AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಕಾರಣಕ್ಕೆ ಕನ್ನಡ ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ

‘ಕರಾವಳಿ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ ಮುಂತಾದವರು ನಟಿಸಿದ್ದಾರೆ. ಚಿತ್ರತಂಡದ ಜೊತೆ ಪ್ರಜ್ವಲ್ ಅವರಿಗೆ ಅಸಮಾಧಾನ ಇದೆ ಎಂಬುದು ಗೊತ್ತಾಗಿದೆ. ಟ್ರೇಲರ್ ಪ್ರೀಮಿಯರ್ ವೇಳೆ ಅವರ ಅಭಿಮಾನಿಗಳು ಬಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಗ್ಗೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

ಇದೇ ಕಾರಣಕ್ಕೆ ಕನ್ನಡ ಚಿತ್ರರಂಗ ಉದ್ದಾರ ಆಗಲ್ಲ: ‘ಕರಾವಳಿ’ ವಿವಾದಕ್ಕೆ ರಾಜ್ ಬಿ. ಶೆಟ್ಟಿ ಪ್ರತಿಕ್ರಿಯೆ
Raj B Shetty, Prajwal DevarajImage Credit source: Tv9 Kannada
ಮದನ್​ ಕುಮಾರ್​
|

Updated on: Jul 07, 2026 | 5:39 PM

Share

ಮುಖ್ಯಾಂಶಗಳು

  • ಬಿಡುಗಡೆಗೆ ಸಿದ್ಧವಾಗಿರುವ ‘ಕರಾವಳಿ’ ಸಿನಿಮಾದಲ್ಲಿ ಈಗ ವಿವಾದದ ಸದ್ದು.
  • ಟ್ರೇಲರ್ ಪ್ರೀಮಿಯರ್ ವೇಳೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳಿಂದ ಗಲಾಟೆ.
  • ಒಟ್ಟಾರೆ ಘಟನೆ ಬಗ್ಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ ನಟ ರಾಜ್ ಬಿ. ಶೆಟ್ಟಿ.

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಹುಟ್ಟುಹಾಕಿರುವ ‘ಕರಾವಳಿ’ ಸಿನಿಮಾ (Karavali Movie) ಈಗ ವಿವಾದದ ಮೂಲಕ ಸುದ್ದಿ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಪ್ರೀಮಿಯರ್ ವೇಳೆ ನಟ ಪ್ರಜ್ವಲ್ ದೇವರಾಜ್ (Prajwal Devaraj) ಅವರ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ. ನಟ ರಾಜ್ ಬಿ. ಶೆಟ್ಟಿ ಅವರು ಈ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆದ ಬಳಿಕ ಪ್ರಜ್ವಲ್ ಅವರಿಗೆ ಅಸಮಾಧಾನ ಉಂಟಾಗಿರಬಹುದಾ ಎಂಬ ಪ್ರಶ್ನೆ ಇದೆ. ಅದಕ್ಕೆ ಸ್ವತಃ ರಾಜ್ ಶೆಟ್ಟಿ (Raj B Shetty) ಅವರು ಉತ್ತರ ನೀಡಿದ್ದಾರೆ. ಇಂಥ ವಿಷಯಗಳನ್ನು ಚರ್ಚೆ ಮಾಡುತ್ತಿರುವುದರಿಂದಲೇ ಕನ್ನಡ ಚಿತ್ರರಂಗ ಉದ್ಧಾರ ಆಗಿಲ್ಲ ಅವರು ಖಡಕ್ ಆಗಿ ಹೇಳಿದ್ದಾರೆ.

‘ಈ ಸಿನಿಮಾದಲ್ಲಿ ನಾನು ಒಂದು ಅತಿಥಿ ಪಾತ್ರ ಮಾಡುತ್ತಿದ್ದೇನೆ. ಈ ಸಿನಿಮಾದ ಟೈಟಲ್, ಪೋಸ್ಟರ್ ಎಲ್ಲವೂ ಪ್ರಜ್ವಲ್ ದೇವರಾಜ್ ಅವರ ಹೆಸರಲ್ಲೇ ಇದೆ. ಅದು ನನಗೆ ಗೊತ್ತಿತ್ತು ಕೂಡ. ನಾನು ಬಂದಮೇಲೆ ಇರಿಸುಮುರಿಸು ಆಯ್ತಾ ಎಂಬ ಪ್ರಶ್ನೆ ಕೇಳಿದ್ದೀರಿ. ನಾನು ಈ ಚಿತ್ರಕ್ಕೆ ಮೊದಲ ಆಯ್ಕೆ ಆಗಿರಲಿಲ್ಲ. ನನಗಿಂತ ದೊಡ್ಡ ನಟ ಇವರ ಆಯ್ಕೆಯಾಗಿತ್ತು. ಆದರೆ ಕಾರಣಾಂತರಗಳಿಂದ ಅವರು ಆಗಲಿಲ್ಲ ಎಂದಿದ್ದಕ್ಕೆ ಕೊನೆಯಲ್ಲಿ ನಾನು ಬಂದಿದ್ದು. ಆ ಪಾತ್ರ ಮೊದಲೇ ಇತ್ತು’ ಎಂದು ರಾಜ್ ಬಿ. ಶೆಟ್ಟಿ ಅವರು ಸ್ಪಷ್ಟನೆ ನೀಡಿದ್ದಾರೆ.

‘ಸಿನಿಮಾ ಎಂಬುದು ನನಗಿಂತ ದೊಡ್ಡದು’

‘ನಾನು ಇಲ್ಲಿ ಯಾರ ಜೊತೆಗೂ ಪೈಪೋಟಿ ಮಾಡೋಕೆ ಬಂದಿಲ್ಲ. ನಾವು ಇಲ್ಲಿ ಸಿನಿಮಾ ಮಾಡುತ್ತಿದ್ದೇವೆ. ಎಲ್ಲಕ್ಕಿಂತ ಮೊದಲು ನಾನೊಬ್ಬ ತಂತ್ರಜ್ಞ. ಸಿನಿಮಾ ಮಾಡೋದಕ್ಕೆ ಎಷ್ಟು ಶ್ರಮ ಇರುತ್ತದೆ ಎಂಬುದು ನನಗೆ ಗೊತ್ತು. ನನ್ನೊಬ್ಬನ ಜೀವನ, ನನ್ನೊಬ್ಬನ ಹೆಸರು, ನನ್ನೊಬ್ಬನ ಪೈಪೋಟಿ ಎಂಬುದರಲ್ಲಿ ನನಗೆ ಸಮ್ಮತಿ ಇಲ್ಲ. ಸಿನಿಮಾ ಎಂಬುದು ನನಗಿಂತ ದೊಡ್ಡದು. ಒಂದು ವೇಳೆ ಮುಂದಿನ ಸಿನಿಮಾದಲ್ಲಿ ನನ್ನ ಹೆಸರು ಹಾಕದೇ ಇದ್ದರೂ ಕೂಡ ಯಾರೂ ಬರಲ್ಲ’ ಎಂದು ರಾಜ್ ಬಿ. ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ: ‘ಕರಾವಳಿ’ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ ಇದು

‘ಇಂಥ ವಿಷಯ ಮಾತನಾಡಬೇಕಾಗಿ ಬಂದಿರುವುದು ದುರದೃಷ್ಟಕರ. ಕುಂದಾಪುರದ ಒಬ್ಬ ಹುಡುಗ, 9ನೇ ತರಗತಿಗೆ ಮನೆಬಿಟ್ಟು ಓಡಿಬಂದು, ಇವತ್ತು ಇಷ್ಟು ದೊಡ್ಡ ಸಿನಿಮಾ ಮಾಡಿದ್ದಾರೆ. ಇಡೀ ಭಾರತ ನೋಡುವಂತಹ ಗುಣಮಟ್ಟದಲ್ಲಿ ಸಿನಿಮಾ ಮಾಡಿದ್ದಾರೆ. ಆದರೆ ನಾವು ಬೇರೆ ವಿಷಯದ ಬಗ್ಗೆ ಮಾತನಾಡುತ್ತಿದ್ದೇವೆ. ಇದು ತುಂಬ ಬೇಸರದ ವಿಷಯ. ಮನುಷ್ಯತ್ವ ಬಹಳ ಮುಖ್ಯ’ ಎಂದಿದ್ದಾರೆ ರಾಜ್ ಬಿ. ಶೆಟ್ಟಿ.

‘ಇದು ತುಂಬ ದುರದೃಷ್ಟಕರ ವಿಷಯ’

‘ಇಲ್ಲಿ ಯಾವ ಪೈಪೋಟಿ ಇದೆ? ಇದು ಕೇವಲ ನನ್ನ ಸಿನಿಮಾನಾ? ಮಿತ್ರ, ಶ್ರೀಧರ್ ಮುಂತಾದವರು ಈ ಸಿನಿಮಾದಲ್ಲಿ ಮಾಡಿಲ್ವಾ? ನಾನು ಅವರಿಗಿಂತ ದೊಡ್ಡ ಕಲಾವಿದನಾ? ಅವರ ಹೆಸರು ಪೋಸ್ಟರ್​ನಲ್ಲಿ ಇದೆಯಾ? ಇಂಥ ವಿಷಯ ನಾವು ಮಾತನಾಡಬೇಕಾಗಿ ಬಂದಿರುವುದು ತುಂಬ ದುರದೃಷ್ಟಕರ ವಿಷಯ. ಯಾಕೆ ನಮ್ಮ ಇಂಡಸ್ಟ್ರಿ ಉದ್ಧಾರ ಆಗಲ್ಲ ಅಂತ ಕೇಳುತ್ತಾರಲ್ಲ.. ಅದಕ್ಕೆ ಉತ್ತರ ಇದು’ ಎಂದು ರಾಜ್ ಶೆಟ್ಟಿ ಹೇಳಿದ್ದಾರೆ.

ಅಂಥ ಪರಿಸ್ಥಿತಿ ಬಂದರೆ ಚಿತ್ರರಂಗಕ್ಕೆ ವಿದಾಯ:

‘ಯಾಕೆಂದರೆ, ನಾವು ಒಟ್ಟಿಗೆ ಕೆಲಸ ಮಾಡುತ್ತಿಲ್ಲ. ಈ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರಿಗೆ ದೊಡ್ಡ ಹೆಸರು ಬಂದರೆ ನನಗೆ ಬಹಳ ಖುಷಿ. ಕನ್ನಡದ ಒಬ್ಬ ನಟ ಇನ್ನೂ ದೊಡ್ಡ ಸ್ಟಾರ್ ಆಗಿ ಬೆಳೆದ ಎನ್ನುತ್ತೇನೆ. ಮಿತ್ರ ಅವರಿಗೆ ಹೆಸರು ಬಂದರೆ ನನಗೆ ಹೆಮ್ಮೆ ಆಗುತ್ತದೆ. ಅದಕ್ಕೆ ಅವರು ಅರ್ಹರು. ಅವರ ಬಳಿ ಕಿತ್ತುಕೊಂಡು ನಾನೇನು ಮಾಡಲಿ? ಈ ಹಿಂದಿನ ಸಿನಿಮಾಗಳಲ್ಲಿ ನಾನು ಖಳನಾಯಕನಾಗಿ ಕೂಡ ಮಾಡಿದ್ದೇನೆ. ಅಲ್ಲಿ ನನ್ನ ಕಟೌಟ್ ಹಾಕಿ ಅಂತ ನಾನು ಹೇಳಿಲ್ಲ. ‘ಸು ಫ್ರಂ ಸೋ’ ಚಿತ್ರದಲ್ಲಿ ನಾನು ಕಾಮಿಡಿ ಪಾತ್ರ ಮಾಡಿದ್ದೆ. ಆ ಚಿತ್ರದ ಪೋಸ್ಟರ್​ನಲ್ಲಿ ನನ್ನ ಹೆಸರು ಹಾಕಿ ಅಂತ ನಾನು ಕೇಳಿಲ್ಲ. ನನ್ನ ಜೀವನದಲ್ಲಿ ನಾನು ಅದನ್ನು ಮಾಡಲ್ಲ. ಒಂದು ವೇಳೆ ಮಾಡಿದರೆ ಆವತ್ತು ನಾನು ಚಿತ್ರರಂಗ ಬಿಡಬೇಕು ಅಂತ ಭಾವಿಸುತ್ತೇನೆ’ ಎಂದು ರಾಜ್ ಬಿ. ಶೆಟ್ಟಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಅಯೋಧ್ಯೆ ರಾಮಮಂದಿರ ದೇಣಿಗೆ ಲೆಕ್ಕ ಬಹಿರಂಗ
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಜೋಗ ಜಲಪಾತದ ಜಲವೈಭವ ಕಣ್ತುಂಬಿಕೊಂಡ ಪ್ರವಾಸಿಗರು
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಒಂದೇ ರಾತ್ರಿಯಲ್ಲಿ ದೂದ್​ಗಂಗಾ ನದಿಯಲ್ಲಿ 20 ಅಡಿ ಏರಿಕೆ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಬಂಡಾಜೆ ಫಾಲ್ಸ್​ನಂತಹ ಅಪಾಯಕಾರಿ ಸ್ಥಳದಲ್ಲಿ ಪ್ರವಾಸಿಗರ ಹುಚ್ಚಾಟ!
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕರಾವಳಿ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಡಬ್ ಮಾಡಲ್ವ? ನಿರ್ದೇಶಕರ ಸ್ಪಷ್ಟನೆ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ
ಮಹಾ ಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ
ಮಹಾ ಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ: ಚಿಕ್ಕೋಡಿಯಲ್ಲಿ ಪ್ರವಾಹ ಭೀತಿ