ವಿಜಯಪುರ: ‘ನನಗೆ ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ’; ನಟ ರಾಜು ತಾಳಿಕೋಟೆ ಪ್ರತ್ಯಾರೋಪ

| Updated By: shivaprasad.hs

Updated on: Sep 14, 2021 | 6:29 PM

Raju Talikote: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತ್ಯಾರೋಪ ಮಾಡಿದ್ದಾರೆ. ಈ ಕುರಿತ ವರದಿ ಇಲ್ಲಿದೆ.

ವಿಜಯಪುರ: ‘ನನಗೆ ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ’; ನಟ ರಾಜು ತಾಳಿಕೋಟೆ ಪ್ರತ್ಯಾರೋಪ
ರಾಜು ತಾಳಿಕೋಟೆ (ಸಂಗ್ರಹ ಚಿತ್ರ)
Follow us on

ವಿಜಯಪುರ: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ವಿಜಯಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಕನ ಪುತ್ರ ಫಯಾಜ್ ಕರಜಗಿ ಪತ್ನಿ ಸನಾ ಕರಜಗಿ ಸಂಬಂಧಿಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಜು ಆರೋಪಿಸಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಅವರಿಗೆ ರಾಜಕಾರಣಿಗಳ ಬೆಂಬಲವಿದ್ದು, ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ತಮ್ಮ ಜೀವಕ್ಕೆ ಏನಾದರೂ ತೊಂದರೆಯಾದಲ್ಲಿ ಅದಕ್ಕೆ ಸನಾ ಸಂಬಂಧಿಕ ಎಸ್​.ಕೆ.ಮೋದಿಯೇ ಕಾರಣ ಎಂದು ರಾಜು ತಿಳಿಸಿದ್ದಾರೆ.

ಇತ್ತ ಸನಾ ತಾಯಿ ಫಾತಿಮಾ ಶಿರಹಟ್ಟಿ ಕೂಡ ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟೆ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿ ಆರು ಜನರ ವಿರುದ್ಧ ದೂರು ದಾಖಲಾಗಿದೆ. ದೂರಿನಲ್ಲಿ ಕೌಟುಂಬಿಕ ಕಲಹದಿಂದಾಗಿ, ಅಕ್ಕನ ಪುತ್ರ ಫಯಾಜ್ ಕರಜಗಿ ಪರವಾಗಿ ನಿಂತು ರಾಜು ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಫಯಾಜ್ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ, ಬಲವಂತಾಗಿ ವಿಷ ಕುಡಿಸಿರುವ ಆರೋಪ ಮಾಡಲಾಗಿದೆ.

ಪ್ರಸ್ತುತ ಸನಾ ಕರಜಗಿ(ಫಯಾಜ್ ಪತ್ನಿ) ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತಂತೆ ಅವರು ಟಿವಿ9ಗೆ ಪ್ರತಿಕ್ರಿಯಿಸಿದ್ದು, ರಅಜು ತಾಳಿಕೋಟೆ ಪತ್ನಿ ವಿಷ ಕುಡಿಸಲು ಪ್ರಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:

ವಿಜಯಪುರ: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

KBC 13: ‘ಅಮಿತಾಭ್ ಬಚ್ಚನ್‘ ಹೆಸರು ಬಂದಿದ್ದು ಹೇಗೆ?; ಕುತೂಹಲಕರ ಮಾಹಿತಿ ಇಲ್ಲಿದೆ

(Raju Talikote accused that he has life threats)

Published On - 6:24 pm, Tue, 14 September 21