AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ಕಸಪುರದೋಳ್’, ‘ಜೆಸಿ’ ಜೊತೆ ಹಲವು ಸಿನಿಮಾಗಳು ಈ ವಾರ ರಿಲೀಸ್

ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಮೂಲಕ ಸದ್ದು ಮಾಡಿದೆ. ಪ್ರಖ್ಯಾತ್ ಅಭಿನಯದ ‘ಜೆಸಿ ದಿ ಯೂನಿವರ್ಸಿಟಿ’ ಸಿನಿಮಾ ಕೂಡ ಟ್ರೇಲರ್ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ. ಇವುಗಳ ಜೊತೆಯಲ್ಲಿ ಇನ್ನೂ ಹಲವು ಸಿನಿಮಾಗಳು ಫೆಬ್ರವರಿ 6ರಂದು ಬಿಡುಗಡೆ ಆಗುತ್ತಿವೆ. ಆ ಬಗ್ಗೆ ಇಲ್ಲಿದೆ ವಿವರ..

‘ರಕ್ಕಸಪುರದೋಳ್’, ‘ಜೆಸಿ’ ಜೊತೆ ಹಲವು ಸಿನಿಮಾಗಳು ಈ ವಾರ ರಿಲೀಸ್
New Kannada Movies
ಮದನ್​ ಕುಮಾರ್​
|

Updated on: Feb 05, 2026 | 6:38 PM

Share

ಫೆಬ್ರವರಿ 6ರಂದು ಸ್ಯಾಂಡಲ್‌ವುಡ್‌ನಲ್ಲಿ ಹಲವು ಸಿನಿಮಾಗಳು (New Kannada Movies) ಬಿಡುಗಡೆ ಆಗುತ್ತಿವೆ. 10ಕ್ಕೂ ಹೆಚ್ಚು ಚಿತ್ರಗಳು ತೆರೆಗೆ ಬರಲು ಸಜ್ಜಾಗಿವೆ. ಈ ವಾರದ ಪ್ರಮುಖ ಆಕರ್ಷಣೆ ಎಂದರೆ ರಾಜ್ ಬಿ. ಶೆಟ್ಟಿ ನಟನೆಯ ‘ರಕ್ಕಸಪುರದೋಳ್’ (Rakkasapuradhol) ಮತ್ತು ಡಾಲಿ ಧನಂಜಯ ನಿರ್ಮಾಣದ ‘ಜೆಸಿ ದಿ ಯೂನಿವರ್ಸಿಟಿ’. ಇವುಗಳು ಮಾತ್ರವಲ್ಲದೇ ‘ಕಟ್ಲೆ’, ‘ಕರಿಕಾಡ’, ‘ಘಾರ್ಗಾ’, ‘ಸುಖೀಭವ’ ಮುಂತಾದ ಸಿನಿಮಾಗಳು ತೆರೆಕಾಣುತ್ತಿವೆ. ಫೆಬ್ರವರಿ 6ರಂದು ಬಿಡುಗಡೆ ಆಗಲಿರುವ ಕನ್ನಡ ಸಿನಿಮಾಗಳ ಬಗ್ಗೆ ಮಾಹಿತಿ ಇಲ್ಲಿದೆ..

ರಕ್ಕಸಪುರದೋಳ್: ಈ ವಾರದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದೂ ಒಂದು. ರಾಜ್ ಬಿ. ಶೆಟ್ಟಿ ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಮರ್ಡರ್ ಮಿಸ್ಟರಿ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದೆ. ಹಿರಿಯ ನಿರ್ದೇಶಕ ಪ್ರೇಮ್ ಅವರ ಸಹಾಯಕ ರವಿ ಸಾರಂಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸ್ವಾದಿಷ್ಠ ಕೃಷ್ಣ, ಅರ್ಚನಾ ಕೊಟ್ಟಿಗೆ ಕೂಡ ಮುಖ್ಯ ಭೂಮಿಕೆಯಲ್ಲಿದ್ದಾರೆ.

ಜೆ.ಸಿ. ದಿ ಯೂನಿವರ್ಸಿಟಿ: ಈ ಸಿನಿಮಾದಲ್ಲಿ ಸೂರ್ಯ ಪ್ರಖ್ಯಾತ್ ಅವರು ನಟಿಸಿದ್ದಾರೆ. ಡಾಲಿ ಧನಂಜಯ ಅವರು ಈ ಸಿನಿಮಾಗೆ ಹಣ ಹೂಡಿದ್ದಾರೆ. ಈ ಮೊದಲು ‘ನಡುವೆ ಅಂತರವಿರಲಿ’ ಸಿನಿಮಾದಲ್ಲಿ ಪ್ರಖ್ಯಾತ್ ಅಭಿನಯಿಸಿದ್ದರು. ಈಗ ಜೆ.ಸಿ. ದಿ ಯೂನಿವರ್ಸಿಟಿ ಸಿನಿಮಾ ಮೂಲಕ ಮನರಂಜನೆ ನೀಡಲು ಬರುತ್ತಿದ್ದಾರೆ. ಚೇತನ್ ಜಯರಾಮ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಕರಿಕಾಡ: ಹಳ್ಳಿಗಾಡಿನ ಕಥಾಹಂದರ ಇರುವ ‘ಕರಿಕಾಡ’ ಸಿನಿಮಾ ಕೂಡ ಈ ವಾರ ರಿಲೀಸ್ ಆಗುತ್ತಿದೆ. ಕಾಡ ನಟರಾಜ್ ಅವರು ಈ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಯಶ್ ಶೆಟ್ಟಿ, ಬಲರಾಜ್​ವಾಡಿ, ವಿಜಯ್ ಚೆಂಡೂರು ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ. ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿ ಕೂಡ ಈ ಸಿನಿಮಾವನ್ನು ತೆರೆಕಾಣಿಸಲಾಗುತ್ತಿದೆ.

ಕಟ್ಲೆ: ಈ ಸಿನಿಮಾದಲ್ಲಿ ಹಾಸ್ಯ ನಟ ಕೆಂಪೇಗೌಡ ಅವರು ನಟಿಸಿದ್ದಾರೆ. ಅವರು ಹೀರೋ ಆಗಿ ನಟಿಸಿರುವ ಮೊದಲ ಸಿನಿಮಾ ಇದು. ಹಲವಾರು ಸಿನಿಮಾಗಳಲ್ಲಿ ಹಾಸ್ಯ ಕಲಾವಿದನಾಗಿ ನಟಿಸಿದ್ದ ಅವರು ಈಗ ಹೀರೋ ಆಗಿದ್ದಾರೆ. ಆ ಕಾರಣದಿಂದ ‘ಕಟ್ಲೆ’ ಸಿನಿಮಾ ಅವರ ಪಾಲಿಗೆ ಸ್ಪೆಷಲ್ ಆಗಿದೆ. ಶ್ರೀವಿಧಾ ಅಭಿನಂದನ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ.

ಇದನ್ನೂ ಓದಿ: ಭೂತ-ಪ್ರೇತಗಳ ‘ರಕ್ಕಸಪುರ’ದಲ್ಲಿ ರಾಜ್ ಬಿ ಶೆಟ್ರು ರಕ್ಷಕನಾ-ರಾಕ್ಷಸನಾ?

ಸರ್ಕಾರಿ ಶಾಲೆ ಹೆಚ್​8: ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟ ಅವರು ‘ಸರ್ಕಾರಿ ಶಾಲೆ H8’ ಸಿನಿಮಾದಲ್ಲಿ ನಟಿಸಿದ್ದಾರೆ. ಗುಣ ಹರಿಯಬ್ಬೆ, ರಾಘವೇಂದ್ರ ರಾಜ್​​ಕುಮಾರ್, ಮೇಘಶ್ರೀ, ಸುಚೇಂದ್ರ ಪ್ರಸಾದ್, ವೈಜನಾಥ್ ಬಿರಾದರ್ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಗುಣ ಹರಿಯಬ್ಬೆ ಅವರ ನಿರ್ದೇಶನ ಈ ಸಿನಿಮಾಗಿದೆ.

ಅರುಣ್ ರಾಮ್​ ಪ್ರಸಾದ್ ನಟನೆಯ ‘ಘಾರ್ಗಾ’, ಮಹೇಂದ್ರ ಕುಮಾರ್ ಅಭಿನಯದ ‘ಸುಖೀಭವ’, ಮೊಹಮದ್ ಅಬ್ಜಲ್ ನಟನೆಯ ‘ನೆನಪುಗಳ ಮಾತು ಮಧುರ’, ಆಕರ್ಷ್ ಆದಿತ್ಯ ಅಭಿನಯದ ‘ಬಯಕೆಗಳು ಬೇರೂರಿದಾಗ’, ಅಥರ್ವ ಪ್ರಕಾಶ್ ನಟನೆಯ ‘ನಾನ್-ವೆಜ್’ ಸಿನಿಮಾ ಕೂಡ ಫೆಬ್ರವರಿ 6ರಂದು ಬಿಡುಗಡೆ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ