AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ವಾರವೂ ‘ಸು ಫ್ರಮ್ ಸೋ’ ಹೌಸ್​ಫುಲ್; ಬೆಂಗಳೂರಲ್ಲೇ 450ಕ್ಕೂ ಅಧಿಕ ಶೋ

‘ಸು ಫ್ರಮ್ ಸೋ’ ಸಿನಿಮಾ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 450ಕ್ಕೂ ಹೆಚ್ಚು ಶೋಗಳು ಸಿಕ್ಕಿವೆ. ಬುಕ್ ಮೈ ಶೋನಲ್ಲಿ 9.5 ರೇಟಿಂಗ್ ಪಡೆದ ಈ ಚಿತ್ರ, 50 ಕೋಟಿ ರೂಪಾಯಿ ಕ್ಲಬ್ ಸೇರಲು ಸಜ್ಜಾಗಿದೆ. ಮಲಯಾಳಂನಲ್ಲಿ ಯಶಸ್ಸು ಕಂಡ ಈ ಸಿನಿಮಾ, ಆಗಸ್ಟ್ 8 ರಂದು ತೆಲುಗಿನಲ್ಲೂ ಬಿಡುಗಡೆಯಾಗಲಿದೆ.

ಮೂರನೇ ವಾರವೂ ‘ಸು ಫ್ರಮ್ ಸೋ’ ಹೌಸ್​ಫುಲ್; ಬೆಂಗಳೂರಲ್ಲೇ 450ಕ್ಕೂ ಅಧಿಕ ಶೋ
ಸು ಫ್ರಮ್ ಸೋ
ರಾಜೇಶ್ ದುಗ್ಗುಮನೆ
|

Updated on: Aug 04, 2025 | 8:52 AM

Share

‘ಸು ಫ್ರಮ್ ಸೋ’ ಸಿನಿಮಾ (Su From So Movie) ಮೂರನೇ ವಾರಕ್ಕೆ ಕಾಲಿಟ್ಟಿದೆ. ಅಚ್ಚರಿಯ ವಿಚಾರ ಏನೆಂದರೆ ಸೋಮವಾರವೂ ಅನೇಕ ಶೋಗಳು ಸೋಲ್ಡ್​​ಔಟ್ ಆಗಿವೆ. ಕನ್ನಡದ ಸಿನಿಮಾ ಒಂದು ಈ ರೀತಿಯಲ್ಲಿ ಮೋಡಿ ಮಾಡುತ್ತಿರುವುದು ಇದೇ ಮೊದಲು ಎಂದರೂ ತಪ್ಪಾಗಲಾರದು. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 56 ಸಾವಿರ ಮಂದಿ ವೋಟ್ ಮಾಡಿದ್ದು, 9.5 ರೇಟಿಂಗ್ ಪಡೆದುಕೊಂಡಿದೆ. ಈ ಚಿತ್ರದ ಅಬ್ಬರ ಇನ್ನೂ ಕೆಲ ವಾರ ಸಾಗುವ ನಿರೀಕ್ಷೆ ಇದೆ. ಸಿನಿಮಾಗೆ ಬೆಂಗಳೂರಿನಲ್ಲಿ 450ಕ್ಕೂ ಅಧಿಕ ಶೋಗಳು ಸಿಕ್ಕಿವೆ.

‘ಸು ಫ್ರಮ್ ಸೋ’ ಸಿನಿಮಾ ರಿಲೀಸ್ ಆಗಿದ್ದು ಜುಲೈ 25ರಂದು. ಈಗಾಗಲೇ ಸಿನಿಮಾ ಎರಡು ವಾರಗಳನ್ನು ಪೂರ್ಣಗೊಳಿಸಿ, ಮೂರನೇ ವಾರಕ್ಕೆ ಕಾಲಿಟ್ಟಿದೆ. ಮೂರನೇ ಸೋಮವಾರ ಸಿನಿಮಾಗೆ ಶುಭ ಸುದ್ದಿಯನ್ನೇ ತಂದಿದೆ. ಬೆಂಗಳೂರಿನ ಮಲ್ಟಿಪ್ಲೆಕ್ಸ್​ಗಳಲ್ಲಿ ಸಿನಿಮಾಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ. ರಾತ್ರಿ ಶೋಗಳಿಗೆ ಒಂದು ದಿನ ಮೊದಲೇ ಬುಕಿಂಗ್ ನಡೆಯುತ್ತಿದ್ದು, ಕೆಲವು ಶೋಗಳು ಫಾಸ್ಟ್ ಫಿಲ್ಲಿಂಗ್ ಹಂತಕ್ಕೆ ಬಂದಿವೆ.

ಇನ್ನು, ‘ಕನ್ನಡ ಸಿನಿಮಾಗಳಿಗೆ ಮಲ್ಟಿಪ್ಲೆಕ್ಸ್​ಗಳು ಶೋ ನೀಡುತ್ತಿಲ್ಲ’ ಎಂಬ ಪರಿಸ್ಥಿತಿ ಈಗ ಬದಲಾಗಿದೆ. ‘ಸು ಫ್ರಮ್ ಸೋ’ಗೆ ಅನೇಕ ಮಲ್ಟಿಪ್ಲೆಕ್ಸ್​ಗಳು 10ರಿಂದ 15 ಶೋಗಳನ್ನು ನೀಡುತ್ತಿವೆ. ಈ ಎಲ್ಲಾ ಶೋಗಳು ಹೌಸ್​ಫುಲ್ ಪ್ರದರ್ಶನ ಕಾಣುತ್ತಿವೆ. ಈ ಚಿತ್ರದ ಕಲೆಕ್ಷನ್ ಹೀಗೆಯೇ ಮುಂದುವರಿದರೆ ಇದೇ ವಾರ ಸಿನಿಮಾ 50 ಕೋಟಿ ರೂಪಾಯಿ ಕ್ಲಬ್ ಸೇರಲಿದೆ. ಮೂರನೇ ವಾರ ಚಿತ್ರಕ್ಕೆ ಬೆಳಿಗ್ಗೆ 7.50ಕ್ಕೆ ಶೋ ಪ್ರದರ್ಶನ ಮಾಡುತ್ತಿರುವುದು ಇದೇ ಮೊದಲು.

ಇದನ್ನೂ ಓದಿ
Image
ಸಿನಿಮಾ ಗೆಲ್ಲದಿದ್ದರೂ 500 ಕೋಟಿ ರೂ. ಒಡೆಯ ಅರ್ಬಾಜ್ ಖಾನ್
Image
ಲಾಭದಲ್ಲೇ ಇದೆ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ?
Image
ಭಾನುವಾರ ಒಂದೇ ದಿನ ಬಜೆಟ್​ಗೂ ಡಬಲ್ ಕಲೆಕ್ಷನ್ ಮಾಡಿದ ‘ಸು ಫ್ರಮ್ ಸೋ’
Image
‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?

ಇದನ್ನೂ ಓದಿ: ಭಾನುವಾರ ಒಂದೇ ದಿನ ಬಜೆಟ್​ಗೂ ಡಬಲ್ ಕಲೆಕ್ಷನ್ ಮಾಡಿದ ‘ಸು ಫ್ರಮ್ ಸೋ’; ಒಟ್ಟಾರೆ ಗಳಿಕೆ 10 ಪಟ್ಟು

ಈಗಾಗಲೇ ಮಲಯಾಳಂ ಭಾಷೆಯಲ್ಲಿ ‘ಸು ಫ್ರಮ್ ಸೋ’ ಚಿತ್ರ ಯಶಸ್ಸು ಕಂಡಿದೆ. ಅಲ್ಲಿಯೂ ಸಿನಿಮಾಗೆ ಬಾಯ್ಮಾತಿನ ಪ್ರಚಾರ ಸಿಕ್ಕಿದೆ. ಈಗ ಚಿತ್ರವು ತೆಲುಗಿನಲ್ಲೂ ಬಿಡುಗಡೆ ಕಾಣಲು ರೆಡಿ ಆಗಿದೆ. ಅಲ್ಲಿನ ಜನರು ಚಿತ್ರವನ್ನು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಮೈತ್ರಿ ಮೂವೀ ಮೇಕರ್ಸ್ ಆಗಸ್ಟ್ 8ರಂದು ಸಿನಿಮಾನ ಬಿಡುಗಡೆ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!