

Updated on: Aug 22, 2024 | 3:03 PM

Share

ರಾಜ್ ಬಿ ಶೆಟ್ಟಿ, ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ. ಪ್ರಸ್ತುತ ಸಕ್ರಿಯವಾಗಿರುವ ಹಲವು ನಟ-ನಿರ್ದೇಶಕರಿಗಿಂತಲೂ ಭಿನ್ನವಾಗಿ ಯೋಚಿಸುವ, ಬದುಕುವ ರಾಜ್ ಬಿ ಶೆಟ್ಟಿ, ಅವರ ಪ್ರತಿಭೆಯಿಂದ ಕನ್ನಡ ಚಿತ್ರರಂಗದ ಗಡಿ ದಾಟಿ ನೆರೆಯ ಚಿತ್ರರಂಗಗಳಲ್ಲಿಯೂ ಮಿಂಚುತ್ತಿದ್ದಾರೆ. ಇತ್ತೀಚೆಗಷ್ಟೆ ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮುಟಿ ಅವರೊಟ್ಟಿಗೆ ನಟಿಸಿ ಬಂದಿರುವ ರಾಜ್ ಬಿ ಶೆಟ್ಟಿ ಇದೀಗ ಬಾಲಿವುಡ್​ಗೆ ಕಾಲಿಡಲು ಸಜ್ಜಾಗಿದ್ದಾರೆ.

ರಾಜ್ ಬಿ ಶೆಟ್ಟಿ, ಹಿಂದಿ ಸಿನಿಮಾ ಒಂದರಲ್ಲಿ ನಟಿಸಿವುದು ಖಾತ್ರಿಯಾಗಿದೆ. ಸಿನಿಮಾವನ್ನು ಬಾಲಿವುಡ್​ನ ಖ್ಯಾತ ಹಾಗೂ ಭಿನ್ನ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನ ಮಾಡುತ್ತಿದ್ದಾರೆ. ಕೇವಲ ಅನುರಾಗ್ ಕಶ್ಯಪ್ ಅವರಿಗಾಗಿ ಮಾತ್ರವೇ ತಾವು ಬಾಲಿವುಡ್ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ‘ನಾನು ಅನುರಾಗ್ ಕಶ್ಯಪ್ ಅವರ ದೊಡ್ಡ ಅಭಿಮಾನಿ. ನಾನು ಸಿನಿಮಾ ನಿರ್ದೇಶಕ ಆಗಬೇಕು ಎಂದುಕೊಳ್ಳಲು ಅವರ ಸಿನಿಮಾಗಳು ಬೀರಿದ ಪ್ರಭಾವವೂ ಸಾಕಷ್ಟಿದೆ. ಅವರು ಕೆಲಸ ನನ್ನಲ್ಲಿ ಸ್ಪೂರ್ತಿ ತುಂಬಿದೆ. ನಾನು ನನ್ನ ತಂತ್ರಜ್ಞರೊಟ್ಟಿಗೆ ಹಲವು ಬಾರಿ ಕಶ್ಯಪ್​ರ ಸಿನಿಮಾಗಳ ಬಗ್ಗೆ ಚರ್ಚೆ ಮಾಡಿದ್ದಿದೆ’ ಎಂದಿದ್ದಾರೆ ರಾಜ್ ಬಿ ಶೆಟ್ಟಿ.

ಇದನ್ನೂ ಓದಿ: Raj B Shetty: ದರ್ಶನ್ ನೋಡಲು ಜೈಲಿಗೆ ಹೋಗುವುದಿಲ್ಲ: ರಾಜ್ ಬಿ ಶೆಟ್ಟಿ

ಅನುರಾಗ್ ಕಶ್ಯಪ್ ಸಹ, ತಾವು ರಾಜ್ ಬಿ ಶೆಟ್ಟಿಯ ಅಭಿಮಾನಿ ಎಂದು ಈ ಹಿಂದೆ ಹೇಳಿಕೊಂಡಿದ್ದರು. ರಾಜ್​ ನಿರ್ದೇಶಿಸಿ, ನಟಿಸಿದ್ದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ನೋಡಿದ್ದ ಅನುರಾಗ್ ಕಶ್ಯಪ್, ವಿಡಿಯೋ ಒಂದನ್ನು ಮಾಡಿ ರಾಜ್ ಬಿ ಶೆಟ್ಟಿಯನ್ನು ಅಭಿನಂದಿಸಿದ್ದರು. ಅದಾದ ಬಳಿಕ ಹಲವು ಸಂದರ್ಶನಗಳಲ್ಲಿ ರಾಜ್ ಬಿ ಶೆಟ್ಟಿಯ ಪ್ರತಿಭೆಯನ್ನು ಹೊಗಳಿದ್ದರು. ‘ಟೋಬಿ’ ಸಿನಿಮಾ ಬಿಡುಗಡೆ ಆಗುವ ಸಂದರ್ಭದಲ್ಲಿ ವಿಶೇಷ ವಿಡಿಯೋ ಒಂದನ್ನು ಮಾಡಿ ಬೆಂಬಲ ಸಹ ಸೂಚಿಸಿದ್ದರು.

ಇದೀಗ ಅನುರಾಗ್ ಕಶ್ಯಪ್ ನಿರ್ದೇಶಿಸಲಿರುವ ಹೊಸ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಕೆಲ ದೊಡ್ಡ ಬಾಲಿವುಡ್ ಸ್ಟಾರ್ ನಟರು ಸಹ ನಟಿಸುತ್ತಿದ್ದಾರೆ. ಬಾಬಿ ಡಿಯೋಲ್, ‘ದಂಗಲ್’ ನಟಿ ಸಾನ್ಯಾ ಮಲ್ಹೋತ್ರಾ, ಹೃತಿಕ್ ರೋಷನ್ ಗರ್ಲ್​ಫ್ರೆಂಡ್ ಸಬಾ ಅಜಾದ್ ಮಲಯಾಳಂನ ಪ್ರತಿಭಾವಂತ ನಟ ಜೋಜು ಜಾರ್ಜ್​ ಅವರುಗಳು ಸಹ ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೆಲ ದೃಶ್ಯಗಳಲ್ಲಿ ಮಾತ್ರವೇ ಬಂದು ಹೋಗಲಿದ್ದಾರಂತೆ.

ರಾಜ್ ಬಿ ಶೆಟ್ಟಿ ಪ್ರಸ್ತುತ ಶಿವರಾಜ್ ಕುಮಾರ್, ಉಪೇಂದ್ರ ಜೊತೆಗೆ ‘45’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮಲಯಾಳಂನ ಮತ್ತೊಂದು ಸಿನಿಮಾ ‘ರುಧಿರಂ’ನಲ್ಲಿ ನಟಿಸುತ್ತಿದ್ದಾರೆ. ಸ್ವತಃ ಹೊಸ ಸಿನಿಮಾ ನಿರ್ದೇಶನ ಮಾಡಲು ಸಜ್ಜಾಗುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!