ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ

‘ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಇದಕ್ಕೆ ಅವರು ಕ್ಷಮೆ ಕೇಳಿದ್ದಾರೆ.

ಟೋಬಿ ಚಿತ್ರ ಚೆನ್ನಾಗಿಲ್ಲ ಎಂದ ಯುವತಿಗೆ ಥಿಯೇಟರ್ ಎದುರೇ ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರತಿಕ್ರಿಯಿಸಿದ ರಾಜ್ ಶೆಟ್ಟಿ
ರಾಜ್ ಬಿ ಶೆಟ್ಟಿ

Updated on: Aug 26, 2023 | 2:51 PM

ಒಂದು ಸಿನಿಮಾ ಎಲ್ಲರಿಗೂ ಇಷ್ಟವಾಗಲೇಬೇಕೆಂದೇನೂ ಇಲ್ಲ. ಬಾಕ್ಸ್ ಆಫೀಸ್​ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ಚಿತ್ರಗಳು ಕೆಲವರಿಗೆ ಇಷ್ಟ ಆಗದೇ ಇದ್ದ ಉದಾಹರಣೆ ಸಾಕಷ್ಟಿದೆ. ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಓಪನ್ ಆಗಿ ಹೇಳಿಕೊಂಡಾಗ ಟೀಕೆ ಎದುರಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು. ಆಗಸ್ಟ್ 25ರಂದು ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ (Toby Movie) ರಿಲೀಸ್ ಆಗಿದೆ. ಈ ಚಿತ್ರವನ್ನು ಜನರು ಇಷ್ಟಪಡುತ್ತಿದ್ದಾರೆ. ಯುವತಿಯೊಬ್ಬರು ಸಿನಿಮಾ ಇಷ್ಟವಾಗಿಲ್ಲ ಎಂಬುದನ್ನು ಹೇಳಿಕೊಂಡಿದ್ದಾರೆ. ಇದಕ್ಕೆ ಕೆಲವರು ಅವಾಚ್ಯ ಶಬ್ದಗಳಿಂದ ಯುವತಿಯನ್ನು ನಿಂದಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ರಾಜ್ ಬಿ. ಶೆಟ್ಟಿ (Raj B Shetty) ಪ್ರತಿಕ್ರಿಯೆ ನೀಡಿದ್ದಾರೆ.

‘ಟೋಬಿ ಚೆನ್ನಾಗಿಲ್ಲ’ ಎಂದು ಯುವತಿಯೊಬ್ಬರು ಥಿಯೇಟರ್ ಎದುರು ಹೇಳಿದ್ದಾರೆ. ಇದನ್ನು ಕೇಳಿಸಿಕೊಂಡ ಇಬ್ಬರು ಥಿಯೇಟರ್​​ ಆವರಣದಲ್ಲೇ ಯುವತಿಗೆ ಅವಾಜ್ ಹಾಕಿದ್ದಾರೆ. ಅಶ್ಲೀಲ ಶಬ್ದಗಳಿಂದ ಬೈದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಸೋಶಿಯಲ್ ಮೀಡಿಯಾ ಪೇಜ್​ಗಳಲ್ಲಿ ಪೋಸ್ಟ್ ಮಾಡಿ ರಾಜ್ ಬಿ ಶೆಟ್ಟಿ ಅವರನ್ನು ಪ್ರಶ್ನೆ ಮಾಡಲಾಯಿತು. ಇದಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅವರು ನಮ್ಮ ಸಿನಿಮಾ ಟೀಂನವರಲ್ಲ. ಆದರೂ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

‘ಸಿನಿಮಾ ಕೂಡ ವಿಮರ್ಶೆಗೆ ಒಳಪಡುವ ಮಾಧ್ಯಮ. ನಮ್ಮ ಸಿನಿಮಾನ ದುಡ್ಡುಕೊಟ್ಟು ನೋಡುವ ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುವ ಹಕ್ಕು ಹೊಂದಿದ್ದಾರೆ. ಅದನ್ನು ಒಪ್ಪಲು ಅಥವಾ ಒಪ್ಪದಿರಲು ನಾವು ಸ್ವತಂತ್ರರು. ಆದರೆ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜನರಿಗೆ ಕಿರುಕುಳ ನೀಡಲು ಪ್ರಯತ್ನಿಸಬಾರದು. ಈ ವಿಡಿಯೋದಲ್ಲಿರುವ ವ್ಯಕ್ತಿಗಳಿಗೂ ನಮ್ಮ ಚಿತ್ರಕ್ಕೂ ಸಂಬಂಧ ಇಲ್ಲ. ಆದರೆ ಯುವತಿ ಎದುರಿಸಿದ ಕಿರುಕುಳಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ನಮ್ಮನ್ನು ಕ್ಷಮಿಸಿ’ ಎಂದು ರಾಜ್ ಬಿ ಶೆಟ್ಟಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Toby Review: ಮಾತನಾಡದೆ ಮನಸ್ಸಿಗೆ ನಾಟುವ ‘ಟೋಬಿ’; ಇಲ್ಲಿದೆ ಒಂದಷ್ಟು ಪ್ಲಸ್​, ಇನ್ನೊಂದಿಷ್ಟು ಮೈನಸ್​

ಗನ ಪಾತ್ರದಲ್ಲಿ ಅವರು ಗಮನ ಸೆಳೆದಿದ್ದಾರೆ. ಚೈತ್ರಾ ಆಚಾರ್ ಪಾತ್ರ ಕೂಡ ಹೈಲೈಟ್ ಆಗಿದೆ. ಈ ಚಿತ್ರಕ್ಕೆ ಭರ್ಜರಿ ಪ್ರಚಾರ ನೀಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಎಲ್ಲರೂ ಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us