Rishab Shetty: ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್​; ರಿಷಬ್​ ಶೆಟ್ಟಿಯ ಬೆನ್ನು ತಟ್ಟಿದ ತಲೈವಾ

Rajinikanth | Kantara: ‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್​ ಶೆಟ್ಟಿ ಅವರಿಗೆ ಹ್ಯಾಟ್ಸಾಫ್​. ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಜನಿಕಾಂತ್​ ಟ್ವೀಟ್​ ಮಾಡಿದ್ದಾರೆ.

Rishab Shetty: ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್​; ರಿಷಬ್​ ಶೆಟ್ಟಿಯ ಬೆನ್ನು ತಟ್ಟಿದ ತಲೈವಾ
ರಜನಿಕಾಂತ್, ರಿಷಬ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Oct 26, 2022 | 3:32 PM

ಕನ್ನಡದ ‘ಕಾಂತಾರ’ (Kantara) ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಸಿನಿಮಾ ನೋಡಿ ಪರಭಾಷೆಯ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಭೇಷ್​ ಎನ್ನುತ್ತಿದ್ದಾರೆ. ರಿಷಬ್​ ಶೆಟ್ಟಿ (Rishab Shetty) ಅವರ ನಟನೆ, ನಿರ್ದೇಶನಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಕೇಳಿಬರುತ್ತಿದೆ. ಈಗಾಗಲೇ ಪ್ರಭಾಸ್​, ಕಂಗನಾ ರಣಾವತ್​, ಅನುಷ್ಕಾ ಶೆಟ್ಟಿ ಸೇರಿದಂತೆ ಅನೇಕ ಘಟಾನುಘಟಿಗಳು ಈ ಚಿತ್ರದ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈಗಿನದ್ದು ಸೂಪರ್​ ಸ್ಟಾರ್​ ರಜನಿಕಾಂತ್​ (Rajinikanth) ಸರದಿ. ಹೌದು, ರಜನಿಕಾಂತ್​ ಅವರು ‘ಕಾಂತಾರ’ ಚಿತ್ರ ವೀಕ್ಷಿಸಿದ್ದಾರೆ. ಬಳಿಕ ಟ್ವಿಟರ್​ ಮೂಲಕ ತಮ್ಮ ವಿಮರ್ಶೆ ತಿಳಿಸಿದ್ದಾರೆ. ಅವರಿಗೆ ಈ ಚಿತ್ರ ತುಂಬ ಇಷ್ಟ ಆಗಿದೆ. ಇಂಥ ಸಿನಿಮಾವನ್ನು ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ ಮತ್ತು ನಿರ್ದೇಶನ ಮಾಡಿದ ರಿಷಬ್​ ಶೆಟ್ಟಿ ಅವರನ್ನು ತಲೈವಾ ಮನಸಾರೆ ಹೊಗಳಿದ್ದಾರೆ.

ರಜನಿಕಾಂತ್​ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾಡಿದ ಟ್ವೀಟ್​ ವೈರಲ್​ ಆಗಿದೆ. ಇದನ್ನು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ರೀಟ್ವೀಟ್​ ಮಾಡಿಕೊಂಡಿದ್ದು, ತಲೈವಾಗೆ ಧನ್ಯವಾದ ತಿಳಿಸಿದೆ. ಇಂಥ ಲೆಜೆಂಡರಿ ನಟನಿಂದ ಕನ್ನಡದ ಸಿನಿಮಾಗೆ ಪ್ರಶಂಸೆ ಸಿಕ್ಕಿರುವುದು ಎಲ್ಲರಿಗೂ ಹೆಮ್ಮೆ ತಂದಿದೆ. ‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್​ ಶೆಟ್ಟಿ ಅವರಿಗೆ ಹ್ಯಾಟ್ಸಾಫ್​. ಭಾರತೀಯ ಚಿತ್ರರಂಗದಲ್ಲಿ ಮಾಸ್ಟರ್​ ಪೀಸ್​ ಎನಿಸಿಕೊಂಡಿರುವ ಈ ಚಿತ್ರದ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಜನಿಕಾಂತ್​ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Kantara: ‘ಇದು ರಿಷಬ್​ ಮಾಡಿದ ಚಿತ್ರ ಅಲ್ಲ, ದೇವರೇ ಮಾಡ್ಸಿದ್ದು’; ವಿದೇಶದಲ್ಲಿ ‘ಕಾಂತಾರ’ ನೋಡಿ ಜಗ್ಗೇಶ್​ ಪ್ರತಿಕ್ರಿಯೆ
Image
Anushka Shetty: ‘ಕಾಂತಾರ’ ನೋಡಿ ಅನುಷ್ಕಾ ಶೆಟ್ಟಿ ಫಿದಾ; ರಿಷಬ್​ ಬಗ್ಗೆ ಸ್ಪೆಷಲ್​ ಮಾತುಗಳನ್ನು ಹೇಳಿದ ಸ್ಟಾರ್​ ನಟಿ
Image
Kantara Review: ಹಲವು ಸಂಘರ್ಷಗಳ ‘ಕಾಂತಾರ’; ರಿಷಬ್​ ಶೆಟ್ಟಿಯ ಹೊಸ ಅವತಾರ
Image
Kantara Review: ‘ಕಾಂತಾರ’ ವಿಮರ್ಶೆ ಮಾಡಿದ ರಮ್ಯಾ; ರಿಷಬ್​ ಶೆಟ್ಟಿ ಚಿತ್ರದ ಬಗ್ಗೆ ‘ಮೋಹಕ ತಾರೆ’ ಹೇಳಿದ್ದೇನು?

ತುಳುನಾಡಿನ ಭೂತ ಕೋಲ ಕುರಿತ ಕಥೆಯನ್ನು ‘ಕಾಂತಾರ’ ಚಿತ್ರ ಒಳಗೊಂಡಿದೆ. ರಿಷಬ್​ ಶೆಟ್ಟಿ ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಕಿಶೋರ್​ ಮುಂತಾದವರ ಪಾತ್ರಗಳು ಕೂಡ ಈ ಚಿತ್ರದಲ್ಲಿ ಗಮನ ಸೆಳೆದಿವೆ. ಸೆ.30ರಂದು ಈ ಚಿತ್ರ ಕನ್ನಡದಲ್ಲಿ ರಿಲೀಸ್​ ಆಯಿತು. ಬಳಿಕ ಬೇರೆ ಬೇರೆ ಭಾಷೆಗಳಿಗೂ ಡಬ್​ ಆಗಿ ತೆರೆಕಂಡಿತು. ಎಲ್ಲ ಭಾಷೆಗಳಲ್ಲೂ ಪ್ರೇಕ್ಷಕರು ‘ಕಾಂತಾರ’ ಚಿತ್ರಕ್ಕೆ ಮನಸೋತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ