AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakshit Shetty Birthday: ರಕ್ಷಿತ್​ ಶೆಟ್ಟಿ ಜನ್ಮದಿನವನ್ನು ಇನ್ನಷ್ಟು ಸ್ಪೆಷಲ್​ ಆಗಿಸಿದ ಅಭಿಮಾನಿಗಳು

777 Charlie | Rakshit Shetty: ‘777 ಚಾರ್ಲಿ’ ಸಿನಿಮಾದ ಬಿಡುಗಡೆಯ ಹೊಸ್ತಿಲಲ್ಲೇ ರಕ್ಷಿತ್​ ಶೆಟ್ಟಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಈ ಸಿನಿಮಾ ನೋಡಿದ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ.

Rakshit Shetty Birthday: ರಕ್ಷಿತ್​ ಶೆಟ್ಟಿ ಜನ್ಮದಿನವನ್ನು ಇನ್ನಷ್ಟು ಸ್ಪೆಷಲ್​ ಆಗಿಸಿದ ಅಭಿಮಾನಿಗಳು
ರಕ್ಷಿತ್ ಶೆಟ್ಟಿ
TV9 Web
| Edited By: |

Updated on:Jun 06, 2022 | 7:47 AM

Share

ಚಂದನವನದಲ್ಲಿ ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ತಮ್ಮದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಪ್ರತಿ ಸಿನಿಮಾದಲ್ಲಿಯೂ ಪ್ರೇಕ್ಷಕರಿಗೆ ಹೊಸತನವನ್ನು ಪರಿಚಯಿಸುವ ಪ್ರಯತ್ನ ರಕ್ಷಿತ್​ ಅವರದ್ದು. ಇಂದು (ಜೂನ್​ 6) ಅವರಿಗೆ ಜನ್ಮದಿನದ (Rakshit Shetty Birthday) ಸಂಭ್ರಮ. ‘ಸಿಂಪಲ್​ ಸ್ಟಾರ್​’ ಎಂದೇ ಖ್ಯಾತಿ ಪಡೆದಿರುವ ಅವರ ಹುಟ್ಟುಹಬ್ಬದ ಪ್ರಯುಕ್ತ ಎಲ್ಲರೂ ಶುಭ ಕೋರುತ್ತಿದ್ದಾರೆ. ಮುಂಬರುವ ಸಿನಿಮಾಗಳು ಅದ್ದೂರಿಯಾಗಿ ಗೆಲುವು ಕಾಣಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. ಆಪ್ತರು ಮತ್ತು ಸೆಲೆಬ್ರಿಟಿಗಳಿಂದ ರಕ್ಷಿತ್​ ಶೆಟ್ಟಿ ಬರ್ತ್​ಡೇ ಸಲುವಾಗಿ ಶುಭಾಶಯಗಳು ಹರಿದುಬರುತ್ತಿವೆ. ರಕ್ಷಿತ್​ ಶೆಟ್ಟಿ ನಟಿಸಿರುವ ‘777 ಚಾರ್ಲಿ’ (777 Charlie) ಸಿನಿಮಾ ಬಿಡುಗಡೆಗೆ (ಜೂನ್​ 10) ಸಜ್ಜಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​​ ಮಾಡಲಾಗಿದೆ. ಸಿನಿಮಾ ನೋಡಿದ ಎಲ್ಲರೂ ಸಖತ್​ ಭಾವುಕರಾಗಿ ಪ್ರತಿಕ್ರಿಯಿಸಿದ್ದಾರೆ. ಆ ಮೂಲಕ ಈ ಬಾರಿ ರಕ್ಷಿತ್​ ಶೆಟ್ಟಿಯ ಜನ್ಮದಿನವನ್ನು ಅಭಿಮಾನಿಗಳೇ ವಿಶೇಷವಾಗಿಸಿದ್ದಾರೆ.

ರಕ್ಷಿತ್​ ಶೆಟ್ಟಿ ಅವರ ವೃತ್ತಿಜೀವನದಲ್ಲಿ ‘777 ಚಾರ್ಲಿ’ ಸಿನಿಮಾ ತುಂಬ ಡಿಫರೆಂಟ್​ ಎನಿಸಿಕೊಂಡಿದೆ. ಈ ಚಿತ್ರಕ್ಕೆ ಕಿರಣ್​ ರಾಜ್​ ನಿರ್ದೇಶನ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ಪರಂವಾ ಸ್ಟುಡಿಯೋಸ್​ ಬ್ಯಾನರ್​ ಮೂಲಕ ಈ ಸಿನಿಮಾ ಮೂಡಿಬಂದಿದೆ. ದೇಶಾದ್ಯಂತ ಈ ಚಿತ್ರಕ್ಕೆ ಪ್ರಚಾರ ನೀಡಲಾಗಿದೆ. ಕನ್ನಡ ಮಾತ್ರವಲ್ಲದೇ ಹಿಂದಿ, ತಮಿಳು, ಮಲಯಾಳಂ, ತೆಲುಗು ಭಾಷೆಗಳಲ್ಲಿ ರಿಲೀಸ್​ ಆಗುತ್ತಿದೆ. ಆಯಾ ಭಾಷೆಯ ಸ್ಟಾರ್​ ಕಲಾವಿದರು ಈ ಸಿನಿಮಾವನ್ನು ರಿಲೀಸ್​ ಮಾಡುತ್ತಿದ್ದಾರೆ. ಬಿಡುಗಡೆಗೂ ಮುನ್ನ ಬರೋಬ್ಬರಿ 21 ನಗರಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಮಾಡಲಾಗುತ್ತಿದೆ.

ಇದನ್ನೂ ಓದಿ
Image
ಸ್ಟಾರ್​ ನಟನ ರೀತಿ ತಲೆ ಎತ್ತಿದೆ ಚಾರ್ಲಿ ಶ್ವಾನದ ಕಟೌಟ್​; ರಕ್ಷಿತ್​ ಶೆಟ್ಟಿ ಸಿನಿಮಾಗೆ ಭರ್ಜರಿ ಪ್ರಚಾರ
Image
21 ನಗರಗಳಲ್ಲಿ ಪ್ರೀಮಿಯರ್​ ಆಗಲಿದೆ ‘777 ಚಾರ್ಲಿ’; ಹೊಸ ದಾಖಲೆ ಬರೆಯಲು ಸಜ್ಜಾದ ರಕ್ಷಿತ್​ ಶೆಟ್ಟಿ ಸಿನಿಮಾ
Image
ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​
Image
‘ಬೇರೆ ಭಾಷೆಯಲ್ಲಿ ನಟಿಸೋ ಆಸೆ ಇಲ್ಲ, ಕನ್ನಡದಲ್ಲಿ ಒಳ್ಳೆಯ ಚಿತ್ರ ಮಾಡಿದ್ರೆ ದೇಶಾದ್ಯಂತ ರೀಚ್​ ಆಗತ್ತೆ’: ರಕ್ಷಿತ್​ ಶೆಟ್ಟಿ

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?

ದೆಹಲಿ, ಲಖನೌ ಮುಂತಾದ ಕಡೆಗಳಲ್ಲಿ ಈಗಾಗಲೇ ‘777 ಚಾರ್ಲಿ’ ಸಿನಿಮಾದ ಪೇಯ್ಡ್​ ಪ್ರೀಮಿಯರ್​ ಆಗಿದೆ. ಎಲ್ಲ ಕಡೆ ಹೌಸ್​ ಫುಲ್​ ಪ್ರದರ್ಶನ ಆಗಿರುವುದು ವಿಶೇಷ. ಚಿತ್ರ ನೋಡಿದ ಪ್ರತಿಯೊಬ್ಬರೂ ಎಮೋಷನಲ್​ ಆಗಿ ಪ್ರತಿಕ್ರಿಯಿಸಿದ್ದಾರೆ. ಮಕ್ಕಳಿಗೆ ಈ ಸಿನಿಮಾ ಹೆಚ್ಚು ಇಷ್ಟ ಆಗಿದೆ. ಫ್ಯಾಮಿಲಿ ಪ್ರೇಕ್ಷಕರು ಈ ಚಿತ್ರಕ್ಕೆ ಫುಲ್​ ಮಾರ್ಕ್ಸ್​ ನೀಡಿದ್ದಾರೆ. ಈ ಸಿನಿಮಾದಲ್ಲಿ ದಾನಿಶ್​ ಶೇಠ್​, ರಾಜ್​ ಬಿ. ಶೆಟ್ಟಿ, ಬಾಬಿ ಸಿಂಹ, ಸಂಗೀತಾ ಶೃಂಗೇರಿ ಮುಂತಾದವರು ನಟಿಸಿದ್ದಾರೆ.

ರಕ್ಷಿತ್​ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಕೂಡ ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕೆ ಹೇಮಂತ್​ ರಾವ್​ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾದ ಹೊಸ ಪೋಸ್ಟರ್​ ರಿಲೀಸ್​ ಆಗಿ ಗಮನ ಸೆಳೆದಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:47 am, Mon, 6 June 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ