ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ

‘ಮಿಥ್ಯ' ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಸುಮಂತ್ ಭಟ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪುಟ್ಟ ಬಾಲಕನ ತಂದೆ-ತಾಯಿ ನಿಧನ ಹೊಂದುತ್ತಾರೆ. ಅವರ ನೆನಪುಗಳಿಂದ ಹೊರಬರಲಾರದ ಈ ಬಾಲಕ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಇದು ಚಿತ್ರದ ಕಥೆ.

ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ; ‘ಮಿಥ್ಯ’ ಚಿತ್ರಕ್ಕಿದೆ ಭಿನ್ನ ಕಥೆ
ರಕ್ಷಿತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 10, 2022 | 5:59 PM

ರಕ್ಷಿತ್ ಶೆಟ್ಟಿ (Rakshit Shetty) ಅವರು ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಭೇಷ್ ಎನಿಸಿಕೊಂಡಿದ್ದಾರೆ. ನಟನೆಯ ಜತೆಗೆ ಹೊಸ ಹೊಸ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವರ ನಿರ್ಮಾಣ ಸಂಸ್ಥೆ ಪರಂವಃ ಸ್ಟುಡಿಯೋಸ್ ಮೂಲಕ ಅವಕಾಶ ನೀಡುತ್ತಿದ್ದಾರೆ. ಈಗ ಅವರು ‘ಮಿಥ್ಯ’ (Mithya Movie)ಹೆಸರಿನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. 11 ವರ್ಷದ ಬಾಲಕನ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

‘ಮಿಥ್ಯ’ ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಸುಮಂತ್ ಭಟ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೊದಲ ಚಿತ್ರವನ್ನು ನಿರ್ದೇಶನ ಮಾಡುವಾಗ ಬಹುತೇಕರು ಪ್ರೀತಿ-ಪ್ರೇಮದ ಕಥೆ ಇಟ್ಟುಕೊಂಡು ಬರುತ್ತಾರೆ. ಆದರೆ, ಸುಮಂತ್ ಅವರು ಹಳೆಯ ತಂತ್ರಕ್ಕೆ ಜೋತುಬೀಳದೆ ಮೊದಲ ಪ್ರಯತ್ನದಲ್ಲೇ ಅವರು 11 ವರ್ಷದ ಬಾಲಕನ ಕಥೆಯನ್ನು ಹೇಳ ಹೊರಟಿದ್ದಾರೆ. ಬಾಲಕನ ನೋವಿನ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ
Image
‘777 ಚಾರ್ಲಿ’ ಸಿನಿಮಾದಲ್ಲಿ ಡಿಲೀಟ್ ಮಾಡಿದ್ದ ದೃಶ್ಯವನ್ನು ರಿಲೀಸ್ ಮಾಡಿದ ಟೀಂ; ಇಲ್ಲಿದೆ ವಿಡಿಯೋ
Image
Rakshit Shetty: 150 ಕೋಟಿ ರೂ. ಗಳಿಸಿದ ‘777 ಚಾರ್ಲಿ’; ಪ್ರಾಣಿಗಳ ರಕ್ಷಣೆಗೆ ಶೇ.5ರಷ್ಟು ಹಣ ದೇಣಿಗೆ ನೀಡಿದ ರಕ್ಷಿತ್​ ಶೆಟ್ಟಿ
Image
Rakshit Shetty: ‘777 ಚಾರ್ಲಿ’ ಸಿನಿಮಾಗೆ ಸೀಕ್ವೆಲ್​; ಪ್ಲ್ಯಾನ್ ಬಗ್ಗೆ ಮಾಹಿತಿ ನೀಡಿದ ರಕ್ಷಿತ್ ಶೆಟ್ಟಿ

ಪುಟ್ಟ ಬಾಲಕನ ತಂದೆ-ತಾಯಿ ನಿಧನ ಹೊಂದುತ್ತಾರೆ. ಅವರ ನೆನಪುಗಳಿಂದ ಹೊರಬರಲಾರದ ಈ ಬಾಲಕ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ಈ ‘ಮಿಥ್ಯ’. ಕಥೆಯ ಒಂದೆಳೆ ಕೇಳಿ ಸಿನಿಪ್ರಿಯರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಕೊಂಡಿದೆ.

ಸುಮಂತ್ ಭಟ್ ಅವರು ವೃತ್ತಿಯಲ್ಲಿ ಇಂಜಿನಿಯರ್​ ಆಗಿದ್ದರು. ಆದರೆ, ಅವರಿಗೆ ಬಣ್ಣದ ಲೋಕದ ಮೇಲೆ ಎಲ್ಲಿಲ್ಲದ ಆಸಕ್ತಿ. ಈ ಕಾರಣಕ್ಕೆ ಅವರು ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಪರಂವಃ ಸ್ಟುಡಿಯೋಸ್​ ‘ಏಕಂ’ ಹೆಸರಿನ ವೆಬ್​ಸೀರೀಸ್ ನಿರ್ಮಾಣ ಮಾಡಿತ್ತು. ಏಳು ಎಪಿಸೋಡ್​ಗಳ ಪೈಕಿ ನಾಲ್ಕು ಎಪಿಸೋಡ್​ಗಳನ್ನು ಸುಮಂತ್ ಅವರೇ ಬರೆದು ನಿರ್ದೇಶನ ಮಾಡಿದ್ದರು. ಈಗ ಅವರು ‘ಮಿಥ್ಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ ‘ಮಿಥ್ಯ’ ಚಿತ್ರದಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಅವನೊಂದಿಗೆ ಪ್ರಕಾಶ್​ ತುಮ್ಮಿನಾಡು, ರೂಪಾ ವರ್ಕಾಡಿ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಚಾರ್ಲಿ ಜತೆ ಬೈಕ್​ನಲ್ಲಿ ಬಂದ ರಕ್ಷಿತ್ ಶೆಟ್ಟಿ; ಶ್ವಾನಕ್ಕೂ ಪುಟಾಣಿ ಹೆಲ್ಮೆಟ್

‘ಮಿಥ್ಯ’ ಚಿತ್ರಕ್ಕೆ ಉದಿತ್​ ಖುರಾನ ಅವರ ಛಾಯಾಗ್ರಹಣವಿದೆ. ಮಿಥುನ್​ ಮುಕುಂದನ್​ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್