Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲ್ಕರ್ ಸಲ್ಮಾನ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ರಾಜ್ ಬಿ ಶೆಟ್ಟಿ

dulquer salmaan: ನಟ ದುಲ್ಕರ್ ಸಲ್ಮಾನ್ ಸಿನಿಮಾಕ್ಕೆ ಕನ್ನಡದ ರಾಜ್ ಬಿ ಶೆಟ್ಟಿ ನಿರ್ದೇಶನ ಹೇಳಲಿದ್ದಾರೆ. ಗುಟ್ಟನ್ನು ಸ್ವತಃ ದುಲ್ಕರ್ ಬಿಟ್ಟುಕೊಟ್ಟಿದ್ದಾರೆ.

ದುಲ್ಕರ್ ಸಲ್ಮಾನ್​ಗೆ ಆಕ್ಷನ್ ಕಟ್ ಹೇಳಲಿದ್ದಾರೆ ರಾಜ್ ಬಿ ಶೆಟ್ಟಿ
ದುಲ್ಕರ್ ಸಲ್ಮಾನ್
Follow us
ಮಂಜುನಾಥ ಸಿ.
|

Updated on: Aug 18, 2023 | 9:36 PM

ರಾಜ್ ಬಿ ಶೆಟ್ಟಿ, (Raj B Shetty) ಕನ್ನಡದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು. ರಾಜ್ ಬಿ ಶೆಟ್ಟಿ ನಿರ್ದೇಶನದ ಎರಡು ಸಿನಿಮಾಗಳಷ್ಟೆ ಈ ವರೆಗೆ ಬಿಡುಗಡೆ ಆಗಿವೆ ಆದರೆ ಅವರ ನಿರ್ದೇಶಕತ್ವದ ಬಗ್ಗೆ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಚರ್ಚೆಗಳು ನಡೆದಿವೆ. ನಿರ್ದೇಶನದ ಜೊತೆಗೆ ನಟರಾಗಿಯೂ ಖ್ಯಾತಿ ಗಳಿಸಿರುವ ರಾಜ್ ಬಿ ಶೆಟ್ಟಿ ಕನ್ನಡ ಮಾತ್ರವೇ ಅಲ್ಲದೆ ಇದೀಗ ಮಲಯಾಳಂ (Malayalam) ಸಿನಿಮಾ ಒಂದರಲ್ಲಿಯೂ ನಟಿಸುತ್ತಿದ್ದಾರೆ. ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಲಯಾಳಂ ಸ್ಟಾರ್ ನಟರೊಬ್ಬರಿಗೆ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ.

ಮಲಯಾಳಂ ಮಾತ್ರವೇ ಅಲ್ಲದೆ ತಮಿಳು, ತೆಲುಗು, ಹಿಂದಿ ಚಿತ್ರರಂಗದಲ್ಲಿಯೂ ತಮ್ಮ ನಟನೆಯಿಂದ ಪ್ರೇಕ್ಷಕರನ್ನು, ಸಿನಿಮಾ ಕರ್ಮಿಗಳನ್ನು ಸೆಳೆದಿರುವ ನಿಜವಾದ ‘ಪ್ಯಾನ್ ಇಂಡಿಯಾ ಸ್ಟಾರ್’ ದುಲ್ಕರ್ ಸಲ್ಮಾನ್​ಗೆ, ರಾಜ್ ಬಿ ಶೆಟ್ಟಿ ಸಿನಿಮಾ ನಿರ್ದೇಶಿಸಲಿದ್ದಾರೆ. ಈ ಬಗ್ಗೆ ಸ್ವತಃ ದುಲ್ಕರ್ ಸಲ್ಮಾನ್ ಮಾಹಿತಿ ಹಂಚಿಕೊಂಡಿದ್ದಾರೆ.

ಮಲಯಾಳಂ, ತೆಲುಗು, ತಮಿಳು, ಹಿಂದಿ ಚಿತ್ರರಂಗಗಳಲ್ಲಿ ಕೆಲಸ ಮಾಡಿರುವ, ಮಾಡುತ್ತಿರುವ ದುಲ್ಕರ್ ಸಲ್ಮಾನ್ ಈ ವರೆಗೆ ಕನ್ನಡ ಸಿನಿಮಾದಲ್ಲಿ ನಟಿಸಿಲ್ಲ. ಇತ್ತೀಚೆಗಿನ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿರುವ ನಟ ದುಲ್ಕರ್ ಸಲ್ಮಾನ್, ”ಕನ್ನಡದಿಂದ ಯಾವುದಾದರೂ ಎಕ್ಸೈಟಿಂಗ್ ಆದ ಅವಕಾಶಕ್ಕಾಗಿ ಕಾಯುತ್ತಿದ್ದೇನೆ” ಎಂದಿದ್ದಾರೆ. ಮುಂದುವರೆದು, ”ನನ್ನ ವೇಯ್​ಫರೇರ್ ನಿರ್ಮಾಣ ಸಂಸ್ಥೆ ಮೂಲಕ ರಾಜ್ ಬಿ ಶೆಟ್ಟಿ ಜೊತೆಗೆ ಕೆಲಸ ಮಾಡುವ ಸಾಧ್ಯತೆ ಇದೆ” ಎಂದಿದ್ದಾರೆ. ಆ ಮೂಲಕ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ದುಲ್ಕರ್ ಸಲ್ಮಾನ್ ನಟಿಸುವ ಬಗ್ಗೆ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.

ಇದನ್ನೂ ಓದಿ:ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿ ದುಲ್ಕರ್ ಸಲ್ಮಾನ್; ‘ಕಿಂಗ್’ ರೀತಿ ಪೋಸ್ ಕೊಟ್ಟ ಹೀರೋ

ರಾಜ್ ಬಿ ಶೆಟ್ಟಿ, ‘ರುಧಿರಂ’ ಹೆಸರಿನ ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾಗಿದೆ. ಇತ್ತೀಚೆಗಿನ ಸಂದರ್ಶನದಲ್ಲಿ ಮಲಯಾಳಂ ಚಿತ್ರರಂಗದ ಬಗ್ಗೆ ಅಲ್ಲಿನವರ ಕೆಲಸದ ಪದ್ಧತಿ ಬಗ್ಗೆ ಖುಷಿಯಿಂದ ರಾಜ್ ಬಿ ಶೆಟ್ಟಿ ಹೇಳಿಕೊಂಡಿದ್ದರು. ಇದೀಗ ದುಲ್ಕರ್ ಸಲ್ಮಾನ್ ಅಂಥಹಾ ನಟನ ಸಿನಿಮಾ ನಿರ್ದೇಶನದ ಹೊಸ್ತಿಲಲ್ಲಿದ್ದಾರೆ.

ಇನ್ನು ದುಲ್ಕರ್ ಸಲ್ಮಾನ್ ನಟನೆಯ ಎರಡು ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ. ಮಲಯಾಳಂನಲ್ಲಿ ನಟಿಸಿರುವ ಪ್ಯಾನ್ ಇಂಡಿಯಾ ಸಿನಿಮಾ ‘ಕಿಂಗ್ ಆಫ್ ಕೋಟಾ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇದರ ಜೊತೆಗೆ ಹಿಂದಿಯ ವೆಬ್ ಸರಣಿ ‘ಗನ್ಸ್ ಆಂಡ್ ಗುಲಾಬ್ಸ್’ ಕೆಲವೇ ದಿನಗಳಲ್ಲಿ ನೆಟ್​ಫ್ಲಿಕ್ಸ್​ನಲ್ಲಿ ತೆರೆಗೆ ಬರಲಿದೆ. ಈ ವೆಬ್ ಸರಣಿಯನ್ನು ರಾಜ್ ಆಂಡ್ ಡಿಕೆ ನಿರ್ದೇಶನ ಮಾಡಿದ್ದಾರೆ. ಇದೇ ಜೋಡಿ ಈ ಹಿಂದೆ ‘ಫ್ಯಾಮಿಲಿ ಮ್ಯಾನ್’ ಹಾಗೂ ಶಾಹಿದ್ ಕಪೂರ್ ನಟನೆಯ ‘ಫರ್ಜಿ’ ವೆಬ್ ಸರಣಿಗಳನ್ನು ನಿರ್ದೇಶನ ಮಾಡಿತ್ತು.

ಇನ್ನು ರಾಜ್ ಬಿ ಶೆಟ್ಟಿ ನಟನೆಯ ‘ಟೋಬಿ’ ಸಿನಿಮಾ ಇದೇ ತಿಂಗಳು ತೆರೆಗೆ ಬರಲಿದೆ. ಆ ಸಿನಿಮಾದ ಚಿತ್ರಕತೆಯನ್ನು ರಾಜ್ ಬಿ ಶೆಟ್ಟಿ ರಚಿಸಿದ್ದಾರೆ. ಅದರ ಬಳಿಕ ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ರಮ್ಯಾ ನಿರ್ಮಾಣ ಮಾಡಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ