AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ಸಂಭ್ರಮಾಚರಣೆ ಸರಿಯಲ್ಲ’ ಎಂದ ರಕ್ಷಕ್ ಬುಲೆಟ್

‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ ಎಂದಿರುವ ಅವರು ಬರ್ತ್​ಡೇ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ. ದರ್ಶನ್ ಅರೆಸ್ಟ್ ಬೆನ್ನಲ್ಲೇ ಅವರು ಹೀಗೆ ಹೇಳಿದ್ದಾರೆ ಎನ್ನಲಾಗಿದೆ. ಜೂನ್ 21 ಅವರ ಜನ್ಮದಿನ. ಅಂದು ಅವರ ಸಿನಿಮಾ ಘೋಷಣೆ ಆಗೋ ಸಾಧ್ಯತೆ ಇದೆ.

‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ಸಂಭ್ರಮಾಚರಣೆ ಸರಿಯಲ್ಲ’ ಎಂದ ರಕ್ಷಕ್ ಬುಲೆಟ್
ರಕ್ಷಕ್-ದರ್ಶನ್
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jun 17, 2024 | 11:21 AM

Share

ನಟ ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ಅವರು ಕಷ್ಟಪಡುತ್ತಿರುವುದನ್ನು ನೋಡಿ ಫ್ಯಾನ್ಸ್ ಸಾಕಷ್ಟು ಬೇಸರಕ್ಕೆ ಒಳಗಾಗಿದ್ದಾರೆ. ಅವರ ಆಪ್ತರಿಗೆ ಹಾಗೂ ಫ್ಯಾನ್ಸ್​ಗೆ ಇದು ನುಂಗಲಾರದ ತುತ್ತಾಗಿದೆ. ಈಗ ರಕ್ಷಕ್ ಬುಲೆಟ್ ಅವರು ಈ ಬಗ್ಗೆ ಪರೋಕ್ಷವಾಗಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ ಎಂದಿರುವ ಅವರು ಬರ್ತ್​ಡೇ ಸೆಲೆಬ್ರೇಷನ್​ಗೆ ಬ್ರೇಕ್ ಹಾಕಿದ್ದಾರೆ. ಜೂನ್ 21 ಅವರ ಜನ್ಮದಿನ. ಅಂದು ಅವರ ಸಿನಿಮಾ ಘೋಷಣೆ ಆಗೋ ಸಾಧ್ಯತೆ ಇದೆ.

‘ಎಲ್ಲರಿಗೂ ನಮಸ್ಕಾರ ಹಾಗೂ ಫಾದರ್ಸ್ ಡೇ ಶುಭಾಶಯಗಳು. ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು ನನ್ನನ್ನು ತುಂಬಾ ಕಾಡುತ್ತಿದೆ. ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹೀರೋ. ಹೀರೋ ಅಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕರು ಹಾಗೂ ಸ್ನೇಹಿತರು ಕೂಡ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ ರಕ್ಷಕ್.

‘ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ. ಮುಂದಿನ ವರ್ಷದ ಹುಟ್ಟು ಹಬ್ಬದಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡಿರುತ್ತೇನೆ, ಆಗ ನನ್ನ ಎಲ್ಲ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು ಹಾಗೂ ಪ್ರೀತಿ ಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ. ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು, ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್‌ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು’ ಎಂದು ಬರೆದಿದ್ದಾರೆ ಅವರು.

ಇದನ್ನೂ ಓದಿ: ಹೀರೋ ಆಗೋಕೆ ರೆಡಿ ಆದ ಮರಿ ಬುಲೆಟ್; ಹೊಸ ಸಿನಿಮಾ ಘೋಷಿಸಿದ ರಕ್ಷಕ್

ಬುಲೆಟ್ ಪ್ರಕಾಶ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇತ್ತು. ಈ ಕಾರಣಕ್ಕೆ ಬುಲೆಟ್ ಪ್ರಕಾಶ್ ಮಗ ಎನ್ನುವ ಕಾರಣಕ್ಕೆ ದರ್ಶನ್ ಹಾಗೂ ರಕ್ಷಕ್ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ದರ್ಶನ್ ಡಿ ಬಾಸ್ ಆದರೆ, ನಾನು ಆರ್ ಬಾಸ್ ಎಂದು ಅವರು ಕರೆದುಕೊಂಡಿದ್ದಾರೆ. ಬಿಗ್ ಬಾಸ್​ಗೆ ಹೋದ ತಿಂಗಳ ಒಳಗೆ ಅವರು ಎಲಿಮಿನೇಟ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.