Rakesh Poojary Death: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

Rakesh Poojary Death: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಅಕಾಲಿಕವಾಗಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ನಿಧನರಾದರು ಎಂದು ವರದಿಯಾಗಿದೆ. ರಂಗಭೂಮಿ ಮತ್ತು ಕಿರುತೆರೆ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಅನೇಕರ ಮನ ಗೆದ್ದಿದ್ದರು.

Rakesh Poojary Death: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ
Rakesh Poojary (1)

Updated on: May 12, 2025 | 7:44 AM

ಎಲ್ಲರನ್ನೂ ನಗಿಸುತ್ತಾ, ನಗುತ್ತಾ ಇದ್ದವರು ಅವರು. ತುಂಬಾ ಕಷ್ಟದ ಜೀವನ ನೋಡಿ, ನಂತರ ಹಾಸ್ಯದ ಮೂಲಕ ಎಲ್ಲರ ಮನ ಗೆದ್ದರು. ತುಂಬಾ ಅವಮಾನಗಳನ್ನು ಮೆಟ್ಟಿ ನಿಂತರು. ಈ ರೀತಿ ಇದ್ದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ ಹೊಂದಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಈ ಸುದ್ದಿ ನಂಬಲು ಅಸಾಧ್ಯ ಎನಿಸಿದರೂ ಸತ್ಯವೇ. ಆರೋಗ್ಯವಾಗಿದ್ದ ನಟ ರಾಕೇಶ್ ಪೂಜಾರಿ (Rakesh Poojary) ಅವರು ಸಣ್ಣ ವಯಸ್ಸಿನಲ್ಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬಾಳಿ ಬದುಕ ಬೇಕಿದ್ದ ಅವರು ಕೊನೆಯುಸಿರು ಎಳೆದಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಇಂದು (ಮೇ 12) ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ
ರಾಧಿಕಾ ಪಂಡಿತ್ ಕೂದಲ ಮೇಲೆ ಯಶ್​ಗೆ ಇದೆ ವಿಶೇಷ ಪ್ರೀತಿ; ಇಲ್ಲಿದೆ ಸಾಕ್ಷಿ
ಪ್ರೀತಿಯಿಂದ ವಿಜ್ಜು ಎಂದು ಕರೆದು ಬರ್ತ್​ಡೇ ವಿಶ್ ತಿಳಿಸಿದ ರಶ್ಮಿಕಾ ಮಂದಣ್ಣ
‘ಪಾಕಿಗಳು ರಕ್ತಸಿಕ್ತ ಜಿರಳೆಗಳು, ಭೂಪಟದಿಂದಲೇ ಇಲ್ಲದಂತೆ ಮಾಡಬೇಕು’; ಕಂಗನಾ
ಪೊಲೀಸರಿಗೆ ಆವಾಜ್ ಹಾಕಿದ ‘ಜೈಲರ್’ ಖ್ಯಾತಿಯ ವಿನಾಯಕನ್; ಮತ್ತೆ ನಟನ ಕಿರಿಕ್

ರಾಕೇಶ್ ಪೂಜಾರಿ ಸಾವಿನ ವಿಚಾರವನ್ನು ನಟ ಹಾಗೂ ಅವರ ಆಪ್ತ ಶಿವರಾಜ್ ಕೆಆರ್​ ಪೇಟೆ ಅವರು ಖಚಿತಪಡಿಸಿದ್ದಾರೆ. ಸಾವಿಗೆ ಅವರ ಆಪ್ತ ಬಳಗ ಶಾಕ್ ಆಗಿದೆ.  ಅವರ ಸಾವಿಗೆ ಎಲ್ಲರೂ ಕಂಬನಿ ಮಿಡಿಯುತ್ತಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದು ಮತ್ತಷ್ಟು ಶಾಕಿಂಗ್ ಎನಿಸಿದೆ.

ವಿಶ್ವರೂಪ್ ಎಂದೇ ರಾಕೇಶ್ ಪೂಜಾರಿ ಜನಪ್ರಿಯತೆ ಪಡೆದಿದ್ದರು. ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಇದ್ದರು. ಆದರೆ, ‘ಕಾಮಿಡಿ ಕಿಲಾಡಿಗಳು’ ವೇದಿಕೆ ಅವರ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್​ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.

2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆ ಆದರು ಮತ್ತು ರನ್ನರ್ ಅಪ್ ತಂಡದಲ್ಲಿ  ಅವರು ಇದ್ದರು. ನಂತರದ ಸೀಸನ್​ನಲ್ಲಿ ಅವರು ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ಮೇಕಪ್ ಮಾಂತ್ರಿಕ ವಿಕ್ರಮ್ ಗಾಯಕ್​ವಾಡ್ ನಿಧನ; ಕಂಬನಿ ಮಿಡಿದ ಭಾರತೀಯ ಚಿತ್ರರಂಗ

ಗೋವಿಂದೇ ಗೌಡ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಪ್ಲೇಟ್​ಲೆಟ್ಸ್ ಕಡಿಮೆ ಇತ್ತು. ಕಾಂತಾರ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬಂದರು. ಆ ಬಳಿಕ ಸಂಜೆ ಸುಸ್ತು ಎನ್ನುತ್ತಿದ್ದರು. ಮಧ್ಯರಾತ್ರಿ ಹಾರ್ಟ್​ ಅಟ್ಯಾಕ್ ಆಯ್ತು’ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:13 am, Mon, 12 May 25