Rajkumar Death Anniversary: ಡಾ. ರಾಜ್​ಕುಮಾರ್​ ಭೌತಿಕವಾಗಿ ನಮ್ಮೆಲ್ಲರನ್ನು ಅಗಲಿ ಇಂದಿಗೆ 15 ವರ್ಷ!

ಡಾ. ರಾಜ್​ಕುಮಾರ್​ ಪುಣ್ಯತಿಥಿ: ಇಂದು (ಏ.12) ಮೇರುನಟನ 15ನೇ ವರ್ಷದ ಪುಣ್ಯಸ್ಮರಣೆ. ಎಷ್ಟೇ ವರ್ಷಗಳು ಉರುಳಿದರೂ ಚಿತ್ರರಂಗದಲ್ಲಿ ಡಾ. ರಾಜ್​ಕುಮಾರ್​ ಹೆಸರು ಅಜರಾಮರ. ಅಭಿಮಾನಿಗಳ ಎದೆಯಲ್ಲಿ ಅಣ್ಣಾವ್ರ ನೆನಪು ಶಾಶ್ವತ.

Rajkumar Death Anniversary: ಡಾ. ರಾಜ್​ಕುಮಾರ್​ ಭೌತಿಕವಾಗಿ ನಮ್ಮೆಲ್ಲರನ್ನು ಅಗಲಿ ಇಂದಿಗೆ 15 ವರ್ಷ!
ಡಾ. ರಾಜ್​ಕುಮಾರ್​
Follow us
ಮದನ್​ ಕುಮಾರ್​
|

Updated on: Apr 12, 2021 | 8:23 AM

ಭಾರತೀಯ ಸಿನಿಮಾರಂಗದಲ್ಲಿ ಡಾ. ರಾಜ್​ಕುಮಾರ್​ ಅವರಿಗೆ ಬೇರೆ ಯಾರೂ ಸಾಟಿ ಇಲ್ಲ. ಬರೋಬ್ಬರಿ 5 ದಶಕಗಳ ಕಾಲ ಸ್ಯಾಂಡಲ್​ವುಡ್​ನಲ್ಲಿ ಹೀರೋ ಆಗಿ ಮೆರೆದ ಅವರನ್ನು ಸಿನಿಪ್ರಿಯರು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಇಂದಿಗೂ ಅಣ್ಣಾವ್ರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅಭಿಮಾನಿಗಳ ಎದೆಯಲ್ಲಿ ಮೇರುನಟನ ನೆನಪು ಸದಾ ಶಾಶ್ವತ. ಇಂದು (ಏ.12) ಡಾ. ರಾಜ್​ಕುಮಾರ್​ ಅವರ ಪುಣ್ಯಸ್ಮರಣೆ. ಅವರು ಭೌತಿಕವಾಗಿ ನಮ್ಮನ್ನು ಅಗಲಿ ಇಂದಿಗೆ 15 ವರ್ಷ ಕಳೆದಿದೆ.

2006ರ ಏ.12ರಂದು ಡಾ. ರಾಜ್​ಕುಮಾರ್​ ಅವರ ಕೋಟ್ಯಂತರ ಅಭಿಮಾನಿಗಳಿಗೆ ಒಂದು ಬರಸಿಡಿಲು ಬಂದು ಬಡಿದಿತ್ತು. ‘ನಟಸಾರ್ವಭೌಮ’ ಇಹಲೋಕ ತ್ಯಜಿಸಿದರು ಎಂಬ ಸುದ್ದಿ ಕೇಳಿ ಎಲ್ಲರಿಗೂ ಆಘಾತವಾಯಿತು. ಎಷ್ಟೋ ಮಂದಿಗೆ ನೆಲವೇ ಕುಸಿದಂತಹ ಭಾವ ಕಾಡಲು ಶುರುವಾಯಿತು. ಆಗ ಅಣ್ಣಾವ್ರಿಗೆ 76 ವರ್ಷ ವಯಸ್ಸು. ಆ ಪ್ರಾಯದಲ್ಲಿ ಅವರು ನಿಧನರಾಗುತ್ತಾರೆ ಎಂದು ಯಾರೂ ಕೂಡ ಊಹಿಸಿರಲಿಲ್ಲ. ಕನಸಿನಲ್ಲಿಯೂ ಯಾರೂ ಅದನ್ನು ಕಲ್ಪಿಸಿಕೊಂಡಿರಲಿಲ್ಲ. ಅಂಥ ಒಂದು ಘಟನೆ ಏ.12ರಂದು ನಡೆದೇಹೋಯಿತು.

ಅಣ್ಣಾವ್ರು ಭೌತಿಕವಾಗಿ ನಮ್ಮನ್ನು ಅಗಲಿದ್ದಾರೆ ಅಷ್ಟೇ. ಆದರೆ ಸಿನಿಮಾಗಳ ಮೂಲಕ ಸದಾ ಅಭಿಮಾನಿಗಳ ಜೊತೆಯಲ್ಲೇ ಅವರಿದ್ದಾರೆ. ಸುಮಧುರ ಕಂಠದ ಹಾಡುಗಳ ಮೂಲಕ ಕೇಳುಗರ ಕಿವಿಗೆ ಇಂಪು ನೀಡುತ್ತಲೇ ಇದ್ದಾರೆ. ಅಪಾರ ಜೀವನ ಮೌಲ್ಯಗಳ ಮೂಲಕ ಇಂದಿಗೂ ಒಬ್ಬ ಮಾರ್ಗದರ್ಶಕನಾಗಿ ನಮ್ಮೊಳಗೆ ನೆಲೆಸಿದ್ದಾರೆ. ನೂರಾರು ಪಾತ್ರಗಳ ಮೂಲಕ ಒಳ್ಳೆಯತನದ ಪಾಠವನ್ನು ಅವರು ಈಗಲೂ ಹೇಳುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಅಣ್ಣಾವ್ರ ಇರುವಿಕೆ ಪ್ರತಿ ದಿನವೂ ಅನುಭವಕ್ಕೆ ಬರುತ್ತದೆ ಎಂಬುದರಲ್ಲಿ ಅತಿಶಯೋಕ್ತಿ ಇಲ್ಲ.

ಏ.12ರಂದು ಲಕ್ಷಾಂತರ ಜನರು ಅಣ್ಣಾವ್ರ ನೆನಪಿನಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾರೆ. 15 ವರ್ಷಗಳಿಂದಲೂ ಇದು ನಡೆದುಕೊಂಡು ಬಂದಿದೆ. ಅನ್ನದಾನ, ರಕ್ತದಾನ, ಉಚಿತ ಆರೋಗ್ಯ ತಪಾಸಣೆ, ನೇತ್ರದಾನ ನೋಂದಣಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಅಭಿಮಾನಿಗಳು ಹಮ್ಮಿಕೊಳ್ಳುತ್ತಾರೆ. ಆದರೆ ಕೊರೊನಾ ವೈರಸ್​ ಕಾರಣದಿಂದಾಗಿ ಕಳೆದೊಂದು ವರ್ಷದಿಂದ ಈ ಎಲ್ಲ ಕಾರ್ಯಗಳಿಗೆ ಸ್ವಲ್ಪ ಅಡಚಣೆ ಆಗುತ್ತಿದೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸಮಾಧಿಗೆ ನಮಸ್ಕರಿಸುವ ಮೂಲಕ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಇಂದು ಗೌರವ ಸಲ್ಲಿಸುತ್ತಾರೆ. ರಾಜ್​ ಕುಟುಂಬದವರು ಪುಷ್ಪ ನಮನ ಸಲ್ಲಿಸಿ, ಪೂಜೆ ನೆರವೇರಿಸುತ್ತಾರೆ. ಇನ್ನು, ಸೋಶಿಯಲ್​ ಮೀಡಿಯಾದಲ್ಲೂ ಡಾ. ರಾಜ್​ ಅವರನ್ನು ಸ್ಮರಿಸಿಕೊಳ್ಳಲಾಗುತ್ತಿದೆ. 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಅನೇಕ ವಿಚಾರಗಳನ್ನು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ನೆನಪು ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Rajkumar Death Anniversary: ಡಾ. ರಾಜ್​ ನಿಧನರಾದ ದಿನ ಆಕಾಶ ನೋಡಿಕೊಂಡು ದೇವರಿಗೆ ಬೈಯ್ದಿದ್ದ ಮೊಮ್ಮಗಳು ಧನ್ಯಾ!

(Rajkumar Death Anniversary Sandalwood pays tribute to legendary actor Dr Rajkumar on his death anniversary)

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್