ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳಿಗೆ ಹೊಸ ರೂಪ; ಯುವ ಜನತೆಗೂ ಇಷ್ಟ ಗೋಲ್ಡನ್​ ಗೀತೆಗಳು

Rajan Nagendra Songs: ರಾಜನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ರಾಜನ್ ನಾಗೇಂದ್ರ ಸಂಗೀತ ನೀಡಿರುವ ಹಾಡುಗಳಿಗೆ ಹೊಸ ರೂಪ; ಯುವ ಜನತೆಗೂ ಇಷ್ಟ ಗೋಲ್ಡನ್​ ಗೀತೆಗಳು
ಅನಂತ ರಾಜನ್ ಸುದ್ದಿಗೋಷ್ಠಿ
Follow us
ಮದನ್​ ಕುಮಾರ್​
|

Updated on: May 30, 2023 | 2:28 PM

ಸ್ಯಾಂಡಲ್​ವುಡ್​ನ ಖ್ಯಾತ ಸಂಗೀತ ನಿರ್ದೇಶಕ ರಾಜನ್ (ರಾಜನ್ ನಾಗೇಂದ್ರ) ಅವರು ಸಂಗೀತ ಕ್ಷೇತ್ರದಲ್ಲಿ ಹೊಸ ಪ್ರತಿಭೆಗಳನ್ನು ಸಂಗೀತಗಾರರನ್ನಾಗಿ ಪರಿಚಯಿಸುವುದಕ್ಕಾಗಿ ‘ಸಪ್ತ ಸ್ವರಾಂಜಲಿ ಇನ್ಸ್​ಟಿಟ್ಯೂಟ್ ಆಫ್ ಮ್ಯೂಸಿಕ್’ ಎಂಬ ಸಂಸ್ಥೆಯನ್ನು ಆರಂಭಿಸಿದ್ದರು. ಈ ಸಂಸ್ಥೆಯಲ್ಲಿ ಕಲಿತಿರುವ ಅನೇಕರು ಇಂದು ಸಂಗೀತ (Movie) ಕ್ಷೇತ್ರದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿದ್ದಾರೆ. ಈಗ ರಾಜನ್ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಟ್ರಸ್ಟ್‌’ ವತಿಯಿಂದ ರಾಜನ್ ನಾಗೇಂದ್ರ (Rajan Nagendra) ಅವರ ಗೀತೆಗಳಿಗೆ ಹೊಸರೂಪ ನೀಡಿ ಕೇಳುಗರ ಮುಂದೆ ತರುವ ಪ್ರಯತ್ನದಲ್ಲಿದ್ದಾರೆ. ಅಂದಹಾಗೆ, ರಾಜನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಪುತ್ರ ಅನಂತ ರಾಜನ್, ‘ರಾಜನ್ ನಾಗೇಂದ್ರ ಗಾನಯಾನ’ ಎಂಬ ಹೆಸರಿನಲ್ಲಿ ತಮ್ಮ ಯೋಜನೆಯನ್ನು ಘೋಷಿಸಿದ್ದಾರೆ. ಆ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನಂತ ರಾಜನ್ ಮಾತನಾಡಿದರು. ‘ಕನ್ನಡದಿಂದ ಸಂಗೀತ ಲೋಕಕ್ಕೆ ಹೊಸ ಪ್ರತಿಭೆಗಳು ಬರಬೇಕು ಎಂಬ ಆಶಯದಿಂದ ನಮ್ಮ ತಂದೆ ರಾಜನ್ ಬದುಕಿರುವಾಗಲೇ ‘ಸಪ್ತ ಸ್ವರಾಂಜಲಿ’ ಎಂಬ ಸಂಗೀತ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸಂಸ್ಥೆಯಿಂದ ಈಗಾಗಲೇ ಅನೇಕ ಪ್ರತಿಭೆಗಳು ಕಲಾವಿದರಾಗಿ ಸಂಗೀತ ಲೋಕಕ್ಕೆ ಪರಿಚಯವಾಗಿದ್ದಾರೆ. ಇನ್ನು ಕನ್ನಡ ಸಿನಿಮಾ ಸಂಗೀತದಲ್ಲಿ ರಾಜನ್- ನಾಗೇಂದ್ರ ಅವರ ಹಾಡುಗಳು ಚಿನ್ನ ಇದ್ದಂತೆ. ಹಳೆಯದಾದರೂ ಚಿನ್ನಕ್ಕೆ ಇರುವ ಬೆಲೆ ಇದ್ದೇ ಇರುತ್ತದೆ. ಹಳೆಯ ಚಿನ್ನವನ್ನು ಪಾಲಿಶ್ ಮಾಡಿ ಮತ್ತೆ ಬಳಸುವಂತೆ, ರಾಜನ್ ನಾಗೇಂದ್ರ ಅವರ ಈ ಗೋಲ್ಡನ್ ಹಾಡುಗಳನ್ನು ಇಂದಿನ ಕೇಳುಗರಿಗೆ ಇಷ್ಟವಾಗುವಂತೆ, ಹೊಸ ರೂಪದಲ್ಲಿ ಮತ್ತೆ ತರುತ್ತಿದ್ದೇವೆ’ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

‘ನಾನು ನನ್ನ ಶಾಲಾ ದಿನಗಳಿಂದಲೇ ತಂದೆಯವರ ಬಹುತೇಕ ಮ್ಯೂಸಿಕ್ ರೆಕಾರ್ಡಿಂಗ್‌ಗಳನ್ನು ಹತ್ತಿರದಿಂದ ನೋಡಿದ್ದೆ. ಶಾಲೆಯಿಂದ ನೇರವಾಗಿ ರೆಕಾರ್ಡಿಂಗ್ ಸ್ಟುಡಿಯೋಗೆ ಹೋಗುತ್ತಿದ್ದೆ. ಹಾಗಾಗಿ ಅವರು ಮಾಡಿರುವ ಬಹುತೇಕ ಹಾಡುಗಳ ರೆಕಾರ್ಡಿಂಗ್ ಬಗ್ಗೆ ನನಗೆ ಅರಿವಿದೆ. ತುಂಬ ವೃತ್ತಿಪರವಾಗಿ ರೆಕಾರ್ಡಿಂಗ್ ಕೆಲಸ ಮಾಡುತ್ತಿದ್ದರು’ ಎಂದಿದ್ದಾರೆ ಅನಂತ ರಾಜನ್.

ಇದನ್ನೂ ಓದಿ: ಗಂಧರ್ವ ಗಾಯಕಿ ಪಿ.ಸುಶೀಲರಿಗೆ 85ನೇ ಹುಟ್ಟುಹಬ್ಬದ ಸಂಭ್ರಮ!

‘ತಂದೆಯ ನಿಧನದ ನಂತರ ಅವರ ಕೆಲಸವನ್ನು ಟ್ರಸ್ಟ್‌ ಮೂಲಕ ನಾವು ಮಾಡಲು ಮುಂದಾದೆವು. ಈಗಾಗಲೇ ರಾಜನ್ ನಾಗೇಂದ್ರ ಅವರ ಒಂದಷ್ಟು ಹಳೆಯ ಹಾಡುಗಳಿಗೆ ಹೊಸರೂಪ ಕೊಟ್ಟಿದ್ದೇವೆ. ರಾಜನ್ ಬದುಕಿದ್ದಾಗ ತಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದ ಪ್ರತಿಭೆಗಳಿಗೆ ವರ್ಷಕ್ಕೆ ಮೂರು ನಾಲ್ಕು ಕಾರ್ಯಕ್ರಮಗಳ ಮೂಲಕ ಅವರನ್ನು ಸಂಗೀತ ಲೋಕಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದರು. ಅದನ್ನು ಮುಂದುವರಿಸುವ ಕೆಲಸ ಟ್ರಸ್ಟ್‌ ಮೂಲಕ ನಾವು ಮಾಡುತ್ತಿದ್ದೇವೆ’ ಎಂದು ಅನಂತ ರಾಜನ್ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: ಮಗಳ ವಿಡಿಯೋಗೆ ಕನ್ನಡ ಹಾಡು ಹಾಕಿದ ಡೇವಿಡ್​ ವಾರ್ನರ್​; ಕನ್ನಡಿಗರು ಫುಲ್​ ಫಿದಾ

ಸುದ್ದಿಗೋಷ್ಠಿಯಲ್ಲಿ ಗುರುದತ್, ಲಹರಿ ವೇಲು, ಹಿರಿಯ ನಿರ್ದೇಶಕ ಭಾರ್ಗವ ಉಪಸ್ಥಿತರಿದ್ದರು. ‘ನನ್ನ ನಿರ್ದೇಶನದ 26 ಸಿನಿಮಾಗಳಿಗೆ ರಾಜನ್ ನಾಗೇಂದ್ರ ಸಂಗೀತ ನೀಡಿದ್ದಾರೆ. ಸುಮಾರು 38 ಸಿನಿಮಾಗಳಿಗೆ ಅವರೊಂದಿಗೆ ಕೆಲಸ ಮಾಡಿದ್ದೇನೆ. ಕನ್ನಡ ಚಿತ್ರರಂಗದ ತುಂಬಾ ಅಪರೂಪದ ಸದಭಿರುಚಿಯ ಸಂಗೀತ ನಿರ್ದೇಶಕರಲ್ಲಿ ರಾಜನ್-ನಾಗೇಂದ್ರ ಜೋಡಿ ಕೂಡ ಒಂದು. ಕೆಲಸದಲ್ಲಿ ದೊಡ್ಡ ಮಟ್ಟಕ್ಕೆ ಏರಿದವರು ರಾಜನ್. ಇಂದಿಗೂ ಪ್ರತಿದಿನ ಅವರ ಹಾಡುಗಳನ್ನು ಕೇಳುಗರು ಗುನುಗುತ್ತಿರುವುದೇ ಅವರ ಹಾಡುಗಳ ಜನಪ್ರಿಯತೆಗೆ ದೊಡ್ಡ ಸಾಕ್ಷಿ’ ಎಂದರು ಭಾರ್ಗವ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್