Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

Rakshit Shetty | Ramya: ರಮ್ಯಾ ಕುರಿತ ಪ್ರಶ್ನೆಗಳಿಗೆ ರಕ್ಷಿತ್​ ಶೆಟ್ಟಿ ಅವರು ಉತ್ತರ ನೀಡಿದ್ದಾರೆ. ಹರಿದಾಡುತ್ತಿರುವ ಹಲವು ಅಂತೆ-ಕಂತೆಗಳಿಗೆ ‘ಸಿಂಪಲ್​​ ಸ್ಟಾರ್​’ ಪ್ರತಿಕ್ರಿಯಿಸಿದ್ದಾರೆ.

Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ
ರಮ್ಯಾ, ರಕ್ಷಿತ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: May 13, 2022 | 1:11 PM

ನಟ ರಕ್ಷಿತ್​ ಶೆಟ್ಟಿ (Rakshit Shetty) ಅವರು ನಿರ್ದೇಶಕನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಸಕ್ರಿಯರಾಗಿದ್ದಾರೆ. ಚಿತ್ರರಂಗದ ಹಲವು ವಿಭಾಗಗಳಲ್ಲಿ ಅವರು ತೊಡಗಿಕೊಂಡಿದ್ದಾರೆ. ಅವರು ನಿರ್ಮಾಣ ಮಾಡಿರುವ ‘ಸಕುಟುಂಬ ಸಮೇತ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಮೇ 20ರಂದು ಈ ಚಿತ್ರ ರಿಲೀಸ್​ ಆಗಲಿದೆ. ‘ಸಕುಟುಂಬ ಸಮೇತ’ ಚಿತ್ರದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ‘ಟಿವಿ9 ಕನ್ನಡ’ ಜೊತೆ ಮಾತನಾಡಿದ ರಕ್ಷಿತ್​ ಶೆಟ್ಟಿ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ವಿಶೇಷ ಎಂದರೆ ಅವರು ನಟಿ ರಮ್ಯಾ (Ramya Divya Spandana) ಕುರಿತಾದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ರಮ್ಯಾ ಮತ್ತು ರಕ್ಷಿತ್ ಶೆಟ್ಟಿ ಅವರು ಒಟ್ಟಿಗೆ ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಬಯಕೆ. ಅಷ್ಟೇ ಅಲ್ಲ, ಈ ಜೋಡಿ ಮದುವೆ (Ramya Marriage) ಕೂಡ ಆಗಲಿ ಎಂದು ಕೆಲವರು ಆಸೆ ಪಡುತ್ತಿದ್ದಾರೆ. ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಅನೇಕ ಕಮೆಂಟ್​ಗಳು ಕಾಣಿಸಿದ್ದುಂಟು. ಆ ಬಗ್ಗೆ ಈಗ ರಕ್ಷಿತ್​ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ರಮ್ಯಾ ಅವರ ಬಗ್ಗೆ ಎಲ್ಲರಂತೆ ರಕ್ಷಿತ್​ ಶೆಟ್ಟಿ ಅವರಿಗೂ ಅಭಿಮಾನ ಇದೆ. ‘ನಾನು ರಮ್ಯಾ ಅವರನ್ನು ಎಂದಿಗೂ ಭೇಟಿ ಮಾಡಿಲ್ಲ. ಮದುವೆ, ಲವ್​ ಇತ್ಯಾದಿ ಎಲ್ಲ ಬರೀ ಗಾಸಿಪ್​. ಚಿತ್ರರಂಗಕ್ಕೆ ಬಂದಾಗಿನಿಂದಲೂ ನಿನ್ನ ಕ್ರಶ್ ಯಾರು ಅಂತ ಕೇಳಿದರೆ ನಾನು ರಮ್ಯಾ ಅಂತಾನೇ ಹೇಳ್ತಾ ಇರೋದು. ಪ್ರತಿ ಬಾರಿ ಅವರು ನನ್ನ ಕೆಲಸವನ್ನು ಪ್ರಶಂಸಿಸುತ್ತಾರೆ. ಅದು ಅವರ ಒಳ್ಳೆಯ ಗುಣ’ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

ರಕ್ಷಿತ್​ ಶೆಟ್ಟಿ ಮತ್ತು ರಮ್ಯಾ ಅವರು ಜೊತೆಯಾಗಿ ಸಿನಿಮಾ ಮಾಡಲಿ ಎಂಬ ಫ್ಯಾನ್ಸ್​ ಬಯಕೆಗೆ ರಕ್ಷಿತ್​ ಈಗ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ‘ಉಳಿದವರು ಕಂಡಂತೆ’ ಸಿನಿಮಾಗೆ ರಮ್ಯಾ ಅವರನ್ನು ಅಪ್ರೋಚ್​ ಮಾಡಿದ್ದೆ. ಕಥೆ ಕೇಳಿದ ಬಳಿಕ ಅರ್ಥ ಆಗಿಲ್ಲ ಅಂತ ಅವರು ಹೇಳಿದ್ದರು. ಅದು ಬಿಡಿ, ಸಿನಿಮಾ ರಿಲೀಸ್​ ಆದಮೇಲೆ ಸುಮಾರು ಜನರಿಗೆ ಅರ್ಥ ಆಗಲಿಲ್ಲ. ಸದ್ಯಕ್ಕೆ ರಮ್ಯಾ ಜೊತೆ ಕೆಲಸ ಮಾಡುವ ಸಾಧ್ಯತೆ ಕಡಿಮೆ. ನಾನು ಬರೆಯುತ್ತಿರುವ ಸ್ಕ್ರಿಪ್ಟ್​ನಲ್ಲಿ ಆ ಥರ ಇಲ್ಲ. ಆದರೆ ಖಂಡಿತವಾಗಿ ಅವರ ಜೊತೆ ಕೆಲಸ ಮಾಡಲು ನಾನು ಇಷ್ಟಪಡುತ್ತೇನೆ’ ಎಂದು ರಕ್ಷಿತ್​ ಶೆಟ್ಟಿ ಹೇಳಿದ್ದಾರೆ.

ಇದನ್ನೂ ಓದಿ
Image
Old Monk: ‘ಓಲ್ಡ್ ಮಾಂಕ್’ಗೆ ರಮ್ಯಾ ಶಹಬ್ಬಾಸ್​ಗಿರಿ; ಶ್ರೀನಿ ವೃತ್ತಿಜೀವನ ಸ್ಮರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ನಟಿ
Image
‘ಬ್ಲಾಂಕ್​’ ಕನ್ನಡ ಚಿತ್ರಕ್ಕೆ ರಮ್ಯಾ ಶುಭ ಹಾರೈಕೆ; ಟ್ರೇಲರ್​ ಕಂಡು ವಾವ್​ ಎಂದ ಸೆಲೆಬ್ರಿಟಿಗಳು
Image
ವಿದ್ಯಾರ್ಥಿಗಳ ನಡುವೆ ಧಾರ್ಮಿಕ ವಿಷದ ಗೋಡೆ ನಿರ್ಮಾಣ ಆಗಿದೆ: ಹಿಜಾಬ್​ ವಿವಾದಕ್ಕೆ ಕಮಲ್​ ಹಾಸನ್​, ರಮ್ಯಾ ಪ್ರತಿಕ್ರಿಯೆ​
Image
ನಟಿ ರಮ್ಯಾ ಜೊತೆಗಿರುವ ರಾಣಿ ಯಾರು? ವಾವ್​.. ಆಕಸ್ಮಿಕವಾಗಿ ಸಿಕ್ಕ ಜೀವದ ಬಗ್ಗೆ ಈ ಪರಿ ಪ್ರೀತಿ

ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇರುವಾಗಲೇ ರಮ್ಯಾ ಅವರು ರಾಜಕೀಯದ ಕಡೆಗೆ ಕಾಲಿಟ್ಟರು. ಸಂಸದೆ ಆಗಿಯೂ ಕೆಲಸ ಮಾಡಿದರು. ನಂತರ ಅವರು ರಾಜಕೀಯಕ್ಕೆ ಗುಡ್​ ಬೈ ಹೇಳಿದರು. ಇಷ್ಟೆಲ್ಲ ಆದರೂ ಅವರು ಚಿತ್ರರಂಗದ ನಂಟು ಕಡಿದುಕೊಂಡಿಲ್ಲ. ನಟನೆಯಿಂದ ದೂರ ಉಳಿದಿದ್ದರೂ ಕೂಡ ಅನೇಕ ಸಿನಿಮಾಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುತ್ತಾ ಅವರು ಗಮನ ಸೆಳೆಯುತ್ತಿದ್ದಾರೆ.

ರಮ್ಯಾ ಅವರು ಆದಷ್ಟು ಬೇಗ ನಟನೆಗೆ ಮರಳಬೇಕು ಎಂದು ಫ್ಯಾನ್ಸ್​ ಆಸೆ ಪಡುತ್ತಿದ್ದಾರೆ. ಶೀಘ್ರದಲ್ಲೇ ರಮ್ಯಾ ಈ ಬಗ್ಗೆ ಒಂದು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ನಿರೀಕ್ಷೆ ಇದೆ. ಅವರು ಕಮ್​ಬ್ಯಾಕ್​ ಮಾಡಲಿರುವ ಪ್ರಾಜೆಕ್ಟ್​ ಯಾವ ರೀತಿ ಇರಲಿದೆ ಎಂದು ತಿಳಿದುಕೊಳ್ಳಲು ಅವರ ಅಭಿಮಾನಿ ಬಳಗ ತುದಿಗಾಲಿನಲ್ಲಿ ನಿಂತು ಕಾಯುತ್ತಿದೆ. ಖಾಸಗಿ ಮಾಧ್ಯಮವೊಂದು ರಕ್ಷಿತ್​ ಶೆಟ್ಟಿ ಜೊತೆ ನಡೆಸಿದ ಸಂದರ್ಶನದ ತುಣುಕನ್ನು ರಮ್ಯಾ ಅವರು ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು. ರಕ್ಷಿತ್​ ಶೆಟ್ಟಿ ಜೊತೆ ಸಿನಿಮಾ ಮಾಡಲು ತಮಗೂ ಆಸಕ್ತಿ ಇದೆ ಎಂಬುದನ್ನು ಅವರು ಈ ಮೂಲಕ ಸೂಚಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ