ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ

‘ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಇದಕ್ಕೆ ಅವರು ಕ್ಷಮೆ ಕೇಳಿದ್ದಾರೆ.

ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ
ರಾಜ್ ಬಿ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Aug 26, 2023 | 2:51 PM

ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು. ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ಟೋಬಿ’ ಸಿನಿಮಾ (Toby Movie) ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ (Raj B Shetty) ಪ್ರತಿಕ್ರಿಯೆ ನೀಡಿದ್ದಾರೆ.

‘ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್​ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Toby Review: ಮಾತನಾಡದೆ ಮನಸ್ಸಿಗೆ ನಾಟುವ ‘ಟೋಬಿ’; ಇಲ್ಲಿದೆ ಒಂದಷ್ಟು ಪ್ಲಸ್​, ಇನ್ನೊಂದಿಷ್ಟು ಮೈನಸ್​

ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ