Rajkumar Death Anniversary: ಡಾ.ರಾಜ್​ಕುಮಾರ್​ ಪುಣ್ಯತಿಥಿ; ವರನಟನನ್ನು ನೆನೆದ ಗಣ್ಯರು

ಕೊರೊನಾ ವೈರಸ್​ ಕಾರಣದಿಂದಾಗಿ ಕಳೆದೊಂದು ವರ್ಷದಿಂದ ಈ ಎಲ್ಲ ಕಾರ್ಯಗಳಿಗೆ ಅಡಚಣೆ ಉಂಟಾಗಿದೆ. ಹೀಗಾಗಿ ಅಭಿಮಾನಿಗಳು ಟ್ವಿಟರ್​ನಲ್ಲೇ ರಾಜ್​ಕುಮಾರ್​ ಅವರನ್ನು ಸ್ಮರಣೆ ಮಾಡಿದ್ದಾರೆ.

Rajkumar Death Anniversary: ಡಾ.ರಾಜ್​ಕುಮಾರ್​ ಪುಣ್ಯತಿಥಿ; ವರನಟನನ್ನು ನೆನೆದ ಗಣ್ಯರು
(ಡಾ. ರಾಜ್​ಕುಮಾರ್​ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸಮಾಧಿಗೆ ಪೂಜೆ)
Follow us
ರಾಜೇಶ್ ದುಗ್ಗುಮನೆ
|

Updated on: Apr 12, 2021 | 5:43 PM

ಇಂದು (ಏ.12) ಡಾ. ರಾಜ್​ಕುಮಾರ್​ ಅವರ ಪುಣ್ಯಸ್ಮರಣೆ. ಅವರು ಭೌತಿಕವಾಗಿ ನಮ್ಮನ್ನು ಅಗಲಿ ಇಂದಿಗೆ 15 ವರ್ಷ ಕಳೆದಿದೆ. ಈ ದಿನದಂದು ಕನ್ನಡ ಚಿತ್ರರಂಗದ ನಟ-ನಟಿಯರು, ರಾಜಕೀಯ ಗಣ್ಯರು ರಾಜ್​ಕುಮಾರ್​ ಅವರನ್ನು ನೆನೆದಿದ್ದಾರೆ. ಅಷ್ಟೇ ಅಲ್ಲ, ಈ ವಿಶೇಷ ದಿನದಂದು ಟ್ವೀಟ್​ ಮಾಡುವ ಮೂಲಕ ವರನಟನನ್ನು ನೆನಪಿಸಿಕೊಂಡಿದ್ದಾರೆ. 

ಏ.12ರಂದು ಲಕ್ಷಾಂತರ ಜನರು ಅಣ್ಣಾವ್ರ ನೆನಪಿನಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾರೆ. ಅನ್ನದಾನ, ರಕ್ತದಾನ, ಉಚಿತ ಆರೋಗ್ಯ ತಪಾಸಣೆ, ನೇತ್ರದಾನ ನೋಂದಣಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಅಭಿಮಾನಿಗಳು ಹಮ್ಮಿಕೊಳ್ಳುತ್ತಾರೆ. ಆದರೆ, ಕೊರೊನಾ ವೈರಸ್​ ಕಾರಣದಿಂದಾಗಿ ಕಳೆದೊಂದು ವರ್ಷದಿಂದ ಈ ಎಲ್ಲ ಕಾರ್ಯಗಳಿಗೆ ಅಡಚಣೆ ಉಂಟಾಗಿದೆ. ಹೀಗಾಗಿ ಅಭಿಮಾನಿಗಳು ಟ್ವಿಟರ್​ನಲ್ಲೇ ರಾಜ್​ಕುಮಾರ್​ ಅವರನ್ನು ಸ್ಮರಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಅಪ್ರತಿಮ ಕಲಾವಿದ, ಕನ್ನಡ ಚಿತ್ರರಂಗದ ಮೇರುನಟ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಪದ್ಮಭೂಷಣ, ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಅವರ ಪುಣ್ಯತಿಥಿಯಂದು ಅಭಿಮಾನಪೂರ್ವಕ ನಮನಗಳು. ಕೋಟ್ಯಂತರ ಅಭಿಮಾನಿಗಳ ಪಾಲಿನ ನೆಚ್ಚಿನ ಅಣ್ಣಾವ್ರು ಕನ್ನಡಿಗರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಎಂದು ಬರೆದುಕೊಂಡಿದ್ದಾರೆ.

ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ರಾಜ್​ ಅವರನ್ನು ನೆನೆದಿದ್ದಾರೆ. ನಮ್ಮ ಕರುನಾಡಿಗೆ ಅಪಾರ ಸೇವೆ ಸಲ್ಲಿಸಿ ಕನ್ನಡಿಗರ ಮನದಲ್ಲಿ ಸದಾ ರಾಜನಾಗಿ ಉಳಿದಿರುವ ಅಣ್ಣಾವ್ರು ಡಾ. ರಾಜ್ ರವರ ಪುಣ್ಯಸ್ಮರಣೆಯಿಂದು. ಮರೆಯಲಾಗದ ಮಾಣಿಕ್ಯ ಎಂದು ಬರೆದಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕೂಡ ಟ್ವೀಟ್​ ಮಾಡಿ, ಕರ್ನಾಟಕ ರತ್ನ, ಪದ್ಮಭೂಷಣ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಕರ್ನಾಟಕದ ಅತ್ಯಂತ ಜನಪ್ರಿಯ ಚಲನಚಿತ್ರ ನಟ, ಗಾಯಕ, ಅಭಿಮಾನಿಗಳಿಗೆ ದೇವರ ಸ್ಥಾನ ಕೊಟ್ಟ ನಟಸಾರ್ವಭೌಮ ಡಾ. ರಾಜಕುಮಾರ್ ಅವರ ಪುಣ್ಯತಿಥಿಯಂದು ನನ್ನ ನಮನಗಳು ಎಂದಿದ್ದಾರೆ.

ಶಾಸಕಿ ಸೌಮ್ಯಾ ರೆಡ್ಡಿ ಕೂಡ ಟ್ವೀಟ್​ ಮಾಡಿದ್ದು, ಕನ್ನಡಿಗರ ಕಣ್ಮಣಿ, ಡಾ. ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯಂದು ಅನಂತ ನಮನಗಳನ್ನು ಸಲ್ಲಿಸುತ್ತೇನೆ. ಅಭಿಮಾನಿಗಳ ಮನದಲ್ಲಿ ‘ಅಣ್ಣಾವ್ರು’ ಎಂದೇ ನೆಲೆಸಿರುವ ಡಾ. ರಾಜ್‌ಕುಮಾರ್ ಭೌತಿಕವಾಗಿ ನಮ್ಮನ್ನು ಆಗಲಿ ಇಂದಿಗೆ 15 ವರ್ಷ. ಆದರೆ ಅವರು ನಿರ್ವಹಿಸಿದ ಪಾತ್ರಗಳು, ಸಮಾಜಕ್ಕೆ ನೀಡಿದ ಸಂದೇಶಗಳ ಮೂಲಕ ಸದಾ ನಮ್ಮೊಂದಿಗಿರುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: Rajkumar Death Anniversary: ಡಾ. ರಾಜ್​ಕುಮಾರ್​ ಭೌತಿಕವಾಗಿ ನಮ್ಮೆಲ್ಲರನ್ನು ಅಗಲಿ ಇಂದಿಗೆ 15 ವರ್ಷ!

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ