ಅಶ್ವಿನಿ ಪುನೀತ್ ರಾಜ್​ಕುಮಾರ್ ಬಗ್ಗೆ ಕೀಳು ಮಟ್ಟದ ಟ್ರೋಲ್: ಕೆಂಡವಾದ ಅಭಿಮಾನಿಗಳು

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಡೀಫ್ ಫೇಕ್ ವಿಡಿಯೋ ಹರಿಬಿಟ್ಟು, ಕೀಳು ಮಟ್ಟದ ಕಮೆಂಟ್ ಮಾಡಿರುವ ಟ್ರೋಲರ್​ಗಳ ವಿರುದ್ಧ ರಾಜ್​ ಕುಟುಂಬದ ಅಭಿಮಾನಿಗಳು ಫಿಲಂ ಚೇಂಬರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗುವುದು ಎಂದಿದೆ ಫಿಲಂ ಚೇಂಬರ್.

ಅಶ್ವಿನಿ ಪುನೀತ್ ರಾಜ್​ಕುಮಾರ್ ಬಗ್ಗೆ ಕೀಳು ಮಟ್ಟದ ಟ್ರೋಲ್: ಕೆಂಡವಾದ ಅಭಿಮಾನಿಗಳು
ಅಶ್ವಿನಿ ಪುನೀತ್ ರಾಜ್​ಕುಮಾರ್ ನಕಲಿ ಚಿತ್ರ
Follow us
|

Updated on:Sep 05, 2024 | 3:37 PM

ಕೆಲವು ನಟರ ಅಭಿಮಾನಿಗಳು, ಪ್ರತಿಸ್ಪರ್ಧಿ ನಟರ ಬಗ್ಗೆ ಅವರ ಕುಟುಂಬದ ಬಗ್ಗೆ ತೀರ ಕೀಳು ಮಟ್ಟದ ಕಮೆಂಟ್ ಮಾಡುವುದು, ಟ್ರೋಲ್ ಮಾಡುವುದು ಇತ್ತೀಚೆಗೆ ಹೆಚ್ಚಾಗಿದೆ. ಅದರಲ್ಲೂ ದರ್ಶನ್ ಜೈಲು ಸೇರಿದ ಬಳಿಕ ಅವರ ಅಭಿಮಾನಿಗಳು ಹತಾಶರಾಗಿ ಮೊದಲಿಗಿಂತಲೂ ವಿಕೃತವಾಗಿ ವರ್ತಿಸಿರುವುದು ಇತ್ತೀಚೆಗಿನ ಕೆಲ ಘಟನೆಗಳಿಂದ ಜಗಜ್ಜಾಹೀರಾಗಿದೆ. ಕೆಲ ನಟರ ಅಭಿಮಾನಿಗಳು ಅದ್ಯಾವ ಮಟ್ಟಕ್ಕೆ ಇಳಿದಿದ್ದಾರೆಂದರೆ ತಾವಾಯ್ತು, ತಮ್ಮ ಕುಟುಂಬ, ಕೆಲಸವಾಯ್ತು ಎಂದಿರುವ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಗ್ಗೆ ಸಹ ಕೀಳು ಮಟ್ಟದ ಪದಗಳನ್ನು ಬಳಸಿ ಟ್ರೋಲ್ ಮಾಡಿದ್ದಾರೆ. ಇದೀಗ ಟ್ರೋಲರ್​ಗಳ ವಿರುದ್ಧ ರಾಜ್ ಕುಟುಂಬದ ಅಭಿಮಾನಿಗಳು ಸಿಡಿದೆದ್ದಿದ್ದು ಫಿಲಂ ಚೇಂಬರ್​ಗೆ ದೂರು ನೀಡಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಚಿತ್ರ ಬಳಸಿ ಡೀಪ್ ಫೇಕ್ ವಿಡಿಯೋ ಒಂದನ್ನು ವ್ಯಕ್ತಿಯೊಬ್ಬ ಹಂಚಿಕೊಂಡಿದ್ದು, ತೀರ ಕೆಟ್ಟ ಭಾಷೆ ಬಳಸಿ, ತನ್ನ ವಿಕೃತಿ ಮೆರೆದಿದ್ದ. ಆ ವಿಡಿಯೋ ಮತ್ತು ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ರಾಜ್ ಕುಟುಂಬದ ಅಭಿಮಾನಿಗಳು ಈ ಬಗ್ಗೆ ಫಿಲಂ ಚೇಂಬರ್ ಅಧ್ಯಕ್ಷ ಎನ್​ಎಂ ಸುರೇಶ್, ಸಾರಾ ಗೋವಿಂದು ಅವರುಗಳಿಗೆ ವಿಡಿಯೋ ಹಾಗೂ ಚಿತ್ರಗಳ ಪ್ರತಿ ನೀಡಿ ದೂರು ನೀಡಿದ್ದು, ಫಿಲಂ ಚೇಂಬರ್ ನವರೇ ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ನಕಲಿ ಖಾತೆಗಳನ್ನು ಬಳಸಿ ಇಂಥಹಾ ಅಸಭ್ಯ ವಿಡಿಯೋಗಳನ್ನು ಹರಿಬಿಡುತ್ತಿದ್ದು, ಸೋಷಿಯಲ್ ಮೀಡಿಯಾಗೆ ಆಧಾರ್ ಲಿಂಕ್ ಕಡ್ಡಾಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವಂತೆ ಫಿಲ್ಮ್ ಚೇಂಬರ್​ಗೆ ಮನವಿ ಸಹ ಮಾಡಿದ್ದಾರೆ.

ಇದನ್ನೂ ಓದಿ:‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ದೂರು ಸ್ವೀಕರಿಸಿ ಮಾತನಾಡಿರುವ ಅಧ್ಯಕ್ಷ ಎನ್​ಎಂ ಸುರೇಶ್, ‘ಈ ರೀತಿ ಘಟನೆ ಇತ್ತೀಚೆಗೆ ಹೆಚ್ಚಾಗುತ್ತಿದೆ, ಚಿತ್ರರಂಗದಲ್ಲಿ ಎಲ್ಲರೂ ಒಂದು ಕುಟುಂಬ ಇದ್ದ ಹಾಗೆ. ಯಾರೂ ಈ ರೀತಿ ಕೃತ್ಯ ಮಾಡಬಾರದು, ಈ ಬಗ್ಗೆ ಕಮಿಷನರ್, ಸೈಬರ್ ಕ್ರೈಂ ಗೆ ದೂರು ಕೊಡುತ್ತೀವಿ’ ಎಂದು ಭರವಸೆ ನೀಡಿದ್ದಾರೆ. ಇನ್ನು ಸಾರಾ ಗೋವಿಂದು ಮಾತನಾಡಿ, ‘ಕೆಲ ಕಿಡಿಗೇಡಿಗಳು ಈ ರೀತಿ ಕೃತ್ಯ ಮಾಡುತ್ತಿದ್ದಾರೆ. ಇಂತ ಕೆಲಸ ಮಾಡುವವರು ರಣಹೇಡಿಗಳು, ಧೈರ್ಯ ಇದ್ದರೆ ಮುಂದೆ ಬಂದು ಮಾತಾಡಲಿ, ಈ ಬಗ್ಗೆ ಪೊಲೀಸ್ ಕಮಿಷನರ್ ಗೆ ದೂರು ಕೊಡುತ್ತೇವೆ. ರಾಜ್ ಕುಮಾರ್ ಕುಟುಂಬಕ್ಕೆ ಒಂದು ಬೆಲೆಯಿದೆ, ಕರ್ನಾಟಕ ಚಿತ್ರ ರಂಗದ ಗೌರವ ಹಾಳುಮಾಡಬೇಡಿ. ಈ ರೀತಿ ಕೃತ್ಯ ಮಾಡಿದವರ ವಿರುದ್ಧ ಕ್ರಮ ಆಗುತ್ತೆ’ ಎಂದಿದ್ದಾರೆ.

ಹೇಮಾ ಸಮಿತಿ

ಇದೇ ಸಂದರ್ಭದಲ್ಲ ಚಿತ್ರರಂಗದಲ್ಲಿ ನಟಿಯರಿಗೆ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎನ್​ಎಂ ಸುರೇಶ್, ‘ದೌರ್ಜನ್ಯದ ಬಗ್ಗೆ ಯಾವುದೇ ದೂರು ಬಂದಿಲ್ಲ, ಚೇತನ್ ಎನ್ನುವವರು ಯಾರು ಅಂತಾನೇ ಗೊತ್ತಿಲ್ಲ, ಯಾವುದೋ ದುರುದ್ದೇಶದಿಂದ ದಿಕ್ಕು ತಪ್ಪಿಸೋ ಕೆಲಸ ಮಾಡ್ತಿದ್ದಾರೆ, ಆ ರೀತಿ ಯಾರಿಗಾದರೂ ಆಗಿದ್ದರೆ ದೂರು ಕೊಡಲಿ, ಹೆಣ್ಣುಮಕ್ಕಳ ಪರವಾಗಿ ಫಿಲಂ ಚೇಂಬರ್ ನಿಲ್ಲಲಿದೆ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Thu, 5 September 24

ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?