AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್

ನಟ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಗೆಳೆಯ ರಿಷಬ್ ಶೆಟ್ಟಿ ಮಾಡಿದ ವಿಭಿನ್ನ ವಿಶ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರ ನಡುವೆ ಮನಸ್ತಾಪದ ವದಂತಿಗಳಿಗೆ ರಿಷಬ್ ಪೋಸ್ಟ್ ಪೂರ್ಣವಿರಾಮ ಇಟ್ಟಿದೆ. ಅಲ್ಲದೆ, ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಅಪ್‌ಡೇಟ್ ಬಗ್ಗೆಯೂ ಸುಳಿವು ನೀಡಿದ್ದಾರೆ.

ರಕ್ಷಿತ್ ಜನ್ಮದಿನಕ್ಕೆ ರಿಷಬ್ ಶೆಟ್ಟಿ ಕಡೆಯಿಂದ ದೊಡ್ಡ ಅಪ್​​ಡೇಟ್
ರಿಷಬ್-ರಕ್ಷಿತಾ
ರಾಜೇಶ್ ದುಗ್ಗುಮನೆ
|

Updated on: Jun 06, 2026 | 11:25 AM

Share

ಸ್ಯಾಂಡಲ್‌ವುಡ್‌ನ ನಟ, ನಿರ್ದೇಶಕ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಇಂದು (ಜೂನ್ 6) ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ದಿನದಂದು ಅವರ ಆತ್ಮೀಯ ಗೆಳೆಯ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಭಿನ್ನವಾಗಿ ವಿಶ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲದೆ, ಕಳೆದ ಕೆಲವು ದಿನಗಳಿಂದ ಇವರಿಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎಂದು ಹರಿದಾಡುತ್ತಿದ್ದ ಎಲ್ಲಾ ವದಂತಿಗಳಿಗೂ ರಿಷಬ್ ತಮ್ಮ ಒಂದೇ ಒಂದು ಪೋಸ್ಟ್ ಮೂಲಕ ಪೂರ್ಣವಿರಾಮ ಇಟ್ಟಿದ್ದಾರೆ.

ಮನಸ್ತಾಪದ ಸುದ್ದಿ ಸುಳ್ಳು ಮಾಡಿದ ರಿಷಬ್:

ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚಿನ ಸ್ನೇಹ ಹೊಂದಿರುವ ಈ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಮಾತುಗಳು ಗಾಂಧಿನಗರದ ತುಂಬೆಲ್ಲಾ ಕೇಳಿಬರುತ್ತಿದ್ದವು. ಆದರೆ ಇಂದು ರಕ್ಷಿತ್ ಹುಟ್ಟುಹಬ್ಬಕ್ಕೆ ಶುಭ ಕೋರಿರುವ ರಿಷಬ್ ಶೆಟ್ಟಿ, ಹಳೆಯ ಸುಂದರ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ.

‘ಕಿರಿಕ್ ಪಾರ್ಟಿ’ ಸೆಟ್​​ನನಲ್ಲಿ ತೆಗೆದ ಫೋಟೋ ಇದಾಗಿದೆ. ಇಬ್ಬರೂ ಮುಗುಳ್ನಗುತ್ತಾ ಇದ್ದಾರೆ. ‘ಬಂದು ಹೋಗುವ ಜನರ ಮಧ್ಯೆ ಈ ಗೆಳೆಯ ಶಾಶ್ವತ ಅಧ್ಯಾಯವಾಗಿದ್ದಾನೆ. ಹ್ಯಾಪಿ ಬರ್ತ್ಡೇ ಮಗ ರಕ್ಷಿತ್ ಶೆಟ್ಟಿ’ ಎಂದು ಬರೆಯುವ ಮೂಲಕ ತಮ್ಮ ನಡುವಿನ ಅಪೂರ್ವ ಸ್ನೇಹವನ್ನು ಜಗತ್ತಿಗೆ ಸಾರಿದ್ದಾರೆ. ಹೊಸ ಸಿನಿಮಾ ಅಪ್‌ಡೇಟ್

ರಕ್ಷಿತ್ ಶೆಟ್ಟಿ ಅವರ ಮುಂದಿನ ಹೊಸ ಸಿನಿಮಾ ಅನೌನ್ಸ್​​ಮೆಂಟ್ ಆಗಿ ಸಾಕಷ್ಟು ಸಮಯ ಕಳೆದಿದೆ. ಆದರೆ, ಈ ಬಗ್ಗೆ ನಂತರ ಅಪ್​​ಡೇಟ್ ಸಿಕ್ಕಿಲ್ಲ. ಅಭಿಮಾನಿಗಳ ಪ್ರಶ್ನೆಗಳಿಗೂ ಈಗ ರಿಷಬ್ ಶೆಟ್ಟಿ ಅವರೇ ಉತ್ತರ ನೀಡಿದ್ದಾರೆ. ‘ಮೊನ್ನೆ ತಾನೇ ಭೇಟಿ ಮಾಡಿ ಬಂದೆ. ಅವನು ಸದ್ಯದಲ್ಲೇ ಮರಳಿ ಬರಲಿದ್ದಾನೆ’ ಎಂದು ರಿಷಬ್ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಪೆದ್ದಿ’ ಸಿನಿಮಾ ಟ್ರೈಲರ್ ನೋಡಿ ರಿಷಬ್ ಶೆಟ್ಟಿ ಹೇಳಿದ್ದು ಹೀಗೆ

ರಿಷಬ್ ಅವರ ಈ ಲೇಟೆಸ್ಟ್ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಸಾಲುಗಳು ರಕ್ಷಿತ್ ಅಭಿಮಾನಿಗಳಲ್ಲಿ ಹೊಸ ಜೋಶ್ ತುಂಬಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!