ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ

Rakshit Shetty Birthday: ‘ತುಗ್ಲಕ್’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಒಟ್ಟಾಗಿ ನಟಿಸಿದ್ದರು. ರಕ್ಷಿತ್ ಶೆಟ್ಟಿ ಅವರಿಗೆ ಸಿನಿಮಾ ಮೇಲೆ ನಿಜವಾದ ಪ್ರೀತಿ ಇದೆ ಎಂಬುದು ಆ ಸಿನಿಮಾ ಸೋತಾಗ ರಿಷಬ್​​ಗೆ ಗೊತ್ತಾಗಿತ್ತು.

ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ
ರಕ್ಷಿತ್ ಶೆಟ್ಟಿ-ರಿಷಬ್ ಶೆಟ್ಟಿ
Follow us
ರಾಜೇಶ್ ದುಗ್ಗುಮನೆ
|

Updated on: Jun 06, 2023 | 7:37 AM

ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ (Rishab Shetty) ಒಟ್ಟಿಗೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಚಿತ್ರರಂಗದಲ್ಲಿ ಇಬ್ಬರೂ ಸಾಕಷ್ಟು ಬೆಳೆದಿದ್ದಾರೆ. 2022ರಲ್ಲಿ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾ ಮೂಲಕ ಗೆದ್ದರೆ, ರಿಷಬ್ ಶೆಟ್ಟಿ ಅವರು ‘ಕಾಂತಾರ’ (Kantara Movie) ಮೂಲಕ ದೊಡ್ಡ ಗೆಲುವು ಕಂಡರು. ಈಗ ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇವರ ಮಧ್ಯೆ ತುಂಬಾ ಹಳೆಯ ಫ್ರೆಂಡ್​ಶಿಪ್ ಇದೆ. ಈ ಬಗ್ಗೆ ರಿಷಬ್ ಶೆಟ್ಟಿ ಅವರು ಈ ಮೊದಲು ಮಾತನಾಡಿದ್ದರು.

ರಕ್ಷಿತ್ ಶೆಟ್ಟಿ ಅವರನ್ನು ರಿಷಬ್ ಮೊದಲು ನೋಡಿದಾಗ ಬೇರೆಯದೇ ಅಭಿಪ್ರಾಯ ಹೊಂದಿದ್ದರು. ‘ಶ್ರೀಮಂತರ ಮನೆಯ ಮಕ್ಕಳು. ಇವರಿಗೆಲ್ಲ ಸಿನಿಮಾ ಮೇಲೆ ಪ್ರೀತಿ ಇರುವುದಿಲ್ಲ’ ಎಂದು ಭಾವಿಸಿದ್ದರು. ‘ತುಗ್ಲಕ್’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಒಟ್ಟಾಗಿ ನಟಿಸಿದ್ದರು. ರಕ್ಷಿತ್ ಶೆಟ್ಟಿ ಅವರಿಗೆ ಸಿನಿಮಾ ಮೇಲೆ ನಿಜವಾದ ಪ್ರೀತಿ ಇದೆ ಎಂಬುದು ಆ ಸಿನಿಮಾ ಸೋತಾಗ ರಿಷಬ್​​ಗೆ ಗೊತ್ತಾಗಿತ್ತು.

‘ತ್ರಿಭುವನ್ ಥಿಯೇಟರ್​ ಮೆಟ್ಟಿಲ ಮೇಲೆ ರಕ್ಷಿತ್ ಕೂತಿದ್ದ. ಆತನಿಗೆ ಸಿನಿಮಾ ಸೋತ ನೋವಿತ್ತು. ಆಗ ನನಗೆ ಅನಿಸಿದ್ದು ಈತ ಏನೋ ಮಾಡ್ತಾನೆ ಎಂದು. ರಿಕ್ಕಿ ಸಿನಿಮಾಗೆ ಈತ ಸೂಕ್ತ ಎಂದು ಅನಿಸಿತು. ಇಬ್ಬರೂ ರಿಕ್ಕಿ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದೆವು’ ಎಂದು ರಿಷಬ್ ಅವರು ‘ಗೋಲ್ಡನ್ ಗ್ಯಾಂಗ್’ ವೇದಿಕೆ ಮೇಲೆ ಹೇಳಿಕೊಂಡಿದ್ದರು.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ ಜನ್ಮದಿನ: ಈಗ ‘ಸಿಂಪಲ್​ ಸ್ಟಾರ್​’ ಸಂಪೂರ್ಣ ಗಮನ ಇರೋದು ಯಾವ ಚಿತ್ರದ ಮೇಲೆ?

‘ರಿಕ್ಕಿ’ ರಿಷಬ್ ಶೆಟ್ಟಿ ನಿರ್ದೇಶನದ ಮೊದಲ ಸಿನಿಮಾ. ಇದಾದ ಬಳಿಕ ರಿಷಬ್ ನಿರ್ದೇಶನದ, ರಕ್ಷಿತ್ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು. ಇವರ ಮಧ್ಯೆ ಈಗಲೂ ಒಳ್ಳೆಯ ಫ್ರೆಂಡ್​ಶಿಪ್ ಇದೆ.

ರಕ್ಷಿತ್ ಜನ್ಮದಿನ:

ರಕ್ಷಿತ್ ಶೆಟ್ಟಿ ಅವರಿಗೆ ಇಂದು (ಜೂನ್ 6) ಜನ್ಮದಿನದ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರಿಟಿಗಳು ಹಾಗೂ ಫ್ಯಾನ್ಸ್ ರಕ್ಷಿತ್​ಗೆ ವಿಶ್ ಮಾಡುತ್ತಿದ್ದಾರೆ. ಅವರ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಕುರಿತು ಇಂದು ಹೊಸ ಅಪ್​ಡೇಟ್ ಸಿಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ