ಕೃತಿಚೌರ್ಯ ಪ್ರಕರಣ, ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಅರ್ಜಿ

|

Updated on: Jul 20, 2024 | 6:32 PM

ನಟ, ನಿರ್ಮಾಪಕ, ನಿರ್ದೇಶಕ ರಕ್ಷಿತ್ ಶೆಟ್ಟಿ ವಿರುದ್ಧ ಕೃತಿ ಚೌರ್ಯ ಪ್ರಕರಣದಲ್ಲಿ ಎಫ್​ಐಆರ್ ದಾಖಲಾಗಿದ್ದು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಿತ್ ಶೆಟ್ಟಿ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಕೃತಿಚೌರ್ಯ ಪ್ರಕರಣ, ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಅರ್ಜಿ
Follow us on

ನಟ, ನಿರ್ದೇಶಕ ಹಾಗೂ ನಿರ್ಮಾಪಕರೂ ಆಗಿರುವ ರಕ್ಷಿತ್ ಶೆಟ್ಟಿ ವಿರುದ್ಧ ಸಂಸ್ಥೆಯೊಂದು ಕೃತಿ ಚೌರ್ಯ ಪ್ರಕರಣ ದಾಖಲಿಸಿದೆ. ರಕ್ಷಿತ್ ಶೆಟ್ಟಿ ತಮ್ಮ ನಿರ್ಮಾಣದ ಸಿನಿಮಾದಲ್ಲಿ ಎರಡು ಹಾಡುಗಳನ್ನು ತಮ್ಮ ಒಪ್ಪಿಗೆ ಇಲ್ಲಿದೆ ಬಳಸಿಕೊಂಡಿದ್ದಾರೆ ಎಂದು ಎಂಆರ್​ಟಿ ಆಡಿಯೋ ಸಂಸ್ಥೆ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಪ್ರಕರಣವನ್ನು ನ್ಯಾಯಾಲಯದಲ್ಲಿಯೇ ಇತ್ಯರ್ಥಪಡಿಸಿಕೊಳ್ಳುವುದಾಗಿ ಹೇಳಿದ್ದ ನಟ ರಕ್ಷಿತ್ ಶೆಟ್ಟಿ ಇದೀಗ ಪ್ರಕರಣದಲ್ಲಿ ಬಂಧನವಾಗದಂತೆ ನಿರೀಕ್ಷಣಾ ಜಾಮೀನು ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿ, ಲೂಸ್ ಮಾದ ಯೋಗಿ, ದಿಗಂತ್ ನಟಿಸಿದ್ದ ‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಎರಡು ಹಳೆಯ ಹಾಡುಗಳ ಬಿಟ್​ಗಳನ್ನು ಸಂದರ್ಭಕ್ಕೆ ತಕ್ಕಂತೆ ಬಳಸಿಕೊಳ್ಳಲಾಗಿತ್ತು. ಈ ಹಾಡುಗಳ ಹಕ್ಕುಗಳನ್ನು ಹೊಂದಿರುವ ಎಂಆರ್​ಟಿ ಸಂಸ್ಥೆಯು ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆಯ ಮೇಲೆ ನ್ಯಾಯಾಲಯದಲ್ಲಿ ಕೃತಿ ಚೌರ್ಯದ ಉಲ್ಲಂಘನೆ ಪ್ರಕರಣ ದಾಖಲಿಸಿದೆ. ಇದೇ ಪ್ರಕರಣದಕ್ಕೆ ಸಂಬಂಧಿಸಿದಂತೆ ಈಗ ರಕ್ಷಿತ್ ಶೆಟ್ಟಿ ಬೆಂಗಳೂರಿನ‌ ಸೆಷನ್ಸ್ ಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ದಾಖಲಿಸಿದ್ದಾರೆ.

‘ಬ್ಯಾಚುಲರ್ಸ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಹಾಗೂ ‘ಒಮ್ಮೆ ನಿನ್ನನ್ನು ಕಣ್ತುಂಬ ಕಾಣುವಾಸೆ ಎಲ್ಲಿರುವೆ’ ಹಾಡುಗಳ ಸಣ್ಣ ಬಿಟ್​ಗಳನ್ನಷ್ಟೆ ಬಳಸಿಕೊಳ್ಳಲಾಗಿದೆ. ಅಸಲಿಗೆ ಈ ಹಾಡುಗಳನ್ನು ಸಿನಿಮಾದಲ್ಲಿ ಬಳಸಿಕೊಳ್ಳುವ ಮುಂಚೆ ರಕ್ಷಿತ್ ಶೆಟ್ಟಿಯವರು ಹಾಡುಗಳ ಹಕ್ಕು ಹೊಂದಿದ್ದ ಎಂಆರ್​ಟಿ ಅವರನ್ನು ಭೇಟಿ ಆಗಿ ಅನುಮತಿ ಕೇಳಿದ್ದರಂತೆ. ಆದರೆ ಈ ಹಾಡುಗಳನ್ನು ಬಳಸಿಕೊಳ್ಳಲು ಭಾರಿ ದುಬಾರಿ ಮೊತ್ತವನ್ನು ಎಂಆರ್​ಟಿ ಅವರು ಕೇಳಿದರಂತೆ. ಅದೇ ಕಾರಣಕ್ಕೆ ಅವರ ಅನುಮತಿ ಇಲ್ಲದೆ ಹಾಡನ್ನು ಬಳಸಿಕೊಂಡಿದ್ದಾರೆ ರಕ್ಷಿತ್ ಶೆಟ್ಟಿ.

ಇದನ್ನೂ ಓದಿ:ರಕ್ಷಿತ್ ಶೆಟ್ಟಿ ವಿರುದ್ಧದ ಕೇಸ್; ಮಾತಿನ ಮೂಲಕವೇ ಬಗೆಹರಿಯಲಿದೆ ಕೇಸ್?

ಈ ಕೃತಿ ಚೌರ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎಫ್​ಐಆರ್ ದಾಖಲಾದ ಬಳಿಕ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ ರಕ್ಷಿತ್ ಶೆಟ್ಟಿಯವರ ಪರಮವಃ ಸ್ಟುಡಿಯೋ, ‘ನಾವು ಈ ಪ್ರಕರಣವನ್ನು ನ್ಯಾಯಾಲಯದಲ್ಲಿಯೇ ಎದುರಿಸುವುದಾಗಿ ಹೇಳಿದೆ. ಅಲ್ಲದೆ ಇನ್ನು ಮುಂದೆ ಯಾರಿಗೂ ಸಹ ಹೀಗೆ ಅನ್ಯಾಯ ಆಗಬಾರದೆಂದು ಈ ನಿರ್ಣಯ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದೆ.

ರಕ್ಷಿತ್ ಶೆಟ್ಟಿ ಪ್ರಸ್ತುತ ‘ರಿಚರ್ಡ್ ಆಂಟೊನಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಿಚರ್ಡ್ ಆಂಟೊನಿ’ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು, ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡುತ್ತಿದೆ. ‘ಉಳಿದವರು ಕಂಡಂತೆ’ ಸಿನಿಮಾದ ರಿಚರ್ಡ್ ಪಾತ್ರವನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ