Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆದಿದೆ.

Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 04, 2023 | 7:36 AM

ರಕ್ಷಿತ್ ಶೆಟ್ಟಿ (Rakshit Shetty) ಒಡೆತನದ ‘ಪರಂವಃ’ ಸ್ಟುಡಿಯೋಸ್ ಮೂಲಕ ಹಲವು ಹೊಸ ಪ್ರತಿಭೆಗಳಿಗೆ ರಕ್ಷಿತ್ ಶೆಟ್ಟಿ ಅವಕಾಶ ನೀಡಿದ್ದಾರೆ. ಕಳೆದ ವರ್ಷ ಈ ಬ್ಯಾನರ್​ ಅಡಿಯಲ್ಲಿ ಮೂಡಿಬಂದ ‘777 ಚಾರ್ಲಿ’ (777 Charlie) ಚಿತ್ರ ಸೂಪರ್ ಹಿಟ್ ಆಯಿತು. ಈ ಸಿನಿಮಾ ನೋಡಿ ಸಿನಿಪ್ರಿಯರು ಇಷ್ಟಪಟ್ಟರು. ಈಗ ರಕ್ಷಿತ್ ಶೆಟ್ಟಿ ಅವರು ‘ಪರಂವಃ’ ಸ್ಟುಡಿಯೋಸ್ ಮೂಲಕ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ರಿಲೀಸ್ ಮಾಡಲು ಮುಂದಾಗಿದ್ದಾರೆ. ಹಾಗಂತ ಇದು ವದಂತಿ ಅಲ್ಲ. ಸ್ವತಃ ‘ಪರಂವಃ’ ಸ್ಟುಡಿಯೋಸ್ ಮೂಲಕ ಈ ವಿಚಾರ ಘೋಷಣೆ ಆಗಿದೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್​​ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಆಗಿದೆ. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆದಿದೆ. ಇವರ ಐಡಿಯಾಗಳನ್ನು ನೋಡಿ ಪುನೀತ್ ರಾಜ್​ಕುಮಾರ್, ಸುದೀಪ್, ರಕ್ಷಿತ್ ಶೆಟ್ಟಿ, ರಮ್ಯಾ, ಸಂಗೀತ ನಿರ್ದೇಶಕ ಅಜನೀಶ್​ ಲೋಕನಾಥ್ ಮೊದಲಾದವರು ಪ್ರಮೋಷನ್ ವಿಡಿಯೋಗಳಲ್ಲಿ ಭಾಗಿ ಆಗಿದ್ದರು. ಈಗ ರಕ್ಷಿತ್ ಅವರು ಈ ಚಿತ್ರವನ್ನು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ.

ಪರಂವಃ ಸ್ಟುಡಿಯೋಸ್ ಮೂಲಕ ರಿಲೀಸ್ ಆದ ಬಹುತೇಕ ಎಲ್ಲ ಚಿತ್ರಗಳು ಹೊಸತನವನ್ನು ಹೊಂದಿವೆ. ರಕ್ಷಿತ್ ಶೆಟ್ಟಿ ಅವರು ಈ ಚಿತ್ರವನ್ನು ಇಷ್ಟಪಟ್ಟು ರಿಲೀಸ್ ಮಾಡಲು ಮುಂದೆ ಬಂದಿದ್ದಾರೆ ಎಂದರೆ ಸಿನಿಮಾದಲ್ಲಿ ಏನೋ ವಿಶೇಷತೆ ಇದೆ ಎಂದು ಸಿನಿಪ್ರಿಯರು ಊಹಿಸುತ್ತಿದ್ದಾರೆ. ‘ನಮ್ಮ ತುಂಟಾಟವನ್ನು ಪ್ರಸ್ತುತಪಡಿಸುತ್ತಿರುವ ಪರಂವಃ ಸ್ಟುಡಿಯೋಸ್​ಗೆ ಧನ್ಯವಾದ’ ಎಂದು ‘ಹಾಸ್ಟೆಲ್ ಹುಡುಗರು’ ತಂಡದವರು ಪೋಸ್ಟ್ ಮಾಡಿದ್ದಾರೆ. ಚಿತ್ರದ ರಿಲೀಸ್ ದಿನಾಂಕ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಇದನ್ನೂ ಓದಿ
Image
ಮದುವೆ ಅಲ್ಲ, ಸಿನಿಮಾ ಪ್ರಮೋಷನ್ ಗಿಮಿಕ್​? ಪವಿತ್ರಾ​-ನರೇಶ್ ಕಿಸ್ಸಿಂಗ್ ವಿಡಿಯೋ ಬಗ್ಗೆ ಅನುಮಾನ
Image
Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ
Image
ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ

ಇದನ್ನೂ ಓದಿ: ಕನ್ನಡ ಚಿತ್ರರಂಗದಿಂದ ರಶ್ಮಿಕಾ ಮಂದಣ್ಣ ಬ್ಯಾನ್? ಟಾಲಿವುಡ್​ ಅಂಗಳದಲ್ಲಿ ಹೀಗೊಂದು ಸುದ್ದಿ

ರಕ್ಷಿತ್ ಶೆಟ್ಟಿ ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ರಿಚರ್ಡ್​ ಆಂಟನಿ’ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸದಲ್ಲಿ ಅವರು ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ